Homeಚಳವಳಿಶಿವಮೊಗ್ಗ: ಅಲೆಮಾರಿಗಳಿಗೆ ಶಾಶ್ವತ ನೆಲೆಗಾಗಿ ಸಿಎಂಗೆ ಮನವಿ

ಶಿವಮೊಗ್ಗ: ಅಲೆಮಾರಿಗಳಿಗೆ ಶಾಶ್ವತ ನೆಲೆಗಾಗಿ ಸಿಎಂಗೆ ಮನವಿ

ನವೆಂಬರ್ 19 ರಂದು ಅಂಬೇಡ್ಕರ್ ನಗರದ ಮೂಲನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಸ್ಲಂ ಎಂದು ಘೋಷಿಸುವಂತೆ ಒತ್ತಾಯಿಸಿ ಸಚಿವರಾದ ಕೆ.ಎಸ್ ಈಶ್ವರಪ್ಪನವರಿಗೆ ಮನವಿ ಮಾಡಲಾಗಿತ್ತು.

- Advertisement -
- Advertisement -

ಶಿವಮೊಗ್ಗದ ಅಂಬೇಡ್ಕರ್ ನಗರ (ಹಕ್ಕಿಪಿಕ್ಕಿ ಕಾಲೋನಿ) ದಲ್ಲಿ ವಾಸವಿರುವ 350ಕ್ಕೂ ಹೆಚ್ಚು ಅಲೆಮಾರಿಗಳಿಗೆ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸಿ ಮೂಲಭೂತ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಇಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಯಿತು.

8-10 ವರ್ಷಗಳಿಂದ ಇಲ್ಲಿ ವಾಸಿಸುತ್ತಿರುವ ಅಲೆಮಾರಿಗಳಿಗೆ ಇದುವರೆಗೂ ಜಿಲ್ಲಾಡಳಿತ ಕನಿಷ್ಠ ಮೂಲಭೂತ ಸೌಲಭ್ಯ ಒದಿಗಿಸಿಲ್ಲ. ನೀರು, ರಸ್ತೆ, ಶೌಚಾಲಯ, ವಿದ್ಯುತ್ ವ್ಯವಸ್ಥೆ ಇಲ್ಲದೆ ಪರಿತಪಿಸುತ್ತಿದ್ದಾರೆ. ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡರೆ ಅದಕ್ಕೂ ಬಿಡದೇ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ತಪ್ಪಿಸಬೇಕೆಂದು ಮುಖಂಡರು ಸಿಎಂ ಬಳಿ ಮನವಿ ಮಾಡಿದರು.

ಇದನ್ನೂ ಓದಿ: ಶಿವಮೊಗ್ಗ: ಭಿಕ್ಷೆ ಬೇಡುತ್ತಿದ್ದ, ಚಿಂದಿ ಆಯುತ್ತಿದ್ದ ಮಕ್ಕಳೀಗ ಕ್ರೀಡಾಪ್ರವೀಣರು!

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ದ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಹೆಚ್.ಹಾಲೇಶಪ್ಪ, ಮುಂಖಡರಾದ A.D ಆನಂದ್ M. ಮಂಜುನಾಥ್, M.R. ಶಿವಕುಮಾರ್, ರಂಗಸ್ವಾಮಿ, ಸೂಗೂರು ಪರಮೇಶ್, ಕಿಟ್ಟಿ, ವೀರೇಶ್, ಕರೀಷ್ಮ, ಮೀನ, ರಾಜವೇಲು, ನಶಿಕ್ ಬಾಬು, MP ಶಂಕರ್, ಸ್ಪಂದನ ಚಂದ್ರು, ಜಗ್ಗು ಮುಂತಾದವರು ಇದ್ದರು.

ಈ ಕುರಿತು ನವೆಂಬರ್ 19 ರಂದು ಅಂಬೇಡ್ಕರ್ ನಗರದ ಮೂಲನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಸ್ಲಂ ಎಂದು ಘೋಷಿಸುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪನವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಗಿತ್ತು.


ಇದನ್ನೂ ಓದಿ: ಶಿವಮೊಗ್ಗ: ಅಲೆಮಾರಿಗಳಿಗೆ ಶಾಶ್ವತ ಸೂರಿಗಾಗಿ ಹೋರಾಟ – ಉಸ್ತುವಾರಿ ಸಚಿವರ ಭರವಸೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...