Homeಕರ್ನಾಟಕಶಿಗ್ಗಾಂವಿ ಉಪ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್​ ಅಹ್ಮದ್​ ಖಾನ್​ ಪಠಾಣ್‌ ಆಯ್ಕೆ

ಶಿಗ್ಗಾಂವಿ ಉಪ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್​ ಅಹ್ಮದ್​ ಖಾನ್​ ಪಠಾಣ್‌ ಆಯ್ಕೆ

- Advertisement -
- Advertisement -

ರಾಜ್ಯದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದ್ದು, ಪಕ್ಷದ ನಾಯಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿದೆ. ಇದಕ್ಕೂ ಮೊದಲು ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ. ಶಿಗ್ಗಾಂವಿ ಉಪ ಚುನಾವಣೆ

ಕಾಂಗ್ರೆಸ್​​ನಿಂದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಸ್ಪರ್ಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಘೋಷಣೆ ಮಾಡಿದ್ದು, ಕಳೆದ ಬಾರಿ ಬಸವರಾಜ್ ಬೊಮ್ಮಾಯಿ ಎದುರು ಅವರು 35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಈ ಬಾರಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವುದಿಲ್ಲ ಎಂದು ಕಾಂಗ್ರೆಸ್ ವಲಯದಲ್ಲಿ ಭಾರಿ ಚರ್ಚೆ ನಡೆದಿತ್ತು. ಅದಾಗ್ಯೂ, ಕೊನೆಗೂ ಯಾಸೀರ್ ಅವರು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿಗ್ಗಾಂವಿ ಉಪ ಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯಾಸೀರ್ ಅವರು ಎರಡನೇ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ತಾಯಿ ಕೂಡ ಜಿಲ್ಲಾ ಪಂಚಾಯತ್​ ಸದಸ್ಯರಾಗಿ ಆಯ್ಕೆಯಾಗಿದ್ದರು. ಕ್ಷೇತ್ರದಲ್ಲಿ ಮುಸ್ಲಿಮರ ಮತಗಳು ಗಣನೀಯವಾಗಿದ್ದು 30%ಕ್ಕಿಂತ ಹೆಚ್ಚಿವೆ. ಜೊತೆಗೆ ಬೊಮ್ಮಾಯಿ ವಿರುದ್ಧ ಕ್ಷೇತ್ರದಲ್ಲಿ ಅಸಮಾಧಾನ ಹೆಚ್ಚಾಗಿವೆ. ಹಾಗಾಗಿ ಅವರ ಗೆಲುವು ಸುಲಭವಾಗಿರುತ್ತದೆ ಎಂದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಲು ಬಯಸಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒತ್ತಡ ಹೇರಿದ್ದರು ಎಂದು ವರದಿಯಾಗಿತ್ತು. ಒಂದು ವೇಳೆ ಮುಸ್ಲಿಮೇತರರಿಗೆ ಟಿಕೆಟ್ ನೀಡಿದ್ದರೆ ಮುಸ್ಲಿಮರ ಅಸಮಾಧಾನಕ್ಕೂ ಗುರಿಯಾಗುವ ಭಯ ಕಾಂಗ್ರೆಸ್‌ಗೆ ಇತ್ತು.

ಇದನ್ನೂ ಓದಿ: ಎಂವಿಎ ಅಂತಿಮ ಸೀಟು ಹಂಚಿಕೆ ಶುಕ್ರವಾರ ಪ್ರಕಟ: ಮಹಾರಾಷ್ಟ್ರ ಕಾಂಗ್ರೆಸ್

ಎಂವಿಎ ಅಂತಿಮ ಸೀಟು ಹಂಚಿಕೆ ಶುಕ್ರವಾರ ಪ್ರಕಟ: ಮಹಾರಾಷ್ಟ್ರ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...