Homeಕರ್ನಾಟಕಶಿವಮೊಗ್ಗ: ಅಲೆಮಾರಿಗಳಿಗೆ ಶಾಶ್ವತ ಸೂರಿಗಾಗಿ ಹೋರಾಟ - ಉಸ್ತುವಾರಿ ಸಚಿವರ ಭರವಸೆ

ಶಿವಮೊಗ್ಗ: ಅಲೆಮಾರಿಗಳಿಗೆ ಶಾಶ್ವತ ಸೂರಿಗಾಗಿ ಹೋರಾಟ – ಉಸ್ತುವಾರಿ ಸಚಿವರ ಭರವಸೆ

ಶಿವಮೊಗ್ಗದ ಅಂಬೇಡ್ಕರ್ ನಗರದ ಆದಿವಾಸಿಗಳಿಗೆ ಇದುವರೆಗೂ ಜಿಲ್ಲಾಡಳಿತ ಕನಿಷ್ಠ ಮೂಲಭೂತ ಸೌಲಭ್ಯ ಒದಿಗಿಸಿಲ್ಲ. ನೀರು, ರಸ್ತೆ, ಶೌಚಾಲಯ, ವಿದ್ಯುತ್ ವ್ಯವಸ್ಥೆ ಇಲ್ಲದೆ ಇಂದಿಗೂ ಪರಿತಪಿಸುತ್ತಿದ್ದಾರೆ.

- Advertisement -
- Advertisement -

ಹಲವು ದಶಕಗಳಿಂದ ಅಲೆಮಾರಿಗಳು ಅಲೆದು ಅಲೆದು ಸಾಕಾಗಿದ್ದಾರೆ. ಕೊರೊನಾ ಲಾಕ್‌ಡೌನ್ ಸಮಯವಂತೂ ಅವರನ್ನು ಇನ್ನಿಲ್ಲದ ಸಂಕಷ್ಟಕ್ಕೀಡುಮಾಡಿದೆ. ತುತ್ತು ಕೂಳಿಗಾಗಿ ಜೀವಮಾನವಿಡಿ ಅಲೆಯುತ್ತಲೇ ಇದ್ದ ಅವರಿಗೆ ಒಂದೆಡೆ ನೆಲೆನಿಂತು ತಮ್ಮ ಬದುಕು ಕಟ್ಟಿಕೊಳ್ಳುವ ಆಸೆಗೆ ಜಿಲ್ಲಾಡಳಿತವಾಗಲಿ, ಸರ್ಕಾರವಾಗಲಿ ಸ್ಪಂದಿಸುತ್ತಿಲ್ಲ. ಕೊನೆಗೆ ಅಲೆಮಾರಿಗಳು ಶಾಶ್ವತ ಸೂರಿಗಾಗಿ ಹೋರಾಟಕ್ಕಿಳಿದಿದ್ದು, ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಕ.ರಾ.ರೈ.ಸಂಘ ಮತ್ತು ಕರ್ನಾಟಕ ಜನಶಕ್ತಿ ಅವರ ಬೆಂಬಲಕ್ಕೆ ನಿಂತಿವೆ.

ಶಿವಮೊಗ್ಗದ ಅಂಬೇಡ್ಕರ್ ನಗರದಲ್ಲಿ (ಹಕ್ಕಿಪಿಕ್ಕಿ ಕಾಲೋನಿ) 350ಕ್ಕೂ ಹೆಚ್ಚು ಕುಟುಂಬಗಳ ಸಾವಿರಾರು ಜನರು ಕಳೆದ 8-10 ವರ್ಷಗಳಿಂದ ನೆಲೆಸಿದ್ದಾರೆ. ಅದಕ್ಕೂ ಮೊದಲು ಅವರು ತಮಗೊಂದು ಶಾಶ್ವತ ನೆಲೆ ಒದಗಿಸುವಂತೆ ಹಲವು ಬಾರಿ ಸರ್ಕಾರಕ್ಕೆ, ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಆಗ ಸರ್ಕಾರ ಹಾಯನೂರು ಹೋಬಳಿಯ ವೀರಣ್ಣನ ಬೆಳ್ಳಹಳ್ಳಿಯಲ್ಲಿ ಅವರಿಗೆ 4 ಎಕರೆ ಜಾಗ ಮಂಜೂರು ಮಾಡಿತ್ತು. ಆದರೆ ಬೆಳ್ಳಹಳ್ಳಿಯ ನಿವಾಸಿಗಳು ಅದಕ್ಕೆ ವಿರೋಧ ವ್ಯಕ್ತಪಡಿಸಿ ಅದು ಅರಣ್ಯ ಭೂಮಿಯೆಂದು ದಾವೆಯೂಡಿದ ಪರಿಣಾಮ ಅವರ ಶಾಶ್ವತ ನೆಲೆ ಆಸೆ ಕನಸಾಗಿಯೇ ಉಳಿಯಿತು.

