Homeಮುಖಪುಟ10 ಕೊಟಿ ದಂಡ ಪಾವತಿಸಿದ ಜಯಲಲಿತ ಆಪ್ತೆ ಶಶಿಕಲಾ; ಜನವರಿಯಲ್ಲಿ ಬಿಡುಗಡೆ ಸಾಧ್ಯತೆ!

10 ಕೊಟಿ ದಂಡ ಪಾವತಿಸಿದ ಜಯಲಲಿತ ಆಪ್ತೆ ಶಶಿಕಲಾ; ಜನವರಿಯಲ್ಲಿ ಬಿಡುಗಡೆ ಸಾಧ್ಯತೆ!

ಶಶಿಕಲಾ ಮೇಲೆ ಜಯಲಲಿತಾ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ತಮ್ಮ ಆದಾಯಕ್ಕಿಂತ ಹೆಚ್ಚಿನ ಸಂಪತ್ತನ್ನು ಸಂಪಾದಿಸಿದ ಆರೋಪವಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಶಿಕಲಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು.

- Advertisement -
- Advertisement -

ಅನಧಿಕೃತ ಸಂಪತ್ತನ್ನು ಸಂಗ್ರಹಿಸಿದ್ದಕ್ಕಾಗಿ ಬೆಂಗಳೂರಿನ ಜೈಲಿನಲ್ಲಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತ ಅವರ ಆಪ್ತೆ ಶಶಿಕಲಾ, ಇದೀಗ ನ್ಯಾಯಾಲಯದ ಆದೇಶದಂತೆ 10 ಕೋಟಿ ದಂಡ ಪಾವತಿಸಿ ಬಿಡುಗಡೆಗೆ ಸಿದ್ಧವಾಗುತ್ತಿದ್ದಾರೆ.

ಈಗ ತಮಿಳುನಾಡಿನ ರಾಜಕೀಯದಲ್ಲಿ ಪ್ರಮುಖ ಪಾತ್ರವಹಿಸಬಹುದು ಎನ್ನಲಾಗುತ್ತಿರುವ ಶಶಿಕಲಾ ಮೇಲೆ, ಜಯಲಲಿತಾ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮ್ಮ ಆದಾಯಕ್ಕಿಂತ ಹೆಚ್ಚಿನ ಸಂಪತ್ತನ್ನು ಸಂಪಾದಿಸಿದ ಆರೋಪವಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ 3 ವರ್ಷ 8 ತಿಂಗಳಿನಿಂದ ಶಿಕ್ಷೆ ಅನುಭವಿಸುತ್ತಿದ್ದರು.

ಇಂದು ಶಶಿಕಲಾ ಅವರ ಕಾನೂನು ಸಲಹಾ ತಂಡವು ಅವರು 10 ಕೋಟಿ ರೂ.ಗಳನ್ನು ಪಾವತಿಸಿದ್ದು, ವಕೀಲ ರಾಜಾ ಸೆಂದೂರ್ ಪಾಂಡಿಯನ್ ಈ ಬಗ್ಗೆ ವಿವರ ನೀಡಿದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನು ಓದಿ: ಅಜಿತ್ ಪವಾರ್‌ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ, ಇದು ಖಂಡನೀಯ- ಸಿಎಂ ಯಡಿಯೂರಪ್ಪ

ಈ ಪ್ರಕ್ರಿಯೆಯೆಲ್ಲಾ ಸರಾಗವಾಗಿ ಮುಗಿದರೆ ಜನವರಿ ತಿಂಗಳಿನಲ್ಲಿ ಇವರು ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ದಂಡವನ್ನು ಪಾವತಿಸದಿದ್ದಿದ್ದರೆ, ಇನ್ನೂ 13 ತಿಂಗಳು ಜೈಲುವಾಸ ಅನುಭವಿಸಬೇಕಾಗಿತ್ತು.

ಈ ಪ್ರಕರಣದಲ್ಲಿ ಜಯಲಲಿತಾ, ಶಶಿಕಲಾ ಸೇರಿದಂತೆ ಇಳವರಸಿ ಹಾಗೂ ಸುಧಾಕರನ್ ಸಹ ಆರೋಪಿಗಳಾಗಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಅಪರಾದಿಗಳಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಸೇರಿದಂತೆ (ಜಯಲಲಿತಾಗೆ 100 ಕೋಟಿ ರೂ.) ಮೂವರಿಗೆ ತಲಾ 10 ಕೋಟಿ ರೂಪಾಯಿ ದಂಡ ವಿಧಿಸಿ  2017 ರ ಫೆ. 15ರಂದು ಬೆಂಗಳೂರಿನ ವಿಶೇಷ ನ್ಯಾಯಾಲಯವು ತೀರ್ಪು ನೀಡಿತ್ತು.


ಇದನ್ನು ಓದಿ: ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿವಾಹವಾದ ಕಾರಣಕ್ಕೆ ಸೇನಾ ಮಹಿಳಾ ಅಧಿಕಾರಿಯ ವಜಾ; ‘ಲಿಂಗ ತಾರತಮ್ಯ’ ಎಂದ ಸುಪ್ರೀಂಕೋರ್ಟ್‌

0
ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಖಾಯಂ ನಿಯೋಜಿತ ಅಧಿಕಾರಿಯನ್ನು ಮದುವೆ ಮಾಡಿಕೊಂಡಿದ್ದರಿಂದ ವಜಾ ಮಾಡಿರುವುದು ‘ಸ್ವೇಚ್ಛೆಯ’ ಹಾಗೂ ‘ಸೂಕ್ಷ್ಮತೆ ಇಲ್ಲದ ಲಿಂಗ ತಾರತಮ್ಯ ಹಾಗೂ ಅಸಮಾನತೆ’ಯನ್ನು ಬಿಂಬಿಸುತ್ತದೆ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯ ಪಟ್ಟಿದೆ. ನ್ಯಾಯಮೂರ್ತಿಗ‌ಳಾದ ಸಂಜೀವ್...