Homeಕರ್ನಾಟಕಶಿಕಾರಿಪುರ: ಹಿಂಸಾಚಾರಕ್ಕೆ ತಿರುಗಿದ ಒಳ ಮೀಸಲಾತಿ ವಿರೋಧಿ ಪ್ರತಿಭಟನೆ; ಬಿಎಸ್‌ವೈ ಮನೆಗೆ ಕಲ್ಲು ತೂರಾಟ

ಶಿಕಾರಿಪುರ: ಹಿಂಸಾಚಾರಕ್ಕೆ ತಿರುಗಿದ ಒಳ ಮೀಸಲಾತಿ ವಿರೋಧಿ ಪ್ರತಿಭಟನೆ; ಬಿಎಸ್‌ವೈ ಮನೆಗೆ ಕಲ್ಲು ತೂರಾಟ

- Advertisement -
- Advertisement -

ಪರಿಶಿಷ್ಟ ಸಮುದಾಯಗಳಲ್ಲಿ ಒಳ ಮೀಸಲಾತಿ ನೀಡಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ವರದಿಯನ್ನು ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡುವ ನಿರ್ಧಾರವನ್ನು ವಿರೋಧಿಸಿ ಶಿಕಾರಿಪುರದಲ್ಲಿ ಸೋಮವಾರ ಬಂಜಾರ ಸಮಾಜದವರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಮನೆಯ ಕಿಟಕಿ ಗಾಜಿಗೆ ಹಾನಿಯಾಗಿದೆ. ತಡಯಲು ಬಂದ ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಲಾಗಿದೆ. ಯಡಿಯೂರಪ್ಪ ನಿವಾಸದ ಮುಂದೆ ಹಾಕಲಾಗಿದ್ದ ಬ್ಯಾನರ್​ಗಳನ್ನು ಸಹ ಹರಿದು ಹಾಕಲಾಗಿದೆ. ನಿವಾಸದ ಮೇಲೆ ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿರುವ ಮೀಸಲಾತಿ ಪ್ರಮಾಣದ ವಿರುದ್ಧ ಬಂಜಾರ ಸಮುದಾಯದ ಯುವಕರು ನಗರದ ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಸರಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಪಟ್ಟಣದಲ್ಲಿ ಹಾಕಲಾಗಿದ್ದ ಬಿಜೆಪಿ, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಬ್ಯಾನರ್, ಫ್ಲೆಕ್ಸ್‌ಗಳನ್ನು ಕಿತ್ತೊಗೆದಿದ್ದಾರೆ. ಟೈರ್‌, ಸೀರೆಗಳಿಗೆ ಬೆಂಕಿ ಹಚ್ಚಿಲಾಯಿತು,  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು‌. ಘಟನೆಯಲ್ಲಿ ಪ್ರತಿಭಟನಾಕಾರರು ಮತ್ತು ಕೆಲವು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಶಿಕಾರಿಪುರದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿದುಬಂದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...