ತದನಂತರ ಆ ಅಲೆಮಾರಿಗಳೆಲ್ಲರು ಶಿವಮೊಗ್ಗದ ಅಂಬೇಡ್ಕರ್ ನಗರಕ್ಕೆ ಬಂದು ನೆಲೆಸಿದರಾದರೂ ಅವರಿಗೆ ಇದುವರೆಗೂ ಜಿಲ್ಲಾಡಳಿತ ಕನಿಷ್ಠ ಮೂಲಭೂತ ಸೌಲಭ್ಯ ಒದಿಗಿಸಿಲ್ಲ. ನೀರು, ರಸ್ತೆ, ಶೌಚಾಲಯ, ವಿದ್ಯುತ್ ವ್ಯವಸ್ಥೆ ಇಲ್ಲದೆ ಇಂದಿಗೂ ಪರಿತಪಿಸುತ್ತಿದ್ದಾರೆ. ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡರೆ ಅದಕ್ಕೂ ಬಿಡದೇ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅಲ್ಲಿನ ನಿವಾಸಿಗಳು ದೂರುತ್ತಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಲೇಶಪ್ಪನವರು, “ಭಾರತದ ಪ್ರಜೆಗಳೇ ಆದ, ಚಿಂದಿ ಆಯುತ್ತಾ ನೈರ್ಮಲ್ಯ ಕಾಪಾಡುವುದರೊಂದಿಗೆ ಕಠಿಣ ಶ್ರಮ ಹಾಕಿ ದುಡಿಯುವ ಈ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿಕೊಡಬೇಕು, ಅವರಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಹಕ್ಕುಪತ್ರ ನೀಡಬೇಕೆನ್ನುವುದು ನಮ್ಮ ನಿರಂತರ ಆಗ್ರಹ. ಹಲವು ಹೋರಾಟಗಳ ಫಲವಾಗಿ ಡಿಸಿ, ಎಸಿ, ತಹಶೀಲ್ದಾರ್‌ರವರು ಸ್ಥಳಪರಿಶೀಲನೆ ನಡೆಸಿದ್ದಾರೆ. ಸ್ಲಂ ಬೋರ್ಡ್ ಅಧಿಕಾರಿಗಳು ಸಹ ಒಪ್ಪಿಗೆ ನೀಡಿದ್ದಾರೆ. ಸ್ಲಂ ಎಂದು ಘೋಷಿಸಲು ಎಲ್ಲರೂ ಅನಮತಿ ನೀಡಿದರೂ ಸಹ ನಗರ ಪಾಲಿಕೆಯ ನಿರ್ಲಕ್ಷ್ಯದಿಂದಾಗಿ ಇಲ್ಲಿನ ಜನ ಕಷ್ಟ ಅನುಭವಿಸುವಂತಾಗಿದೆ” ಎನ್ನುತ್ತಾರೆ.

ಹಾಲೇಶಪ್ಪ

ಇಲ್ಲಿನ ಜನರ ಹಕ್ಕೊತ್ತಾಯಗಳಿಗೆ ವಿರುದ್ಧವಾಗಿ ನಗರ ಪಾಲಿಗೆ ನಡೆದುಕೊಳ್ಳುತ್ತಿದೆ. ಅವರು ಅನಧಿಕೃತವಾಗಿ ಹಾಕಿಕೊಂಡಿದ್ದ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಅಧಿಕಾರಿಗಳು ಕಿತ್ತುಹಾಕಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನ ಕಳೆದ 2 ತಿಂಗಳಿನಿಂದಲೂ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಕುರಿತು ಅಂಬೇಡ್ಕರ್ ನಗರದ ಮೂಲನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಸ್ಲಂ ಎಂದು ಘೋಷಿಸುವಂತೆ ಒತ್ತಾಯಿಸಿ ಇಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪನವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಗಿದೆ. ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಲೇಶಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರು ಮತ್ತು ಕರ್ನಾಟಕ ಜನಶಕ್ತಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಲ್ ಅಶೋಕ್‌ರವರು ಉಸ್ತುವಾರಿ ಮಂತ್ರಿಗಳ ಬಳಿ ಒತ್ತಡ ತಂದಿದ್ದರೆ. ಒಂದು ವಾರದಲ್ಲಿ ತಮ್ಮ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಸಭೆ ನಡೆಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಈಗಲಾದರೂ ಈ ಅಲೆಮಾರಿಗಳಿಗೆ ನೆತ್ತಿಗೊಂದು ಸೂರು ಸಿಕ್ಕಿ ನೆಮ್ಮದಿಯಿಂದ ಬದುಕುವಂತಾಗಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು: ಭೂಮಿ ಹೋರಾಟದ ನಿರ್ಣಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...