ಶಿಗ್ಗಾವಿ ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್‌ಗೆ ಸಂಕಷ್ಟ ತಂದಿಟ್ಟಿದ್ದ ಬಂಡಾಯ ಭಾಗಶಃ ಶಮನವಾಗಿದೆ ಎಂದು ವರದಿಗಳು ಹೇಳಿವೆ.
ನಿನ್ನೆ (ಅ.25) ಸಚಿವ ಝಮೀರ್ ಅಹ್ಮದ್ ನೇತೃತ್ವದಲ್ಲಿ ನಡೆದ ಮನವೊಲಿಕೆಗೆ ಬಗ್ಗದೆ ಕೊನೆ ಕ್ಷಣದಲ್ಲಿ ನಾಮಪತ್ರ ಸಲ್ಲಿಸಿದ್ದ ಟಿಕೆಟ್ ಆಕಾಂಕ್ಷಿ ಅಜ್ಜಂಪೀರ್ ಖಾದ್ರಿ, ಇಂದು ತಣ್ಣಗಾಗಿದ್ದಾರೆ ಎಂದು ಹೇಳಲಾಗ್ತಿದೆ.
ಇಂದು (ಅ.26) ಅಜ್ಜಂಪೀರ್ ಖಾದ್ರಿ ಅವರನ್ನು ಸಚಿವ ಝಮೀರ್ ಅಹ್ಮದ್ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಕರೆದೊಯ್ದು ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತ ಫೋಟೋಗಳು ಹರಿದಾಡುತ್ತಿವೆ. ವರದಿಗಳ ಪ್ರಕಾರ, ಖಾದ್ರಿ ಅವರು ನಾಮಪತ್ರ ವಾಪಸ್ ಪಡೆಯುವುದು ಪಕ್ಕಾ ಆಗಿದೆ.

ನಾಮಪತ್ರ ಸಲ್ಲಿಸಿರುವ ಮಾಜಿ ಶಾಸಕ ಮಂಜುನಾಥ್ ಕುನ್ನೂರು
ಅಜ್ಜಂಪೀರ್ ಖಾದ್ರಿ ಮಾತ್ರವಲ್ಲದೆ ಕಾಂಗ್ರೆಸ್‌ನಿಂದ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ಮಂಜುನಾಥ್ ಕುನ್ನೂರು ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಸದ್ಯ ಅಜ್ಜಂಪೀರ್ ಖಾದ್ರಿ ಮನವೊಲಿಕೆ ಯಶಸ್ವಿಯಾಗಿದ್ದು, ಅವರು ನಾಮಪತ್ರ ವಾಪಸ್ ಪಡೆಯುವ ಸಾಧ್ಯತೆ ಇದೆ. ಆದರೆ, ಮಂಜುನಾಥ್ ಕುನ್ನೂರು ನಾಮಪತ್ರ ವಾಪಸ್ ಪಡೆಯುತ್ತಾರಾ? ಎಂದು ಕಾದು ನೋಡಬೇಕಿದೆ.
ಇದನ್ನೂ ಓದಿ : ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಜಟಾಪಟಿ : ಸಚಿವ ಝಮೀರ್ ಅಹ್ಮದ್ ಕಾರಿಗೆ ಕಲ್ಲೇಟು


