Homeಕರ್ನಾಟಕಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು, ಉಮರ್ ಮತ್ತು ಅಬ್ರಾಹಾರ್ ಎಂದು ಗುರುತಿಸಲಾಗಿದೆ. ಎಫ್‌ಐಆರ್ ಪ್ರಕಾರ, ಆಗಸ್ಟ್ 24 ರಂದು ಭಾರತಿ ಸಭಾ ಭವನದ ಬಳಿಯಿದ್ದ ಕಟೌಟ್ ಮೇಲೆ ಈ ಮೂವರು ಹತ್ತಿ, ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿ, ಆ ದೃಶ್ಯವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ವಿಡಿಯೋವನ್ನು ನಂತರ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾಗಿತ್ತು.

ವಿಡಿಯೋ ಗಮನಕ್ಕೆ ಬಂದ ನಂತರ ದೊಡ್ಡಪೇಟೆ ಪೊಲೀಸರು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಾರ್ವಜನಿಕ ಶಾಂತಿಗೆ ಭಂಗ ತರುವ ಹೇಳಿಕೆಗಳು, ಸಮುದಾಯಗಳ ನಡುವೆ ವೈರತ್ವವನ್ನು ಉತ್ತೇಜಿಸುವುದು ಮತ್ತು ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವ ಆರೋಪಗಳಿಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 353(2), 196(1) ಮತ್ತು 197 ರ ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ. ಈ ಕೃತ್ಯ ಮತ್ತು ವಿಡಿಯೋದ ಹಂಚಿಕೆಯು ಶತ್ರುತ್ವವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಶಾಂತಿಯನ್ನು ಕದಡುವ ಸಾಧ್ಯತೆಯನ್ನು ಹೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರದ ವೇಳೆಗೆ, ವಿಚಾರಣೆಗಾಗಿ ನಿಹಾಲ್ ಉರುಫ್ ಕಟ್ಕುಟ್ ಉರುಫ್ ಬೆಕ್ಕುವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಉಮರ್ ಮತ್ತು ಅಬ್ರಾಹಾರ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಪೊಲೀಸ್ ಕ್ರಮವು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ವ್ಯಕ್ತವಾಗಿದ್ದು, ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸುವುದು ಕ್ರಿಮಿನಲ್ ಅಪರಾಧ ಹೇಗೆ ಆಗುತ್ತದೆ ಎಂದು ಬಳಕೆದಾರರು ಪ್ರಶ್ನಿಸುತ್ತಿದ್ದಾರೆ.

ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸುವುದು ಭಾರತೀಯ ಕಾನೂನಿನ ಅಡಿಯಲ್ಲಿ ಅಪರಾಧವಲ್ಲ ಎಂದು ಹಲವು ಬಳಕೆದಾರರು ವಾದಿಸಿದ್ದಾರೆ. ಭಾರತವು ಐತಿಹಾಸಿಕವಾಗಿ ‘ದ್ವಿ-ರಾಷ್ಟ್ರ ಪರಿಹಾರ’ವನ್ನು ಬೆಂಬಲಿಸುತ್ತಾ ಬಂದಿದೆ. ಯಾಸರ್ ಅರಾಫತ್ ಅವರ ಕಾಲದಿಂದಲೂ ಪ್ಯಾಲೆಸ್ತೀನ್‌ನೊಂದಿಗೆ ದೀರ್ಘಕಾಲದ ರಾಜತಾಂತ್ರಿಕ ಸಂಬಂಧಗಳನ್ನು ಹೊಂದಿದೆ ಎಂಬುದನ್ನು ನೆನಪಿಸಿದ್ದಾರೆ.

“ಶೋಷಿತ ಜನರೊಂದಿಗೆ ಐಕ್ಯತೆ ಪ್ರದರ್ಶಿಸುವುದು ಯಾವಾಗ ಅಪರಾಧವಾಯಿತು? ಪ್ಯಾಲೆಸ್ತೀನ್ನರು ನರಮೇಧವನ್ನು ಎದುರಿಸುತ್ತಿರುವಾಗ, ಅವರ ಧ್ವಜವನ್ನು ಎತ್ತಿ ಹಿಡಿಯುವವರನ್ನು ಅಪರಾಧಿಗಳನ್ನಾಗಿ ಮಾಡುವುದು ಕರ್ನಾಟಕ ಪೊಲೀಸರ ಸ್ಪಂದನೆಯೇ?” ಎಂದು ಎಕ್ಸ್‌ನಲ್ಲಿ ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ.

“ಇದು ಯಾವ ಕಾನೂನಿನ ಅಡಿಯಲ್ಲಿ ಅಪರಾಧ? ಭಾರತವು ದೀರ್ಘಕಾಲದಿಂದ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ಗೆ ದ್ವಿ-ರಾಷ್ಟ್ರ ಪರಿಹಾರವನ್ನು ಪ್ರತಿಪಾದಿಸುತ್ತಿದೆ” ಎಂದು ಮತ್ತೋರ್ವ ಬಳಕೆದಾರರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...