Homeಮುಖಪುಟಶೇಖ್ ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾದೇಶ ರಾಜತಾಂತ್ರಿಕ ಟಿಪ್ಪಣಿ - ಖಚಿತಪಡಿಸಿದ ಭಾರತ

ಶೇಖ್ ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾದೇಶ ರಾಜತಾಂತ್ರಿಕ ಟಿಪ್ಪಣಿ – ಖಚಿತಪಡಿಸಿದ ಭಾರತ

- Advertisement -
- Advertisement -

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದಿಂದ ದೇಶದ ಉಚ್ಛಾಟಿತ ಪ್ರಧಾನಿ ಶೇಖ್ ಹಸೀನಾ ಅವರ ಹಸ್ತಾಂತರ ಕೋರಿಕೆಗೆ ಸಂಬಂಧಿಸಿದ ಮೌಖಿಕ ಟಿಪ್ಪಣಿಯನ್ನು ಸ್ವೀಕರಿಸಿದೆ ಎಂದು ಭಾರತ ಸರ್ಕಾರದ ಮೂಲಗಳು ಸೋಮವಾರ ಖಚಿತಪಡಿಸಿದೆ. ಆದರೆ ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮೂಲ ಹೇಳಿದೆ.

“ಹಸ್ತಾಂತರದ ವಿನಂತಿಗೆ ಸಂಬಂಧಿಸಿದಂತೆ ನಾವು ಇಂದು ಬಾಂಗ್ಲಾದೇಶ ಹೈಕಮಿಷನ್‌ನಿಂದ ಮೌಖಿಕ ಟಿಪ್ಪಣಿಯನ್ನು ಸ್ವೀಕರಿಸಿದ್ದೇವೆ ಎಂದು ನಾವು ಖಚಿತಪಡಿಸುತ್ತೇವೆ. ಈ ಸಮಯದಲ್ಲಿ, ಈ ವಿಷಯದ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ” ಎಂದು ಮೂಲವೊಂದು ತಿಳಿಸಿದೆ ಎಂದು ಎನ್‌ಡಿಟಿವಿ ಹೇಳಿದೆ.

ಸೋಮವಾರ ಭಾರತದ ಪ್ರತಿಕ್ರಿಯೆಗೂ ಮುನ್ನ, ಬಾಂಗ್ಲಾದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ನ್ಯಾಯಾಂಗ ಪ್ರಕ್ರಿಯೆಗಾಗಿ ಬಾಂಗ್ಲಾದೇಶವು ಹಸೀನಾ ಅವರನ್ನು ಇಲ್ಲಿಗೆ ಹಿಂತಿರುಗಿಸಬೇಕು ಎಂದು ಬಯಸುತ್ತದೆ ಎಂದು ನಾವು ಭಾರತ ಸರ್ಕಾರಕ್ಕೆ ಮೌಖಿಕ ಟಿಪ್ಪಣಿ ಕಳುಹಿಸಿದ್ದೇವೆ” ಎಂದು ಹೇಳಿದ್ದರು. ಅದಾಗ್ಯೂ, ಈ ವರೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

77 ವರ್ಷದ ಹಸೀನಾ ಅವರ 16 ವರ್ಷಗಳ ಆಡಳಿತವು ವಿದ್ಯಾರ್ಥಿಗಳ ಭಾರಿ ಪ್ರತಿಭಟನೆಯ ಕಾರಣಕ್ಕೆ ಪತನಗೊಂಡಿತ್ತು. ಅದರ ನಂತರ ಅವರು ಆಗಸ್ಟ್ 5 ರಂದು ತಮ್ಮ ದೇಶವನ್ನು ತೊರೆದು ಭಾರತಕ್ಕೆ ಬಂದಿಳಿದಿದ್ದರು.

ಬಾಂಗ್ಲಾದೇಶ ಮೂಲದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ICT) ಹಸೀನಾ ಮತ್ತು ಅವರ ಹಲವಾರು ಮಾಜಿ ಕ್ಯಾಬಿನೆಟ್ ಮಂತ್ರಿಗಳು, ಸಲಹೆಗಾರರು ಮತ್ತು ಮಿಲಿಟರಿ ಮತ್ತು ನಾಗರಿಕ ಅಧಿಕಾರಿಗಳಿಗೆ “ಮಾನವೀಯತೆ ಮತ್ತು ನರಮೇಧದ ವಿರುದ್ಧದ ಅಪರಾಧಗಳಿಗಾಗಿ” ಬಂಧನ ವಾರಂಟ್ ಹೊರಡಿಸಿದೆ.

