Homeಮುಖಪುಟಚುನಾವಣಾ ಆಯೋಗದೊಂದಿಗೆ ₹ 2,000 ಕೋಟಿ ಡೀಲ್ ಮಾಡಿದ ಶಿಂಧೆ ಬಣ: ಸಂಜಯ್ ರಾವತ್ ಆರೋಪ

ಚುನಾವಣಾ ಆಯೋಗದೊಂದಿಗೆ ₹ 2,000 ಕೋಟಿ ಡೀಲ್ ಮಾಡಿದ ಶಿಂಧೆ ಬಣ: ಸಂಜಯ್ ರಾವತ್ ಆರೋಪ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವು ಶಿವಸೇನೆಯ ಮೂಲ ಹೆಸರು ಮತ್ತು ಅದರ ಬಿಲ್ಲು-ಬಾಣದ ಚಿಹ್ನೆಯನ್ನು ಪಡೆಯಲು ಭಾರತದ ಚುನಾವಣಾ ಆಯೋಗದೊಂದಿಗೆ ₹ 2,000 ಕೋಟಿ ವ್ಯವಹಾರ ಮಾಡಿಕೊಂಡಿದೆ ಎಂದು ಶಿವಸೇನೆಯ (ಯುಬಿಟಿ) ನಾಯಕ ಸಂಜಯ್ ರಾವತ್ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಜಯ್ ರಾವತ್ ಅವರು, ”ಪಕ್ಷದ ಹೆಸರು ಮತ್ತು ಚಿಹ್ನೆ ಪಡೆಯಲು 2000 ಕೋಟಿ ರೂ.ನಷ್ಟು ಡೀಲ್‌ ನಡೆದಿದೆ ಎಂಬುದು ನನಗೆ ಖಚಿತವಾಗಿ ತಿಳಿದುಬಂದಿದೆ. ಇದು ಕೇವಲ ಪ್ರಾಥಮಿಕ ಡೇಟಾ ಮತ್ತೆ ಇದು ನೂರಕ್ಕೆ ನೂರರಷ್ಟು ಇದು ಸತ್ಯವಾಗಿದೆ. ಇನ್ನೂ ಇದರ ಬಗ್ಗೆ ಶೀಘ್ರದಲ್ಲೇ ಹಲವು ವಿಷಯಗಳು ಬಹಿರಂಗಗೊಳ್ಳಲಿವೆ. ದೇಶದ ಇತಿಹಾಸದಲ್ಲಿ ಈ ರೀತಿ ಆಗಿಲ್ಲ” ಎಂದು ರಾವತ್ ಟ್ವೀಟ್ ಮಾಡಿದ್ದಾರೆ.

”ಈ ವ್ಯವಹಾರ ನಡೆದಿರುವ ಬಗ್ಗೆ ನನ್ನ ಬಳಿ ಸಾಕ್ಷ್ಯಗಳಿವೆ. ಆದಷ್ಟು ಬೇಗ ಅವುಗಳನ್ನು ಬಹಿರಂಗಪಡಿಸುತ್ತೇನೆ. ಸರ್ಕಾರಕ್ಕೆ ಹತ್ತಿರವಿರುವ ಬಿಲ್ಡರ್‌ವೊಬ್ಬರು ನನ್ನೊಂದಿಗೆ ಎಲ್ಲ ಮಾಹಿತಿಯನ್ನು ಹಂಚಿಕೊಂಡಿದ್ದಾರೆ” ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಭಾರತದ ಚುನಾವಣಾ ಆಯೋಗವು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಗುರುತಿಸಿದ ರೀತಿ ನ್ಯಾಯವಲ್ಲ, ಅದು “ವ್ಯವಹಾರ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

”ಈ ಪ್ರಕರಣದಲ್ಲಿ ಇಲ್ಲಿಯವರೆಗೆ 2,000 ಕೋಟಿ ರೂ. ವ್ಯವಹಾರ ನಡೆದಿದೆ. ಇದು ನನ್ನ ಪ್ರಾಥಮಿಕ ಮಾಹಿತಿಯಾಗಿದೆ. ಅವರ ಪರವಾದ ಈ ನಿರ್ಧಾರವನ್ನು ಖರೀದಿಸಲಾಗಿದೆ” ಎಂದು ರಾಜ್ಯಸಭಾ ಸದಸ್ಯ ರಾವತ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಇಂದಿರಾ ಗಾಂಧಿ ಕಾಂಗ್ರೆಸ್ ಚಿಹ್ನೆ ಕಳೆದುಕೊಂಡಿದ್ದನ್ನು ಠಾಕ್ರೆಗೆ ನೆನಪಿಸಿದ ಶರದ್ ಪವಾರ್

