Homeಕರ್ನಾಟಕಶಿವಮೊಗ್ಗ: ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ; ಸಾಮಾಜಿಕ ಮಾಧ್ಯಮದಲ್ಲಿ ಖಂಡನೆ

ಶಿವಮೊಗ್ಗ: ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ; ಸಾಮಾಜಿಕ ಮಾಧ್ಯಮದಲ್ಲಿ ಖಂಡನೆ

- Advertisement -
- Advertisement -

ಶಿವಮೊಗ್ಗದ ಎನ್ ಇಎಸ್ ಮೈದಾನದಲ್ಲಿ  ಇಂದು (ಗುರುವಾರ) ಮಧ್ಯಾಹ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಬಾಂಧವರ ಸಮಾವೇಶದಲ್ಲಿ ಧ್ವನಿವರ್ಧಕದಲ್ಲಿ ತಮಿಳುನಾಡು ನಾಡಗೀತೆಯನ್ನು ಹಾಕಿ ಗೌರವ ಸಲ್ಲಿಸಲಾಗುತ್ತಿತ್ತು. ಈ ವೇಳೆ ಶಾಸಕ ಕೆಎಸ್ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು ಕರ್ನಾಟಕದ ನಾಡಗೀತೆ ಹಾಕಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಹ ಉಸ್ತುವಾರಿಯಾಗಿರುವ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ನಡೆಯುತ್ತಿರುವ ಕಾರಣಕ್ಕೆ ಮತ್ತು ಅಲ್ಲಿ ನೆರೆದಿರುವವರೆಲ್ಲರೂ ತಮಿಳರು ಆಗಿದ್ದರಿಂದ ಅವರ ಮತ ಸೆಳೆಯಲು ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ ಹಾಕಲಾಗಿತ್ತು. ಈ ಕಾರ್ಯಕ್ರಮದಲ್ಲಿ ಈಶ್ವರಪ್ಪ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ (ಚನ್ನಿ) ಕೂಡ ಪಾಲ್ಗೊಂಡಿದ್ದರು.

ಸಮಾವೇಶ ಆರಂಭವಾಗುತ್ತಿದ್ದಂತೆಯೇ ಸಂಘಟಕರು ಈಗ ತಮಿಳು ನಾಡಗೀತೆ ಆರಂಭವಾಗಲಿದೆ. ಎಲ್ಲರೂ ಎದ್ದು ನಿಂತುಕೊಳ್ಳಿ ಎಂದು ಮನವಿ ಮಾಡಿದರು. ಆಗ ಸಮಾವೇಶದಲ್ಲಿ ನೆರೆದವರ ಜೊತೆ ವೇದಿಕೆಯಲ್ಲಿದ್ದ ಈಶ್ವರಪ್ಪ ಸೇರಿದಂತೆ ಎಲ್ಲರೂ ಎದ್ದು ನಿಂತು ತಮಿಳುನಾಡು ನಾಡಗೀತೆಗೆ ಗೌರವ ಸಲ್ಲಿಸುತ್ತಿದ್ದರು.

ಈ ವೇಳೆ ಇದ್ದಕ್ಕಿದ್ದಂತೆ ಆಸನದ ಬಳಿಯಿಂದ ಡಯಾಸ್ ನತ್ತ ಬಂದ ಈಶ್ವರಪ್ಪ, ನಾಡಗೀತೆ ನಿಲ್ಲಿಸುವಂತೆ ಸಂಘಟಕರಿಗೆ ಸೂಚಿಸಿದರು. ಕರ್ನಾಟಕದ ನಾಡಗೀತೆ ಹಾಕಿಸಿದರು. ನಂತರ ವೇದಿಕೆಯಲ್ಲಿದ್ದ ಗಣ್ಯರು ಕನ್ನಡದ ನಾಡಗೀತೆಗೆ ಗೌರವ ಸಲ್ಲಿಸಿದರು.

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಮೇಕೆದಾಟು ವಿಚಾರದಲ್ಲಿ ಕರ್ನಾಟಕದ ವಿರುದ್ಧದ ನಿಲುವು ಹೊಂದಿದ್ದ ಅಣ್ಣಾಮಲೈ ಅವರನ್ನು ಕರ್ನಾಟಕದ ಚುನಾವಣಾ ಉಸ್ತುವಾರಿಯಾಗಿ ನೇಮಿಸುವ ಮೂಲಕ ಬಿಜೆಪಿ ಕನ್ನಡಿಗರ ಸ್ವಾಭಿಮಾನವನ್ನು ಅಣಕವಾಡಿದೆ. ಈಗ ಅಣ್ಣಾಮಲೈ ಮೆಚ್ಚಿಸಲು ಕರ್ನಾಟಕದ ನಾಡಗೀತೆಯ ಬದಲು ತಮಿಳುನಾಡಿನ ನಾಡಗೀತೆ ಹಾಡಲಾಗಿದೆ. ಬಿಜೆಪಿ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವುದೇಕೆ?” ಎಂದು ಕಿಡಿಕಾರಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ಪತ್ರಕರ್ತ ದಿನೇಶ್ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದು, ”ಅಣ್ಣಾಮಲೈ ಶಿವಮೊಗ್ಗದ ಬಿಜೆಪಿ ಪ್ರಚಾರ ಸಭೆಯಲ್ಲಿ ತಮಿಳು ನಾಡಗೀತೆ ಹಾಡಿಸಿ ಸುದ್ದಿಯಾಗಿದ್ದಾನೆ. ಮೊದಲೇ ಏಟಿನ ಮೇಲೆ ಏಟು ತಿಂದಿರುವ ರಾಜ್ಯ ಬಿಜೆಪಿ‌ ತಲೆ ಮೇಲೆ ಸುತ್ತಿಗೆಯಲ್ಲಿ ಬಾರಿಸಿದ್ದಾನೆ. ಇಷ್ಟೇ ಅಲ್ಲ, ಈತ ಕರ್ನಾಟಕದಲ್ಲಿ ಇರುವವರೆಗೆ ಒಂದಲ್ಲ ಒಂದು ತರಲೆ ಮಾಡುತ್ತಲೇ ಇರುತ್ತಾನೆ. ಅದಂತೂ ನಿಜ” ಎಂದು ಬರೆದಿದ್ದಾರೆ.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಈ ಬಗ್ಗೆ ಟ್ವೀಟ್ ಮಾಡಿದ್ದು, ”ಅಪ್ಪಟ ಕನ್ನಡಿಗರ ನಾಡು ಶಿವಮೊಗ್ಗ ಕುವೆಂಪು ಅವರ ನಾಡಿನಲ್ಲಿ ತಮಿಳು ನಾಡಗೀತೆ… ಈಗ ಚುನಾವಣಾ ಸಮಯ ವೋಟ್ ಗಾಗಿ ಏನ್ ಬೇಕೋ ಅದನ್ನು ಮಾಡಿ…” ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...