ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ, ಔರಂಗಾಬಾದ್ ಮತ್ತು ಒಸ್ಮಾನಾಬಾದ್ ಜಿಲ್ಲೆಗಳ ಹೆಸರನ್ನು ಕ್ರಮವಾಗಿ ಛತ್ರಪತಿ ಸಂಭಾಜಿನಗರ ಮತ್ತು ಧರಾಶಿವ್ ಎಂದು ಬದಲಾಯಿಸಿದೆ.
ಈ ಕುರಿತು ಮಹಾರಾಷ್ಟ್ರ ಸರ್ಕಾರದ ಅಧೀನದಲ್ಲಿನ ಕಂದಾಯ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಶಿಂದೆ ಸರ್ಕಾರವು ಕಳೆದ ಜುಲೈನಲ್ಲಿ ಔರಂಗಾಬಾದ್ ಮತ್ತು ಒಸ್ಮಾನಾಬಾದ್ ನಗರಗಳನ್ನು ಕ್ರಮವಾಗಿ ಛತ್ರಪತಿ ಸಂಭಾಜಿನಗರ ಮತ್ತು ಧಾರಾಶಿವ ಎಂದು ಮರುನಾಮಕರಣ ಮಾಡಲು ನಿರ್ಧರಿಸಿತ್ತು.
2022ರ ಜೂನ್ 29ರಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಹಿಂದಿನ ಮಹಾ ವಿಕಾಸ್ ಅಘಾಡಿ ಸರ್ಕಾರದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಔರಂಗಾಬಾದ್ ಮತ್ತು ಒಸ್ಮಾನಾಬಾದನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.
ಮಹಾ ವಿಕಾಸ್ ಅಘಾಡಿ ಸರ್ಕಾರದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಔರಂಗಾಬಾದ್‌ನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡಲಾಗಿತ್ತು, ಆದರೆ ಶಿಂದೆ ಸರ್ಕಾರವು ಅದಕ್ಕೆ ಛತ್ರಪತಿಯನ್ನು ಸೇರಿಸಿದೆ.
ಕಳೆದ ಜುಲೈನಲ್ಲಿ ಶಿಂದೆ ಸರ್ಕಾರವು ಔರಂಗಾಬಾದ್ ಮತ್ತು ಒಸ್ಮಾನಾಬಾದ್ ನಗರಗಳನ್ನು ಕ್ರಮವಾಗಿ ಛತ್ರಪತಿ ಸಂಭಾಜಿನಗರ ಮತ್ತು ಧಾರಾಶಿವ ಎಂದು ಮರುನಾಮಕರಣ ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.
ಇದನ್ನು ಓದಿ: ಹಿಂಸಾಚಾರ, ಅಸಮಾನತೆ, ರೈತರ-ಕಾರ್ಮಿಕರ ಸ್ಥಿತಿಗತಿ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಖರ್ಗೆ


