Homeಕರ್ನಾಟಕಶಿವಮೊಗ್ಗ: ಹೊಸ ವರ್ಷದ ಸಂಭ್ರಮಾಚರಣೆಗೆ ಗನ್‌ ಬಳಸುವ ವೇಳೆ ದುರಂತ; ಇಬ್ಬರ ದುರ್ಮರಣ

ಶಿವಮೊಗ್ಗ: ಹೊಸ ವರ್ಷದ ಸಂಭ್ರಮಾಚರಣೆಗೆ ಗನ್‌ ಬಳಸುವ ವೇಳೆ ದುರಂತ; ಇಬ್ಬರ ದುರ್ಮರಣ

- Advertisement -
- Advertisement -

ಹೊಸ ವರ್ಷದ ಆಚರಣೆಗಾಗಿ ಡಬ್ಬಲ್ ಬ್ಯಾರಲ್ ಗನ್‌ ಮೂಲಕ ಗುಂಡು ಹಾರಿಸಲು ಹೋಗಿ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿರುವ ದುರಂತ ಶಿವಮೊಗ್ಗ ನಗರದಲ್ಲಿ ನಡೆದಿದೆ.

ಇಲ್ಲಿನ ವಿದ್ಯಾನಗರದ 4ನೇ ಕ್ರಾಸ್‌ನಲ್ಲಿರುವ ಗೋಪಾಲ ಗ್ಲಾಸ್‌ಹೌಸ್ ಮಾಲೀಕ ಮಂಜುನಾಥ ಓಲೇಕಾರ ಅವರ ಮನೆಯಲ್ಲಿ ಈ ಅವಘಡ ನಡೆದಿದ್ದು ಸಂಭ್ರಮದ ಮನೆಯಲ್ಲಿ ಸೂತಕ ಆವರಿಸಿದೆ.

ಮಂಜುನಾಥ ಅವರ ಮನೆಯ ಮಹಡಿಯ ಮೇಲೆ ಹೊಸ ವರ್ಷದ ಸ್ವಾಗತಕ್ಕೆ ಪಾರ್ಟಿ ಹಮ್ಮಿಕೊಳ್ಳಲಾಗಿತ್ತು. ರಾತ್ರಿ 12 ಗಂಟೆ ಆಗುತ್ತಿದ್ದಂತೆಯೇ ಹೊಸ ವರ್ಷ ಸ್ವಾಗತಿಸಲು ಮಂಜುನಾಥ್ ಓಲೇಕಾರ (67) ಅವರು ಮನೆಯಲ್ಲಿದ್ದ ಡಬಲ್‌ ಬ್ಯಾರಲ್‌ ಗನ್‌ ಮೂಲಕ ಆಕಾಶದತ್ತ ಗುಂಡು ಹಾರಿಸಲು ಮುಂದಾಗಿದ್ದರು. ಇದೇ ಸಂದರ್ಭದಲ್ಲಿ ಗನ್‌ಗೆ ಬುಲೆಟ್‌ ತುಂಬಿಕೊಳ್ಳುವಾಗ ಅದು ಸಿಡಿದು ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಪುತ್ರನ ಸ್ನೇಹಿತ ವಿನಯ್ (34) ಅವರಿಗೆ ತಗುಲಿದೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಗಾಯಗೊಂಡ ವಿನಯ್ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಘಟನೆಯಿಂದ ಆಘಾತಕ್ಕೊಳಗಾದ ಮಂಜುನಾಥ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿನಯ್‌ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೋಟಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿದ್ದಾರೆ.

ರಾಜಸ್ಥಾನ: ಅಪಘಾತದಲ್ಲಿ ಐವರ ದುರ್ಮರಣ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ಹೊಸ ವರ್ಷದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಪೊಲೀಸರು ಮತ್ತು ದಾರಿಹೋಕರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದರು. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಬಿಕಾನೇರ್‌ಗೆ ಕರೆದೊಯ್ಯಲಾಗಿದೆ. ಪೊಲೀಸರು ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದಾರೆ. ಸಂಬಂಧಿಕರು ಆಗಮಿಸಿದ ಬಳಿಕ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, ಹನುಮಾನ್‌ಗಢ ಜಿಲ್ಲೆಯ ಪಲ್ಲು ಪೊಲೀಸ್ ಠಾಣೆ ವ್ಯಾಪ್ತಿಯ ಬಿಸ್ರಾಸರ್ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ತಡರಾತ್ರಿ ಇಲ್ಲಿ ಲಾರಿ ಮತ್ತು ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದಾರಿಹೋಕರ ಮಾಹಿತಿ ಮೇರೆಗೆ ಪಳ್ಳೂರು ಪೊಲೀಸರು ಸ್ಥಳಕ್ಕೆ ಧಾವಿಸಿದರು. ನಂತರ ದಾರಿಹೋಕರ ಸಹಾಯದಿಂದ ಪೊಲೀಸರು ಗಾಯಾಳುಗಳನ್ನು ಪಲ್ಲು ಆಸ್ಪತ್ರೆಗೆ ಕರೆದೊಯ್ದರು. ಗಾಯಗೊಂಡಿದ್ದ ಇಬ್ಬರು ಕೂಡ ಅಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಪ್ರಥಮ ಚಿಕಿತ್ಸೆ ನಂತರ ಬಿಕಾನೇರ್‌ಗೆ ರವಾನಿಸಲಾಗಿದೆ. ಅಪಘಾತದ ನಂತರ ಟ್ರಕ್ ಪಲ್ಟಿಯಾಗಿದ್ದು, ಅದರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ನ್ಯೂಯಾರ್ಕ್: ಅಧಿಕಾರಿಗಳಿಗೆ ಗಾಯ

ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಲ್ಲಿ ಹೊಸ ವರ್ಷದ ಮುನ್ನಾದಿನದ ಆಚರಣೆಯ ವೇಳೆ ಮಚ್ಚಿನಿಂದ ದಾಳಿ ಮಾಡಲಾಗಿದೆ. ಹೀಗಾಗಿ ನ್ಯೂಯಾರ್ಕ್ ನಗರದ ಮೂವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ 10 ಗಂಟೆಯ ನಂತರ ಈ ಘಟನೆ ನಡೆದಿದೆ. ಶಂಕಿತ ವ್ಯಕ್ತಿಯು ಅಧಿಕಾರಿಯ ಬಳಿಗೆ ಬಂದು ಮಚ್ಚಿನಿಂದ ತಲೆಯ ಮೇಲೆ ಹೊಡೆಯಲು ಪ್ರಯತ್ನಿಸಿದನು ಎಂದು ಕಮಿಷನರ್ ಕೀಚಂಟ್ ಸೆವೆಲ್ ಹೇಳಿದ್ದಾರೆ. ಅಧಿಕಾರಿಗಳ ಭುಜಕ್ಕೆ ಆತ ಗುಂಡು ಹಾರಿಸುವ ಮೊದಲು ಇಬ್ಬರು ಅಧಿಕಾರಿಗಳ ತಲೆಗೆ ಬ್ಲೇಡ್‌ನಿಂದ ಹೊಡೆದಿದ್ದಾನೆ. ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಸೆವೆಲ್ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...