Homeಕರ್ನಾಟಕಕೊಲೆ ಆರೋಪಿ, ರೌಡಿಶೀಟರ್ ಸುಹಾಸ್‌ ಹತ್ಯೆ: ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

ಕೊಲೆ ಆರೋಪಿ, ರೌಡಿಶೀಟರ್ ಸುಹಾಸ್‌ ಹತ್ಯೆ: ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

- Advertisement -
- Advertisement -

ಮಂಗಳೂರು: 2022ರ ಜುಲೈ 26ರಂದು ನಡೆದ ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಆರೋಪಿ ರೌಡಿಶೀಟರ್ ಕಾಟಿಪಳ್ಳ-ಕೋಡಿಕೆರೆ ನಿವಾಸಿ ಸುಹಾಸ್ ಶೆಟ್ಟಿ (42) ಎಂಬಾತನನ್ನು 6 ಮಂದಿಯ ತಂಡವೊಂದು ಬೆನ್ನಟ್ಟಿ ಭೀಭತ್ಸವಾಗಿ ಕೊಲೆಗೈದ ಘಟನೆ ಗುರುವಾರ ರಾತ್ರಿ ಬಜಪೆ ಕಿನ್ನಿಪದವು ಎಂಬಲ್ಲಿ ನಡೆದಿದೆ.

ಈ ಹಿಂದೆ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು. ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಬೆನ್ನಲ್ಲೇ ಮಂಗಳೂರು ನಗರದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಸೆಕ್ಷನ್‌ 163 ಜಾರಿಗೊಳಿಸಲಾಗಿದೆ.

ಫಾಝೀಲ್ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಸುಹಾಸ್, ಗುರುವಾರ ರಾತ್ರಿ ಕೆಲಸ ನಿಮಿತ್ತ ಬಜಪೆ ಕಡೆ ಕಾರಿನಲ್ಲಿ ತೆರಳುತ್ತಿದ್ದಾಗ ಕಾರು ಮತ್ತು ಒಂದು ಮೀನಿನ ಗಾಡಿಯಲ್ಲಿ 6 ಮಂದಿ ದುಷ್ಕರ್ಮಿಗಳ ಗುಂಪು ಬೆನ್ನಟ್ಟಿಕೊಂಡು ಬಂದಿದೆ. ಇದು ಸುಹಾಸ್ ಗೆ ತಿಳಿಯುತ್ತಿದ್ದಂತೆ ಆತ ಕಿನ್ನಿಪದವು ಜಂಕ್ಷನ್ ನಲ್ಲಿ ಇರುವ ಸಲೂನ್ ಒಂದಕ್ಕೆ ತನ್ನ ಕಾರನ್ನು ನುಗ್ಗಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ದುಷ್ಕರ್ಮಿಗಳು ಕೂಡಾ ಕಾರು ಮತ್ತು ಮೀನಿನ ಟೆಂಪೊವನ್ನು ಸಲೂನ್ ಒಳಗೆ ನುಗ್ಗಿಸಿದ್ದಾರೆ. ಬಳಿಕ ಸುಹಾಸ್ ನನ್ನು ಹೊರಗೆ ಎಳೆದು ಹಾಕಿ ತಲವಾರಿನಿಂದ ಭೀಕರವಾಗಿ ಕಡಿದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸುಹಾಸ್ ಶೆಟ್ಟಿ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ಕಳೆದ ವರ್ಷ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಹಾಗೂ ಶಶಾಂಕ್ ಜೊತೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ  ಎಂದು ಪೊಲೀಸರು ಹೇಳಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲೇ ಆತ ಅಸುನೀಗಿದ್ದ ಎಂದು ಮಂಗಳೂರಿನ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್  ಸುದ್ದಿಗಾರರಿಗೆ ತಿಳಿಸಿದರು.

ದಾಳಿಯ ವೇಳೆ ಸುಹಾಸ್ ಶೆಟ್ಟಿಯ ಸಹಚರನೊಬ್ಬ ಗಾಯಗೊಂಡಿದ್ದಾನೆ.  ಆತ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿಜಪೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದೇವೆ ಎಂದು ತಿಳಿಸಿದರು.

