Homeಮುಖಪುಟಶಿವಮೊಗ್ಗ: ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಸಾವು ಎಂಬುವುದು ಸುಳ್ಳು: ಎಸ್ಪಿ ಸ್ಪಷ್ಟನೆ

ಶಿವಮೊಗ್ಗ: ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಸಾವು ಎಂಬುವುದು ಸುಳ್ಳು: ಎಸ್ಪಿ ಸ್ಪಷ್ಟನೆ

- Advertisement -
- Advertisement -

ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಬಳಿಕ ನಡೆದ ಬೆಳವಣಿಗೆಯಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಮೃತಪಟ್ಟಿದ್ದಾನೆ ಎಂದು ಹೇಳುವ ಧ್ವನಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಇದು ಸುಳ್ಳು, ಇಂತಹ ಯಾವುದೇ ಘಟನೆಗಳು ನಡೆದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾದ್ಯಮಗಳಿಗೆ ಸ್ಪಷ್ಟನೆ ನೀಡಿದ ಎಸ್ಪಿ ಮಿಥುನ್ ಕುಮಾರ್, ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿ ಕೊಡಬೇಡಿ. ಪೊಲೀಸರಿಂದ ಎನ್‌ಕೌಂಟರ್‌ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ. ಮೆಸೇಜ್ ಹಾಕಿದವರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ ಎಂದು ತಿಳಿಸಿದರು.

ಇದಲ್ಲದೆ ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಒಮ್ನಿ ವಾಹನಗಳಲ್ಲಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ ಎಸ್ಪಿ, ಒಮ್ನಿ ವಾಹನದಲ್ಲಿ ಬಂದವರು ದಾವಣಗೆರೆ ಜಿಲ್ಲೆ ನ್ಯಾಮತಿಯವರು. ವಾಹನದಲ್ಲಿ ಮುಸ್ಲಿಮರು ಮಾತ್ರವಲ್ಲ ಹಿಂದೂಗಳು ಇದ್ದರು. ಎಲ್ಲರೂ ಸ್ನೇಹಿತರು. ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ನೋಡಲು ಬಂದವರು ರಾಗಿಗುಡ್ಡಕ್ಕೂ ಬಂದಿದ್ದಾರೆ. ಅಲ್ಲಿ ಗಲಾಟೆ ಆರಂಭವಾಗುತ್ತಿದ್ದಂತೆ ಅವರೆಲ್ಲರೂ ಊರಿಗೆ ವಾಪಾಸ್ಸು ಹೋಗಿದ್ದಾರೆ ಎಂದು ಹೇಳಿದ್ದಾರೆ.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಮೀಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಘಟನೆಯ ಬೆನ್ನಲ್ಲಿ  ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

ನಿಷೇಧಾಜ್ಞೆ ಸಂದರ್ಭ ಐದು ಜನರಿಗಿಂತಲು ಹೆಚ್ಚು ಜನರು ಗುಂಪುಗೂಡುವುದು ಮತ್ತು ಓಡಾಡುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಮೆರವಣಿಗೆ, ಪ್ರತಿಭಟನೆ, ಸಭೆ, ಸಮಾರಂಭಗಳಿಗೆ ಅವಕಾಶ ನಿರಾಕರಿಸಲಾಗಿದೆ.

ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಮತ್ತು ನಗರದಲ್ಲಿ ಶಾಂತಿ ಮರುಸ್ಥಾಪನೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ: ಶಿವಮೊಗ್ಗ: ಮೀಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...