Homeಕರ್ನಾಟಕಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

"ಈಗ ಹೊರಬಿದ್ದಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ"

- Advertisement -
- Advertisement -

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು, ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡಿದ್ದಾರೆ. ಇದು ದೇಶಾದ್ಯಂತ ವ್ಯಾಪಕ ಮೆಚ್ಚುಗೆ ಗಳಿಸಿ ಜಿಯೋ ಕಂಪನಿಗೆ ಹೊಡೆತ ಕೊಟ್ಟಿತ್ತು.

ಈಗ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಆಂದೋಲನ ಆರಂಭವಾಗಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್‌ನಿಂದ ಏರ್‌ಟೆಲ್‌ ಸಿಮ್‌ಗೆ ಪೋರ್ಟ್ ಆಗಿದ್ದಾರೆ.

ಇದನ್ನೂ ಓದಿ: ಬಿಜೆಪಿ ನೇಮಿಸಿದ ಕುಲಪತಿ ಅಮರ್ಥ್ಯ ಸೇನ್‌ರನ್ನು ಗುರಿಯಾಗಿಸಿಕೊಂಡಿದ್ದಾರೆ – ಗಾಯಕ ಕಬೀರ್ ಸುಮನ್

ಡಿಸೆಂಬರ್ 28 ರಂದು ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ನಲ್ಲಿರುವ ಏರ್‌ಟೆಲ್ ಕಚೇರಿ ಮುಂದೆ ಜಮಾವಣೆಗೊಂಡಿರುವ ನೂರಾರು ಕಾರ್ಯಕರ್ತರು ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ತಮ್ಮ ಜಿಯೋ ನಂಬರ್‌ನಿಂದ ಹೊರಬಂದು ಏರ್‌ಟೆಲ್ ಚಂದಾದಾರರಾಗಿದ್ದಾರೆ. ಈ ಮೂಲಕ ರೈತ ಚಳವಳಿಯನ್ನು ಗಟ್ಟಿಗೊಳಿಸಲು, ಕಾರ್ಪೊರೇಟ್ ಕಂಪನಿಗಳನ್ನು ವಿರೋಧಿಸಲು ಸಜ್ಜಾಗಿದ್ದಾರೆ.

ಎಚ್.ಆರ್ ಬಸವರಾಜಪ್ಪ

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಬಸರಾಜಪ್ಪನವರು “ಇವತ್ತು ಜಿಯೋ ಕಂಪನಿಯನ್ನು ಅಂಬಾನಿ ಕಂಪನಿಯೆಂದು ಹೇಳುವ ಬದಲು ಮೋದಿ ಕಂಪನಿಯೆಂದು ಹೇಳಬಹುದು. ಈ ಮೋದಿ ಇಂದು ಹೋರಾಟ ನಿರತ ರೈತರ ಹಕ್ಕೊತ್ತಾಯಗಳನ್ನು ಉದಾಸೀನ ಮಾಡುತ್ತಿದ್ದಾರೆ. ಅಲ್ಲದೇ ರೈತರನ್ನು ದೇಶದ್ರೋಹಿಗಳೆಂದು ಹಣೆಪಟ್ಟೆ ಕಟ್ಟಲಾಗುತ್ತಿದೆ. ಆದರೆ ದೇಶಕ್ಕೆ ಅನ್ನ ಕೊಡುವ ರೈತರು ದೇಶದ್ರೋಹಿಗಳಲ್ಲ. ರೈತರನ್ನು ಲೂಟಿ ಹೊಡೆಯುತ್ತಿರುವ ಅಂಬಾನಿ-ಅದಾನಿಗಳೇ ನಿಜವಾದ ದೇಶದ್ರೋಹಿಗಳು. ಹಾಗಾಗಿ ನಾವೆಲ್ಲರೂ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್ ಆಗುತ್ತಿದ್ದೇವೆ. ಏರ್‌ಟೆಲ್‌ನವರೇನು ನಮ್ಮನ್ನು ಕರೆದಿಲ್ಲ. ನಾವೇ ರೈತರ ಶಕ್ತಿ ತೋರಿಸಲು ಈ ನಿರ್ಧಾರ ಕೈಗೊಂಡಿದ್ದೇವೆ. ಹಾಗಾಗಿ ನಾಡಿನ ರೈತರು ಮತ್ತು ಯುವಜನರು ರಿಲೆಯನ್ಸ್ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

 

ಇದನ್ನೂ ಓದಿ: ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಈಗಾಗಲೇ ಕಳೆದೊಂದು ತಿಂಗಳಿನಿಂದ ಬಾಯ್ಕಾಟ್ ಜಿಯೋ ಅಭಿಯಾನ ನಡೆಯುತ್ತಿದ್ದು ಲಕ್ಷಾಂತರ ರೈತರು-ಯುವಜನರು ಜಿಯೋದಿಂದ ಹೊರಬಂದಿದ್ದಾರೆ. ಡಿಸೆಂಬರ್ ಎರಡನೇ ವಾರದಲ್ಲಿ ಬರೋಬ್ಬರಿ 26 ಲಕ್ಷ ಜನ ಜಿಯೋ ಸಿಮ್‌ನಿಂದ ಪೋರ್ಟ್ ಆಗಿದ್ದರು. ಹಾಗಾಗಿ ಜಿಯೋ ಕಂಪನಿ ಏರ್‌ಟೆಲ್ ಮತ್ತು ವೋಡೋಪೋನ್ ಐಡಿಯಾ ವಿರುದ್ಧ ಟ್ರಾಯ್ (Telecom Regulator Authority of India) ಬಳಿ ದೂರು ನೀಡಿ, ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ‘ಬಾಯ್ಕಾಟ್ ಜಿಯೋ’ ಹಿಂದೆ ಈ ಕಂಪನಿಗಳ ಪಿತೂರಿಯಿದೆ ಎಂದು ಆರೋಪಿಸಿತ್ತು.

ಈಗ ಹೊರಬಿದ್ದಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಸಕ್ರಿಯ ಬಳಕೆದಾರರಿದ್ದರೆ ಜಿಯೋಗೆ 33.2% ಸಕ್ರಿಯ ಬಳಕೆದಾರರಿದ್ದಾರೆ. ಅಲ್ಲದೇ ನಿರಂತರವಾಗಿ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್‌ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು ಜಿಯೋವನ್ನು ಆತಂಕಕ್ಕೆ ದೂಡಿದೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಜನರು ಜಿಯೋದಿಂದ ಪೋರ್ಟ್ ಆಗಲು ಸಿದ್ದರಾಗಿದ್ದಾರೆ.


ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...