Homeಕರ್ನಾಟಕಚಿತ್ರದುರ್ಗದಲ್ಲಿ ರಸ್ತೆ ದಾಟುತ್ತಿದ್ದ ಕುರಿಗಳ ಮೇಲೆ ಹರಿದ ಲಾರಿ: ಕುರಿಗಾಹಿ, 70 ಕುರಿಗಳ ದಾರುಣ ಸಾವು

ಚಿತ್ರದುರ್ಗದಲ್ಲಿ ರಸ್ತೆ ದಾಟುತ್ತಿದ್ದ ಕುರಿಗಳ ಮೇಲೆ ಹರಿದ ಲಾರಿ: ಕುರಿಗಾಹಿ, 70 ಕುರಿಗಳ ದಾರುಣ ಸಾವು

- Advertisement -
- Advertisement -

ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಕಣಿವೆ ಬಳಿ ಗುರುವಾರ ರಾತ್ರಿ ರಸ್ತೆ ದಾಟುತ್ತಿದ್ದ ಕುರಿ ಹಿಂಡಿನ ಮೇಲೆ ವೇಗವಾಗಿ ಬಂದ ಲಾರಿಯೊಂದು ಹರಿದ ಪರಿಣಾಮ ಸುಮಾರು 70 ಕುರಿಗಳು ಮತ್ತು ಓರ್ವ ಕುರಿಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪೊಲೀಸರ ಪ್ರಕಾರ, ಕಣಿವೆಯ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಮೃತ ಕುರಿಗಾಹಿಯನ್ನು ಹಿರಿಯೂರು ತಾಲೂಕಿನ ಬೆನಕನಹಳ್ಳಿ ಗ್ರಾಮದ ಮೂಡ್ಲಪ್ಪ (47) ಎಂದು ಗುರುತಿಸಲಾಗಿದೆ.

ತಿರುವಿನಲ್ಲಿ ವೇಗವಾಗಿ ಬಂದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಕುರಿ ಹಿಂಡು ಮತ್ತು ಮೂಡ್ಲಪ್ಪ ಮೇಲೆ ಹರಿದಿದೆ. ಸ್ಥಳದಲ್ಲೇ 70 ಕುರಿಗಳು ಮತ್ತು ಮೂಡ್ಲಪ್ಪ ಮೃತಪಟ್ಟಿದ್ದಾರೆ.

ಅಪಘಾತ ಸಂಭವಿಸಿದ ತಕ್ಷಣ ಲಾರಿ ಚಾಲಕ ಪರಾರಿಯಾಗಿದ್ದು, ಘಟನೆ ಸಂಬಂಧ ಹೊಳಲ್ಕೆರೆ ಗ್ರಾಮಾಂತರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಬಾವುಟಕ್ಕೆ ಬೆಂಕಿ ಇಟ್ಟವರನ್ನು ಶಿಕ್ಷಿಸಿ, ನಮ್ಮ ಧ್ವಜ ಹಿಡಿದ ಭುಜಗಳನ್ನು ರಕ್ಷಿಸಿ: ಡಾ.ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಅಲಿಗಢದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...