HomeUncategorizedಶಿವಮೊಗ್ಗ: ಲೈಂಗಿಕ ದೌರ್ಜನ್ಯದಿಂದ ಬಾಲಕಿ ಆತ್ಮಹತ್ಯೆ ಪ್ರಕರಣ; ಆರೋಪಿಗೆ 20ವರ್ಷ ಜೈಲು, 1.25ಲಕ್ಷ ದಂಡ

ಶಿವಮೊಗ್ಗ: ಲೈಂಗಿಕ ದೌರ್ಜನ್ಯದಿಂದ ಬಾಲಕಿ ಆತ್ಮಹತ್ಯೆ ಪ್ರಕರಣ; ಆರೋಪಿಗೆ 20ವರ್ಷ ಜೈಲು, 1.25ಲಕ್ಷ ದಂಡ

- Advertisement -
- Advertisement -

ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಅಪ್ರಾಪ್ತ ವಯಸ್ಸಿನ ಬಾಲಕಿ ಆತ್ಮಹತ್ಯೆಗೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರಾಕ್ ವಿಶೇಷ ಕೋರ್ಟ್ ತೀರ್ಪು ನೀಡಿದೆ.

ಆರೋಪಿ 23 ವರ್ಷದ ಯುವಕ ಜೈಲು ಶಿಕ್ಷೆಗೆ ಗುರಿಯಾದವನಾಗಿದ್ದಾನೆ. ಶಿಕ್ಷೆಯ ಜೊತೆಗೆ 1.25 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ. ಮೃತ ಬಾಲಕಿ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

2020ರಲ್ಲಿ ತೀರ್ಥಹಳ್ಳಿ ತಾಲೂಕಿನ 23 ವರ್ಷದ ಯುವಕ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಇದರಿಂದ ಮನನೊಂದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು. ಘಟನೆಯ ಬಳಿಕ ಬಾಲಕಿ ತಂದೆ ರಿಪ್ಪನ್ ಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೇ ಮೃತ ಬಾಲಕಿ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿ ತೀರ್ಪು ನೀಡಿದೆ.

ಇದನ್ನೂ ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...