ಕೊಲೆ ಆರೋಪಿಯ ಮೃತದೇಹ ಇರುವ ನಗರದ ಎ.ಜೆ. ಆಸ್ಪತ್ರೆಯ ಬಳಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಡಿ.ವೇದವ್ಯಾಸ ಕಾಮತ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಎ.ಜೆ. ಅಸ್ಪತ್ರೆಗೆ ಭೇಟಿ ನೀಡಿದರು.

ತಂಡವಾಗಿ ಬಂದು ಹಿಂದೂ ಕಾರ್ಯಕರ್ತನನ್ನು ನಿರ್ದಿಷ್ಟವಾಗಿ ಗುರುತಿಸಿ ಹತ್ಯೆ ಮಾಡಲಾಗಿದೆ. ಇದು ಪೂರ್ವಯೋಜಿತ ಕೃತ್ಯ. ಸರಕಾರ ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು. ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸಬೇಕು ಎಂದು ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದರು.

ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ಆಗಿದೆ. ರಾಜ್ಯದಲ್ಲಿ ಹಿಂದೂಗಳಿಗೆ ಉಳಿಗಾಲ ಇಲ್ಲದ ಸ್ಥಿತಿ ಇದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ.  ಎಸ್ ಡಿಪಿಐ, ಪಿಎಫ್ ಐ ನಂತಹ ಮತಾಂಧ ಶಕ್ತಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಅವರಿಗೆ ಇನ್ನಷ್ಟು ದುಷ್ಕೃತ್ಯಕ್ಕೆ ಬೆಂಬಲಿಸಿದದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.

ದುಷ್ಕರ್ಮಿಗಳು ನಡೆಸಿದ ಭೀಕರ ಕೃತ್ಯವನ್ನು ಘಟನೆ ನಡೆದ ಎದುರು ಭಾಗದ ಕಟ್ಟಡದಿಂದ ಯಾರೋ ವಿಡಿಯೊ ಮಾಡಿದ್ದು, ಇದು ಕೆಲವೇ ಕ್ಷಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಸೆಕ್ಷನ್‌ 163 ಜಾರಿಗೊಳಿಸಿ, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023, ಸೆಕ್ಷನ್ 163, ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡಲು ಸಂಬಂಧಿಸಿದೆ. ಇದು ಸಾರ್ವಜನಿಕ ತೊಂದರೆ ಅಥವಾ ಅಪಾಯಕಾರಿ ಸಂದರ್ಭಗಳನ್ನು ತಡೆಗಟ್ಟಲು ಆದೇಶಗಳನ್ನು ಜಾರಿಗೊಳಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್‌ಗಳಿಗೆ ನೀಡುತ್ತದೆ. ಈ ವಿಭಾಗವು ಹಿಂದಿನ ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) 1973ರ ಸೆಕ್ಷನ್ 144ರ ಹೊಸ ರೂಪವಾಗಿದೆ.

 ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯನ್ನು ಖಂಡಿಸಿ ಇಂದು (ಶುಕ್ರವಾರ) ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ.

ಬಂದ್‌ಗೆ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಕರೆ ನೀಡಿವೆ. ಈ ಬಗ್ಗೆ ವಿಹೆಚ್‌ಪಿ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್‌ ಪಂಪ್‌ ವೆಲ್‌ ತಮ್ಮ ಫೇಸ್‌ಬುಕ್‌ ಪುಟದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಉದ್ರಿಕ್ತ ಗುಂಪಿನಿಂದ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿದೆ. ಮೂರು ಬಸ್ಸಿಗೆ ಕಿಡಿಗೇಡಿಗಳ ಕಲ್ಲು ತೂರಾಟದಿಂದ ಹಾನಿಯಾಗಿದೆ.

Karnataka SSLC Result 2025 | ನಾಳೆ (ಮೇ 2) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...