”ಶಾಸಕರೊಬ್ಬರನ್ನು ₹ 50 ಕೋಟಿಗೆ, ಸಂಸದರನ್ನು ₹ 100 ಕೋಟಿಗೆ, ನಮ್ಮ ಕೌನ್ಸಿಲರ್‌ ಮತ್ತು ಶಾಖಾ ಪ್ರಮುಖರನ್ನು ₹ 1 ಕೋಟಿಗೆ ಬಿಡ್‌ ಮಾಡಿ ಕೊಂಡುಕೊಳ್ಳುವ ಈ ಸರ್ಕಾರ, ನಿರ್ಲಜ್ಜರ ಗುಂಪು ಎಂದು ಕಿಡಿಕಾರಿದ್ದಾರೆ. ಇನ್ನೂ ನೀವೇ ಊಹಿಸಿಕೊಳ್ಳಿ, ಪಕ್ಷದ ಚಿಹ್ನೆ ಮತ್ತು ಪಕ್ಷದ ಹೆಸರನ್ನು ಖರೀದಿಸಲು ಅವರು ಎಷ್ಟು ಬಿಡ್ ಮಾಡಬಹುದೆಂದು.. ನನಗೆ ತಿಳಿದ ಮಾಹಿತಿ ಪ್ರಕಾರ ₹ 2,000 ಕೋಟಿ” ಎಂದು ರಾವತ್ ಆರೋಪಿಸಿದ್ದಾರೆ.

ಏಕನಾಥ್ ಶಿಂಧೆ ಬಣದ ಶಾಸಕ ಸದಾ ಸರ್ವಂಕರ್ ಅವರು, ಈ ಆರೋಪವನ್ನು ತಳ್ಳಿಹಾಕಿದ್ದು, “ಸಂಜಯ್ ರಾವುತ್ ಏನು ಕ್ಯಾಷಿಯರ್?” ಎಂದು ಪ್ರಶ್ನೆ ಮಾಡಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆ ಎಂದು ಗುರುತಿಸಿ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಚುನಾವಣಾ ಆಯೋಗವು ನಿಗದಿಪಡಿಸಿದೆ. ಉದ್ದವ್ ಠಾಕ್ರೆ ಬಣಕ್ಕೆ ‘ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ)’ ಎಂಬ ಹೆಸರು ಮತ್ತು ‘ಪಂಜು’ (ಉರಿಯುತ್ತಿರುವ ಟಾರ್ಚ್) ಚಿಹ್ನೆಯನ್ನು ಚುನಾವಣಾ ಆಯೋಗವು ನೀಡಿದೆ.

ಶುಕ್ರವಾರ ಸಂಜೆ, ಶಿಂಧೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ”ಚುನಾವಣಾ ಆಯೋಗದ ನಿರ್ಧಾರವು ಸತ್ಯ ಮತ್ತು ಜನರ ವಿಜಯವಾಗಿದೆ. ನಾನು ಚುನಾವಣಾ ಆಯೋಗಕ್ಕೆ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವದಲ್ಲಿ ಬಹುಮತ ಪರಿಗಣನೆಯಾಗುತ್ತದೆ” ಎಂದು ತಿಳಿಸಿದ್ದಾರೆ.

”ಚುನಾವಣಾ ಆಯೋಗವು ಅರ್ಹತೆಯ ಆಧಾರದಲ್ಲಿ ನಿರ್ಧಾರ ಕೈಗೊಂಡಿದೆ” ಎಂದು ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಠಾಕ್ರೆ ಬಣದ ಸಂಸದ ಸಂಜಯ್ ರಾವುತ್ ಪ್ರತಿಕ್ರಿಯಿಸಿ, ”ಚುನಾವಣಾ ಆಯೋಗದ ನಿರ್ಧಾರವು ಪ್ರಜಾಪ್ರಭುತ್ವದ ಕೊಲೆಯಾಗಿದೆ ಎಂದು ಬಣ್ಣಿಸಿದ್ದಾರೆ. ನಾವು ಈ ನಿರ್ಧಾರವನ್ನು ಪ್ರಶ್ನಿಸುತ್ತೇವೆ. ಇಂತಹ ನಿರ್ಧಾರವನ್ನು ನಿರೀಕ್ಷಿಸಲಾಗಿತ್ತು. ಇದೆಲ್ಲವೂ ಒತ್ತಡದಲ್ಲಿ ನಡೆದಿದೆ. ನನಗೆ ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...