Homeಅಂತರಾಷ್ಟ್ರೀಯಶೇಖ್ ಹಸೀನಾ ಹಸ್ತಾಂತರಕ್ಕೆ ರಾಜತಾಂತ್ರಿಕ ಟಿಪ್ಪಣಿ ಕಳುಹಿಸಿದ ಬಾಂಗ್ಲಾದೇಶ

ಶೇಖ್ ಹಸೀನಾ ಹಸ್ತಾಂತರಕ್ಕೆ ರಾಜತಾಂತ್ರಿಕ ಟಿಪ್ಪಣಿ ಕಳುಹಿಸಿದ ಬಾಂಗ್ಲಾದೇಶ

- Advertisement -
- Advertisement -

ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಗೆ ವಾಪಸ್ ಕಳುಹಿಸಲು ಭಾರತಕ್ಕೆ ರಾಜತಾಂತ್ರಿಕ ಟಿಪ್ಪಣಿ ಕಳುಹಿಸಲಾಗಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಸೋಮವಾರ ತಿಳಿಸಿದೆ. 77 ವರ್ಷದ ಹಸೀನಾ ಅವರ 16 ವರ್ಷಗಳ ಆಡಳಿತ ಆಗಸ್ಟ್ 5ರಂದು ಪತನವಾದ ನಂತರ ಅವರು ಭಾರತಕ್ಕೆ ಪಲಾಯನ ಮಾಡಿದ್ದರು. ಭಾರತ ಮತ್ತು ಬಾಂಗ್ಲಾದೇಶದ ನಡುವೆ ಹಸ್ತಾಂತರ ಒಪ್ಪಂದ ಈಗಾಗಲೇ ಅಸ್ತಿತ್ವದಲ್ಲಿ ಇರುವುದರಿಂದ ಹಸೀನಾ ಅವರ ಹಸ್ತಾಂತರ ಆಗಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶೇಖ್ ಹಸೀನಾ ಹಸ್ತಾಂತರಕ್ಕೆ

ಬಾಂಗ್ಲಾದೇಶ ಮೂಲದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ICT) ಹಸೀನಾ ಮತ್ತು ಅವರ ಹಲವಾರು ಮಾಜಿ ಕ್ಯಾಬಿನೆಟ್ ಮಂತ್ರಿಗಳು, ಸಲಹೆಗಾರರು ಮತ್ತು ಮಿಲಿಟರಿ ಮತ್ತು ನಾಗರಿಕ ಅಧಿಕಾರಿಗಳಿಗೆ “ಮಾನವೀಯತೆ ಮತ್ತು ನರಮೇಧದ ವಿರುದ್ಧದ ಅಪರಾಧಗಳಿಗಾಗಿ” ಬಂಧನ ವಾರಂಟ್ ಹೊರಡಿಸಿದೆ. ಶೇಖ್ ಹಸೀನಾ ಹಸ್ತಾಂತರಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನ್ಯಾಯಾಂಗ ಪ್ರಕ್ರಿಯೆಗಾಗಿ ಬಾಂಗ್ಲಾದೇಶವು ಹಸೀನಾ ಅವರನ್ನು ಇಲ್ಲಿಗೆ ಹಿಂತಿರುಗಿಸಬೇಕು ಎಂದು ಬಯಸುತ್ತದೆ ಎಂದು ನಾವು ಭಾರತ ಸರ್ಕಾರಕ್ಕೆ ಮೌಖಿಕ ಟಿಪ್ಪಣಿ ಕಳುಹಿಸಿದ್ದೇವೆ” ಎಂದು ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಬೆಳಿಗ್ಗೆ, ಗೃಹ ಸಲಹೆಗಾರ ಜಹಾಂಗೀರ್ ಆಲಂ ಅವರು ಭಾರತದಿಂದ ಹೊರಹಾಕಲ್ಪಟ್ಟ ಪ್ರಧಾನಿಯನ್ನು ಹಸ್ತಾಂತರಿಸಲು ಅನುಕೂಲವಾಗುವಂತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ. ಅವರ ಹಸ್ತಾಂತರದ ಕುರಿತು ನಾವು ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಕಳುಹಿಸಿದ್ದೇವೆ. ಪ್ರಸ್ತುತ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಅವರು ಸುದ್ದಿಗಾರರಿಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಕಳೆದ ತಿಂಗಳು, ಮಧ್ಯಂತರ ಸರ್ಕಾರದ 100 ದಿನಗಳನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ಹಸೀನಾ ಅವರನ್ನು ಹಸ್ತಾಂತರಿಸುವಂತೆ ಕೋರುವುದಾಗಿ ಹೇಳಿದ್ದಾರೆ. “ನಾವು ಪ್ರತಿ ಹತ್ಯೆಯಲ್ಲಿ ನ್ಯಾಯವನ್ನು ಖಚಿತಪಡಿಸಿಕೊಳ್ಳಬೇಕು. ಉರುಳಿ ಬಿದ್ದ ನಿರಂಕುಶಾಧಿಕಾರಿ ಶೇಖ್ ಹಸೀನಾ ಅವರನ್ನು ವಾಪಸ್ ಕಳುಹಿಸುವಂತೆ ನಾವು ಭಾರತವನ್ನು ಕೇಳುತ್ತೇವೆ” ಎಂದು ಅವರು ಹೇಳಿದ್ದಾರೆ.