ಗೃಹ ಸಲಹೆಗಾರ ಜಹಾಂಗೀರ್ ಆಲಂ ಅವರು ಭಾರತದಿಂದ ಹೊರಹಾಕಲ್ಪಟ್ಟ ಪ್ರಧಾನಿಯನ್ನು ಹಸ್ತಾಂತರಿಸಲು ಅನುಕೂಲವಾಗುವಂತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ. ಅವರ ಹಸ್ತಾಂತರದ ಕುರಿತು ನಾವು ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಕಳುಹಿಸಿದ್ದೇವೆ. ಪ್ರಸ್ತುತ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಅವರು ಸುದ್ದಿಗಾರರಿಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಕಳೆದ ತಿಂಗಳು, ಮಧ್ಯಂತರ ಸರ್ಕಾರದ 100 ದಿನಗಳನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ಹಸೀನಾ ಅವರನ್ನು ಹಸ್ತಾಂತರಿಸುವಂತೆ ಕೋರುವುದಾಗಿ ಹೇಳಿದ್ದಾರೆ. “ನಾವು ಪ್ರತಿ ಹತ್ಯೆಯಲ್ಲಿ ನ್ಯಾಯವನ್ನು ಖಚಿತಪಡಿಸಿಕೊಳ್ಳಬೇಕು. ಉರುಳಿ ಬಿದ್ದ ನಿರಂಕುಶಾಧಿಕಾರಿ ಶೇಖ್ ಹಸೀನಾ ಅವರನ್ನು ವಾಪಸ್ ಕಳುಹಿಸುವಂತೆ ನಾವು ಭಾರತವನ್ನು ಕೇಳುತ್ತೇವೆ” ಎಂದು ಅವರು ಹೇಳಿದ್ದಾರೆ.

ಆಗಸ್ಟ್ 8 ರಂದು ಅಧಿಕಾರ ವಹಿಸಿಕೊಂಡ ಯೂನಸ್ ಅವರು, ಹಸೀನಾ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ಸೇರಿದಂತೆ ಸುಮಾರು 1,500 ಜನರು ಸಾವನ್ನಪ್ಪಿದ್ದಾರೆ ಮತ್ತು 19,931 ಇತರರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ, ಕಾನೂನು ಸಲಹೆಗಾರ ಆಸಿಫ್ ನಜ್ರುಲ್ ಅವರು ಒಪ್ಪಂದದಲ್ಲಿ ಯಾವುದೇ ನಿಬಂಧನೆಗಳನ್ನು ಉಲ್ಲೇಖಿಸಿ ಹಸೀನಾ ಅವರನ್ನು ಹಸ್ತಾಂತರಿಸಲು ಭಾರತ ನಿರಾಕರಿಸಿದರೆ ಬಾಂಗ್ಲಾದೇಶವು ಬಲವಾಗಿ ಪ್ರತಿಭಟಿಸುತ್ತದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿತ್ತು.

ಸೆಪ್ಟೆಂಬರ್‌ ವೇಳೆ ಢಾಕಾದಲ್ಲಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಯೂನುಸ್ ಅವರು, ಹಸೀನಾ ಭಾರತದಲ್ಲಿ ಕೂತು ರಾಜಕೀಯ ಟೀಕೆಗಳನ್ನು ಮಾಡುವುದು “ಸ್ನೇಹಪರವಲ್ಲದ ಗೆಸ್ಚರ್” ಎಂದು ಹೇಳಿದ್ದರು ಮತ್ತು ಬಾಂಗ್ಲಾದೇಶ ಅವರ ಹಸ್ತಾಂತರಕ್ಕೆ ವಿನಂತಿಸುವವರೆಗೂ ಎರಡೂ ದೇಶಗಳ ನಡುವಿನ ಗೊಂದಲಗಳನ್ನು ತಡೆಯಲು ಅವರು ಮೌನವಾಗಿರಬೇಕು ಎಂದು ಪ್ರತಿಪಾದಿಸಿದ್ದರು.

ಇತ್ತೀಚೆಗಷ್ಟೆ ಭಾರತದಿಂದ ಹೇಳಿಕೆ ನೀಡಿದ್ದ ಹಸೀನಾ ಅವರು, ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು “ಹತ್ಯಾಕಾಂಡ” ನಡೆಸುತ್ತಿದೆ ಮತ್ತು ಅಲ್ಪಸಂಖ್ಯಾತರನ್ನು, ಅದರಲ್ಲೂ ವಿಶೇಷವಾಗಿ ಹಿಂದೂಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಡಿಜಿಟಲ್ ಅರೆಸ್ಟ್‌ ಪ್ರಕರಣ: ₹11.8 ಕೋಟಿ ಹಣ ಕಳೆದುಕೊಂಡ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್

ಡಿಜಿಟಲ್ ಅರೆಸ್ಟ್‌ ಪ್ರಕರಣ: ₹11.8 ಕೋಟಿ ಹಣ ಕಳೆದುಕೊಂಡ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...