Homeಕರ್ನಾಟಕಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಮತ್ತೆ 12 ಮಂದಿ ಪೊಲೀಸ್ ವಶಕ್ಕೆ- ಆರಗ ಜ್ಞಾನೇಂದ್ರ

ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಮತ್ತೆ 12 ಮಂದಿ ಪೊಲೀಸ್ ವಶಕ್ಕೆ- ಆರಗ ಜ್ಞಾನೇಂದ್ರ

- Advertisement -
- Advertisement -

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ 28 ವರ್ಷದ ಹರ್ಷ ಕೊಲೆಗೆ ಸಂಬಂಧಿಸಿದಂತೆ ಸುಮಾರು 12 ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಫೆಬ್ರವರಿ 20ರ ಭಾನುವಾರ ತಡರಾತ್ರಿ ಶಿವಮೊಗ್ಗದ ಭಾರತಿ ಕಾಲೋನಿಯಲ್ಲಿ ಹರ್ಷ ಎಂಬ 26 ವರ್ಷದ ಬಜರಂಗದಳದ ಸದಸ್ಯನನ್ನು ಯುವಕರ ತಂಡವು ಕಾರಿನಲ್ಲಿ ಸ್ಥಳಕ್ಕೆ ಆಗಮಿಸಿ ಕೊಂದಿದ್ದಾರೆ. ದಾಳಿಯ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಹರ್ಷ ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣವು ಹೆಚ್ಚಿನ ಉದ್ವಿಗ್ನತೆಗೆ ಕಾರಣವಾಗಿದೆ.

“ಪ್ರಕರಣದಲ್ಲಿ ಮೂವರನ್ನು ಈಗಾಗಲೇ ಬಂಧಿಸಲಾಗಿದೆ. ಸುಮಾರು 12 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಎಲ್ಲರ ವಿಚಾರಣೆ ನಡೆಯುತ್ತಿದೆ”. ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ. ಘಟನೆ ನಡೆದಿರುವುದು ಹಿಜಾಬ್ ವಿಷಯಕ್ಕಾ…?, ಯಾವುದಾದರೂ ಮತೀಯ ಸಂಘಟನೆಯ ಹಿನ್ನೆಲೆ ಇದೆಯಾ..? ಕೃತ್ಯಕ್ಕೆ ಯಾರು ಹಣ ಒದಗಿಸಿದ್ದಾರೆ..? ಯಾರು ವಾಹನ ಒದಗಿಸಿದ್ದಾರೆ..? ಎಂಬ ಅಂಶಗಳನ್ನು ತನಿಖೆ ಮಾಡುತ್ತಿದ್ದೇವೆ. ಈ ರೀತಿಯ ಕೊಲೆಗಳು ನಿಲ್ಲಬೇಕು. ಹರ್ಷನ ಕೊಲೆಯೇ ಕೊನೆಯದಾಗಬೇಕು” ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ: ಸರ್ಕಾರ ಎಸಗುತ್ತಿರುವ ಲೋಪಗಳತ್ತ ಜನಾಕ್ರೋಶ

 

ಕೊಲೆ ಪ್ರಕರಣದಲ್ಲಿ ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಈ ಹಿಂದೆ ತಿಳಿಸಿದ್ದರು. ವರದಿಗಳ ಪ್ರಕಾರ ಐವರನ್ನು ವಶಕ್ಕೆ ಪಡೆದಿದ್ದು, ಇಬ್ಬರ ಹೆಸರನ್ನು ಮಾತ್ರ ಬಹಿರಂಗಪಡಿಸಲಾಗಿದೆ.

ನಗರದಲ್ಲಿ ವಾತಾವರಣ ತಿಳಿಯಾಗದ ಕಾರಣ ಬುಧವಾರ ಬೆಳಗಿನ ಜಾವ 6 ಗಂಟೆಯತನಕ ಸೆಕ್ಷನ್ 144 ರ ಅಡಿಯಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ.

ಮೃತನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ಹಿಂದೂ, ಹಿಂದುತ್ವ ಎಂದಿದ್ದಕ್ಕೆ ನನ್ನ ತಮ್ಮ ಆ ರೀತಿಯಲ್ಲಿ ಬಿದ್ದಿದ್ದಾರೆ. ನನ್ನೆಲ್ಲ ಹಿಂದೂ, ಮುಸ್ಲಿಂ ಸಹೋದರರಿಗೆ ಕೇಳಿಕೊಳ್ಳುತ್ತೇನೆ. ಅಪ್ಪ ಅಮ್ಮನಿಗೆ ಒಳ್ಳೆಯ ಮಕ್ಕಳಾಗಿರಿ, ಇದನ್ನೆಲ್ಲ ಮಾಡಿಕೊಳ್ಳಬೇಡಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಬಜರಂಗದಳ ಸದಸ್ಯನ ಕೊಲೆಯ ಹಿಂದೆ ಸಂಘಟನೆಗಳಿರುವ ಮಾಹಿತಿ ಸಿಕ್ಕಿಲ್ಲ: ಗೃಹಸಚಿವ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. 12 ಜನರಿಂತ ಹೆಚ್ಚು ಜನ ಇದಾರೆ ಅಂತ ಹೇಳಿ ಅದರಲ್ಲಿ 5 ಜನರನ್ನು ಅರೆಸ್ಟ್ ಮಾಡಿದರೆ ಅಂತಾನೂ ಹೇಳಿ ಕೇವಲ ಇಬ್ಬರ ಹೆಸರು ಬಹಿರಂಗ ಮಾಡಿಯಿರುವದು ಯಾಕೆ ?

    ಇನ್ನು ಉಳಿದ ಮೂರು ಜನದ ಹೆಸರು ಹಿಂದೂ ಹೆಸರುಗಳು ಇವೆ ನಾ?

LEAVE A REPLY

Please enter your comment!
Please enter your name here

- Advertisment -

Must Read

ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ...

0
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬನ್ಸ್ವಾರಾದಲ್ಲಿ ಮುಸ್ಲಿಮರ ವಿರುದ್ಧ ಮಾಡಿದ್ದ ದ್ವೇಷ ಭಾಷಣ ಜಾಗತಿಕ ಮಾದ್ಯಮಗಳಲ್ಲಿ ಭಾರೀ ಸುದ್ದಿಯಾಗಿದ್ದು, ಮೋದಿ ಮತ್ತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದಾರೆ. 'ಕೊಳಕು ಭಾಷಣ’ ಆದರೆ...