Homeಕರ್ನಾಟಕ'ಶಿಕ್ಷಾ ಕೊಪೈಲಟ್' | ಸರ್ಕಾರಿ ಶಾಲಾ ಶಿಕ್ಷಕರಿಗೆ ನೆರವಾಗುವ AI ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ

‘ಶಿಕ್ಷಾ ಕೊಪೈಲಟ್’ | ಸರ್ಕಾರಿ ಶಾಲಾ ಶಿಕ್ಷಕರಿಗೆ ನೆರವಾಗುವ AI ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ

- Advertisement -
- Advertisement -

ಶಿಕ್ಷಕರಿಗೆ ಬೋಧನೆಯಲ್ಲಿ ಸಹಾಯ ಮಾಡುವ ‘ಶಿಕ್ಷಾ ಕೊಪೈಲಟ್(Shiksha Copilot)’ AI ಚಾಲಿತ ಡಿಜಿಟಲ್ ಸಹಾಯಕವನ್ನು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶುಕ್ರವಾರ ಉದ್ಘಾಟಿಸಿದ್ದಾರೆ. ಈ AI ಕಲಿಕೆಯನ್ನು ಸುಧಾರಿಸಲು ಮತ್ತು ಸಮಗ್ರ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷಕರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿದೆ.

‘ಶಿಕ್ಷಾ ಕೊಪೈಲಟ್’ AI ಚಾಲಿತ ಡಿಜಿಟಲ್ ಸಹಾಯಕವು ಸಂಶೋಧನಾ ಯೋಜನೆಯಾಗಿದ್ದು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾ ನಡುವಿನ ಸಹಯೋಗವಾಗಿದೆ. ಈ ಬಗ್ಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ‘ಸರ್ಕಾರಿ ಶಾಲೆಗಳು ಬೋರ್ಡ್ ಪರೀಕ್ಷೆಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿವೆ ಎಂದು ಟೀಕಿಸಲಾಗುತ್ತದೆ. ಫಲಿತಾಂಶಗಳನ್ನು ಸುಧಾರಿಸಲು, ಶಿಕ್ಷಾ ಕೊಪೈಲಟ್‌ನಂತಹ ಉಪಕ್ರಮಗಳನ್ನು ತರಲಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪಾಠ ಯೋಜನೆ ಮತ್ತು ಸಂಪನ್ಮೂಲ ಉತ್ಪಾದನೆಯನ್ನು ಸ್ವಯಂ ಚಾಲಿತವಾಗಿ ನೀಡುವ ಮೂಲಕ, ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ವೈಯಕ್ತಿಕ ಕಲಿಕೆಯ ಅಗತ್ಯಗಳ ಮೇಲೆ ಕೇಂದ್ರೀಕರಿಸಲು ಹೆಚ್ಚಿನ ಸಮಯವನ್ನು ಕಳೆಯಬಹುದು. ಈ AI ಚಾಲಿತ ವಿಧಾನವು ಕರ್ನಾಟಕದ ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ತರಗತಿಗಳನ್ನು ನಿರ್ವಹಿಸುವಲ್ಲಿ ಮತ್ತು ವಿದ್ಯಾರ್ಥಿಗಳ ಅಗತ್ಯತೆಗಳನ್ನು ಪರಿಹರಿಸುವಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ” ಎಂದು ಹೇಳಿದ್ದಾರೆ.

‘ಶಿಕ್ಷಾ ಕೊಪೈಲಟ್’ ಎಂದರೇನು? 

ಇದು ಚಟುವಟಿಕೆಗಳು, ವೀಡಿಯೊಗಳು ಮತ್ತು ರಸಪ್ರಶ್ನೆಗಳು ಸೇರಿದಂತೆ ಪಾಠದ ಯೋಜನೆಗಳನ್ನು ರೂಪಿಸುವ ಜನರೇಟಿವ್ AI ಡಿಜಿಟಲ್ ಅಸಿಸ್ಟೆಂಟ್  ಆಗಿದ್ದು, ನಿಮಿಷಗಳಲ್ಲಿ ಸ್ಥಳೀಯ ಪಠ್ಯಕ್ರಮದಲ್ಲಿ ಆಧಾರಿತವಾದ ಸಂವಾದಾತ್ಮಕ ಕಲಿಕೆಯ ಅನುಭವಗಳನ್ನು ಸೃಷ್ಟಿಸುತ್ತದೆ.

ಈ ಯೋಜನೆಯು ಆರಂಭದಲ್ಲಿ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿನ ಎಲ್ಲಾ ಶಿಕ್ಷಣ ಜಿಲ್ಲೆಗಳಾದ್ಯಂತ ಸರ್ಕಾರಿ ಶಾಲೆಗಳ 1,000 ಶಿಕ್ಷಕರನ್ನು ಒಳಗೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಈ ಯೋಜನೆಯು ರಾಜ್ಯಾದ್ಯಂತ ಹೆಚ್ಚಿನ ಶಿಕ್ಷಕರು ಮತ್ತು ಶಾಲೆಗಳನ್ನು ತಲುಪಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಸ್ತುತ ‘ಶಿಕ್ಷಾ ಕೊಪೈಲಟ್’ 5 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಗಣಿತ, ವಿಜ್ಞಾನ, ಇಂಗ್ಲಿಷ್ ಮತ್ತು ಸಮಾಜ ವಿಜ್ಞಾನದಂತಹ ವಿಷಯಗಳನ್ನು ಇದು ಒಳಗೊಂಡಿದೆ.

ಇದನ್ನೂ ಓದಿ: ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...