Homeಕರ್ನಾಟಕಶಿವಮೊಗ್ಗ ಹಿಂಸಾಚಾರ ನಷ್ಟವನ್ನು ಈಶ್ವರಪ್ಪನವರಿಂದ ವಸೂಲಿ ಮಾಡಿ- ಹರಿಪ್ರಸಾದ್

ಶಿವಮೊಗ್ಗ ಹಿಂಸಾಚಾರ ನಷ್ಟವನ್ನು ಈಶ್ವರಪ್ಪನವರಿಂದ ವಸೂಲಿ ಮಾಡಿ- ಹರಿಪ್ರಸಾದ್

- Advertisement -
- Advertisement -

ಶಿವಮೊಗ್ಗದಲ್ಲಿ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಶವದ ಮೆರವಣಿಗೆ ಸಂದರ್ಭದಲ್ಲಿ ಆದ ಸಾರ್ವಜನಿಕ ಆಸ್ತಿ ನಷ್ಟವನ್ನು ಸಚಿವ ಕೆ.ಎಸ್‌.ಈಶ್ವರಪ್ಪನವರಿಂದ ವಸೂಲಿ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ.

“ಕೊಲೆಯಾದ ಬಜರಂಗದಳದ ಕಾರ್ಯಕರ್ತನ ಶವದ ಮೆರವಣಿಗೆಯನ್ನು ಮುನ್ನಡೆಸಿದ ಈಶ್ವರಪ್ಪನವರಿಂದಾಗಿ ಹಿಂಸಾಚಾರ ನಡೆದಿದೆ” ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ.

“ಗಲಭೆಯಿಂದಾದ ಸಾರ್ವಜನಿಕ ಆಸ್ತಿಗೆ ಉಂಟಾದ ಹಾನಿಯನ್ನು ಪಡೆಯಲು ಬಿಜೆಪಿ ಹೆಮ್ಮೆಪಡುತ್ತದೆ. ಅದೇ ಅಳತೆಗೋಲನ್ನು ಅನುಸರಿಸಿ ಸರ್ಕಾರವು ಮೆರವಣಿಗೆಯ ಮುಂದಾಳತ್ವ ವಹಿಸಿದ್ದ ಈಶ್ವರಪ್ಪನವರಿಂದ ಪರಿಹಾರವನ್ನು ವಸೂಲಿ ಮಾಡಬೇಕು” ಎಂದು ಹರಿಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಪ್ರತಿಭಟನಾಕಾರರಿಂದಾಗಿ ಸಾರ್ವಜನಿಕ ಆಸ್ತಿಗೆ ಹಾನಿಯಾಗಿದೆ ಎಂದು ಆರೋಪಿಸಿದ್ದ ಉತ್ತರ ಪ್ರದೇಶ ಯುಪಿ ಸರ್ಕಾರ ವಸೂಲಿಗೆ ಮುಂದಾಗಿತ್ತು. ಆದರೆ ವಸೂಲಿ ಮಾಡಲಾದ ಕೋಟ್ಯಂತರ ರೂಪಾಯಿಗಳನ್ನು ಮರುಪಾವತಿ ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನಿರ್ದೇಶಿಸಿದೆ.

ಕೆ.ಎಸ್.ಈಶ್ವರಪ್ಪ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ಇತ್ತೀಚಿನ ಮಾತಿನ ಸಮರಕ್ಕೆ ಕಾರಣವಾದ ಎರಡನೇ ವಿಷಯ ಇದಾಗಿದೆ. ‘ಕೇಸರಿ ಧ್ವಜವು ರಾಷ್ಟ್ರಧ್ವಜವಾಗಬಹುದು’ ಎಂದು ಈಶ್ವರಪ್ಪ ಅವರು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.

ಮತ್ತೆ ನಾಲ್ವರ ಬಂಧನ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ನಗರದಲ್ಲಿ ಮಂಗಳವಾರವೂ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 1,200 ಪೊಲೀಸ್ ಸಿಬ್ಬಂದಿ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ನಗರದಲ್ಲಿ ಗಸ್ತು ತಿರುಗುತ್ತಿದೆ. ಆದರೆ ಕೆಲ ಕಿಡಿಗೇಡಿಗಳು ಮಂಗಳವಾರ ಮುಂಜಾವಿನಲ್ಲಿ ಮೂರು ಆಟೋರಿಕ್ಷಾ ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಬಂಧಿತರನ್ನು ಆಸಿಫ್ ಉಲ್ಲಾ ಖಾನ್, ರಿಹಾನ್ ಷರೀಫ್, ನಿಹಾನ್ ಮತ್ತು ಅಬ್ದುಲ್ ಅಫ್ನಾನ್ ಎಂದು ಗುರುತಿಸಲಾಗಿದೆ. ಸೋಮವಾರ ಮೊಹಮ್ಮದ್ ಖಾಸಿಫ್ (30) ಮತ್ತು ಸೈಯದ್ ನದೀಮ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.

ಮೊಹಮ್ಮದ್ ಖಾಸಿಫ್ ಪ್ರಮುಖ ಆರೋಪಿಯಾಗಿದ್ದು, ನದೀಮ್ ಆರೋಪಿ ನಂ.2 ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆಸಿಫ್ ಉಲ್ಲಾ ಖಾನ್ – ಆರೋಪಿ ನಂ.3, ರಿಹಾನ್ ಷರೀಫ್- ಆರೋಪಿ ನಂ.4, ನಿಹಾನ್- ಆರೋಪಿ ನಂ.5 ಮತ್ತು ಅಫ್ನಾನ್ -ಆರೋಪಿ ನಂ.6. ಖಾಸಿಫ್ ಹೊರತುಪಡಿಸಿ ಉಳಿದ ಆರೋಪಿಗಳು 21 ರಿಂದ 22 ವರ್ಷ ವಯಸ್ಸಿನವರಾಗಿದ್ದಾರೆ.

“ಎಲ್ಲಾ ಆರೋಪಿಗಳು ಶಿವಮೊಗ್ಗ ನಗರದ ನಿವಾಸಿಗಳು. ನಾವು 12 ಜನರನ್ನು ವಶಕ್ಕೆ ಪಡೆದಿದ್ದೇವೆ. ಅದರಲ್ಲಿ ಆರು ಮಂದಿ ಕೊಲೆಯಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಆರು ಮಂದಿಯಲ್ಲಿ ನಾಲ್ವರು ಹಲ್ಲೆ, ಕೊಲೆ ಯತ್ನ ಮತ್ತು ಗಲಭೆ ಸೇರಿದಂತೆ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ. ಮೃತ ಹರ್ಷ 2016 ಮತ್ತು 2017ರಲ್ಲಿ ದಾಖಲಾದ ಗಲಭೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ; ಸಂಸದ ಪ್ರಜ್ವಲ್ ರೇವಣ್ಣ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...