Homeಕರ್ನಾಟಕಶಿಗ್ಗಾವಿ ಉಪಚುನಾವಣೆ | ನಾಮಪತ್ರ ಹಿಂಪಡೆದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಅಜ್ಜಂಪೀರ್‌ ಖಾದ್ರಿ

ಶಿಗ್ಗಾವಿ ಉಪಚುನಾವಣೆ | ನಾಮಪತ್ರ ಹಿಂಪಡೆದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಅಜ್ಜಂಪೀರ್‌ ಖಾದ್ರಿ

- Advertisement -
- Advertisement -

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಇಂದು (ಅ.30) ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.

ನಿನ್ನೆ (ಅ.29) ರಾತ್ರಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದ ಅಜ್ಜಂಪೀರ್‌ ಖಾದ್ರಿ, ಸಚಿವ ಝಮೀರ್ ಅಹ್ಮದ್ ಹಾಗೂ ಶಿವಾನಂದ ಪಾಟೀಲ್ ಜೊತೆ ಇಂದು ಬೆಳಿಗ್ಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿ, ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿಯೇ ನಾಮಪತ್ರ ವಾಪಸ್‌ ಪಡೆದಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಪಕ್ಷದ ಮುಂದೆ ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು ಜನಪರವಾಗಿವೆ. ನಾನು ಸಿದ್ದರಾಮಯ್ಯ ಅವರ ಶಿಷ್ಯ. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುವೆ” ಎಂದಿದ್ದಾರೆ.

ಉಪಚುನಾವಣೆಗೆ ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ ಅನ್ನು ಯಾಸೀರ್ ಖಾನ್ ಪಠಾಣ್ ಅವರಿಗೆ ನೀಡಲಾಗಿದೆ. ಇದರಿಂದ ತೀವ್ರ ಅಸಮಾಧಾನಗೊಂಡಿದ್ದ ಖಾದ್ರಿ, ಸಚಿವ ಝಮೀರ್ ಅಹ್ಮದ್ ಸೇರಿದಂತೆ ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಬಗ್ಗದೆ ಅಕ್ಟೋಬರ್ 25ರಂದು ಕೊನೆಯ ಕ್ಷಣದಲ್ಲಿ ನಾಮಪತ್ರ ಸಲ್ಲಿಸಿದ್ದರು.

ಆದರೆ, ಅಕ್ಟೋಬರ್ 26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಖಾದ್ರಿ ನಾಮಪತ್ರ ವಾಪಸ್ ಪಡೆಯುವ ಭರವಸೆ ನೀಡಿದ್ದರು. ಅದರಂತೆ ಇಂದು ವಾಪಸ್ ಪಡೆದಿದ್ದಾರೆ.

ಇದನ್ನೂ ಓದಿ : ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...