ಆಗಸ್ಟ್ 8 ರಂದು ಅಧಿಕಾರ ವಹಿಸಿಕೊಂಡ ಯೂನಸ್ ಅವರು, ಹಸೀನಾ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ಸೇರಿದಂತೆ ಸುಮಾರು 1,500 ಜನರು ಸಾವನ್ನಪ್ಪಿದ್ದಾರೆ ಮತ್ತು 19,931 ಇತರರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ, ಕಾನೂನು ಸಲಹೆಗಾರ ಆಸಿಫ್ ನಜ್ರುಲ್ ಅವರು ಒಪ್ಪಂದದಲ್ಲಿ ಯಾವುದೇ ನಿಬಂಧನೆಗಳನ್ನು ಉಲ್ಲೇಖಿಸಿ ಹಸೀನಾ ಅವರನ್ನು ಹಸ್ತಾಂತರಿಸಲು ಭಾರತ ನಿರಾಕರಿಸಿದರೆ ಬಾಂಗ್ಲಾದೇಶವು ಬಲವಾಗಿ ಪ್ರತಿಭಟಿಸುತ್ತದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿತ್ತು.

ಸೆಪ್ಟೆಂಬರ್‌ ವೇಳೆ ಢಾಕಾದಲ್ಲಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಯೂನುಸ್ ಅವರು, ಹಸೀನಾ ಭಾರತದಲ್ಲಿ ಕೂತು ರಾಜಕೀಯ ಟೀಕೆಗಳನ್ನು ಮಾಡುವುದು “ಸ್ನೇಹಪರವಲ್ಲದ ಗೆಸ್ಚರ್” ಎಂದು ಹೇಳಿದ್ದರು ಮತ್ತು ಬಾಂಗ್ಲಾದೇಶ ಅವರ ಹಸ್ತಾಂತರಕ್ಕೆ ವಿನಂತಿಸುವವರೆಗೂ ಎರಡೂ ದೇಶಗಳ ನಡುವಿನ ಗೊಂದಲಗಳನ್ನು ತಡೆಯಲು ಅವರು ಮೌನವಾಗಿರಬೇಕು ಎಂದು ಪ್ರತಿಪಾದಿಸಿದ್ದರು.

ಇತ್ತೀಚೆಗಷ್ಟೆ ಭಾರತದಿಂದ ಹೇಳಿಕೆ ನೀಡಿದ್ದ ಹಸೀನಾ ಅವರು, ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು “ಹತ್ಯಾಕಾಂಡ” ನಡೆಸುತ್ತಿದೆ ಮತ್ತು ಅಲ್ಪಸಂಖ್ಯಾತರನ್ನು, ಅದರಲ್ಲೂ ವಿಶೇಷವಾಗಿ ಹಿಂದೂಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!

ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...