Homeಮುಖಪುಟಶಿಂಧೆ ಹಠ ಹಿಡಿದಿದ್ದರೆ, ಬಿಜೆಪಿ ಅವರನ್ನು ಬಿಟ್ಟು ಮುಂದೆ ಸಾಗುತ್ತಿತ್ತು - ಸಂಜಯ್ ರಾವತ್

ಶಿಂಧೆ ಹಠ ಹಿಡಿದಿದ್ದರೆ, ಬಿಜೆಪಿ ಅವರನ್ನು ಬಿಟ್ಟು ಮುಂದೆ ಸಾಗುತ್ತಿತ್ತು – ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಏಕನಾಥ್ ಶಿಂಧೆ ಅವರು ಬಿಜೆಪಿ ಜೊತೆಗೆ ‘ಹಠಮಾರಿ’ ಧೋರಣೆ ಮುಂದುವರೆಸಿದ್ದರೆ, ಹೊಸ ಸರ್ಕಾರದ ಪ್ರಮಾಣ ವಚನದಲ್ಲಿ ಅವರು ಇಲ್ಲದೆ  ಮುಂದುವರೆಯಲು ಬಿಜೆಪಿಯ ವರಿಷ್ಠರು ಯೋಜಿಸಿದ್ದರು ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಶುಕ್ರವಾರ ಹೇಳಿದ್ದಾರೆ. ಶಿಂಧೆ ಹಠ ಹಿಡಿದಿದ್ದರೆ

ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, ಮಹಾಯುತಿಗೆ ಭಾರಿ ಬಹುಮತ ಬಂದರೂ ರಾಜ್ಯ ಸರಕಾರಕ್ಕೆ ಇದುವರೆಗೂ ಪೂರ್ಣ ಪ್ರಮಾಣದ ಸಚಿವ ಸಂಪುಟ ಇಲ್ಲದೇ ಇರುವುದು ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದನ್ನು ಸೂಚಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಭಾರಿ ಜನಾದೇಶದ ಹೊರತಾಗಿಯೂ ಬಿಜೆಪಿ ಸರ್ಕಾರ ರಚಿಸಲು 15 ದಿನಗಳನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ. ಶಿಂಧೆ ಹಠ ಹಿಡಿದಿದ್ದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಏಕನಾಥ್ ಶಿಂಧೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಬೇಕಿತ್ತು. ಏಕನಾಥ್ ಶಿಂಧೆ ಇಲ್ಲದೆಯೇ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ಮುಂದಾಗಿತ್ತು. ಬಿಜೆಪಿ ಮೇಲೆ ಒತ್ತಡ ಹೇರುವ ಹಠಮಾರಿ ಧೋರಣೆ ತಾಳಿದ್ದರೆ, ಅವರು ಇಲ್ಲದೆ ಮುಂದುವರೆಯುವಂತೆ ರಾಜ್ಯ ಬಿಜೆಪಿ ನಾಯಕತ್ವಕ್ಕೆ ಪಕ್ಷದ ವರಿಷ್ಠರು ತಿಳಿಸಿದ್ದರು.” ಎಂದು ರಾವತ್ ಹೇಳಿಕೊಂಡಿದ್ದಾರೆ.

ಮುಂಬೈನ ಆಜಾದ್ ಮೈದಾನದಲ್ಲಿ ಗುರುವಾರ ಸಂಜೆ ನಡೆದ ಅದ್ಧೂರಿ ಸಮಾರಂಭದಲ್ಲಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮೂರನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಾಜಿ ಮುಖ್ಯಮಂತ್ರಿ ಏಕಾಂತ್ ಶಿಂಧೆ ಮತ್ತು ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಏಕನಾಥ್ ಶಿಂಧೆಗೆ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಇಷ್ಟವಿರಲಿಲ್ಲ, ಆದರೆ ಬಿಜೆಪಿ ಮತ್ತು ಅವರ ಪಕ್ಷದ ಶಾಸಕರ ಒತ್ತಾಯದ ನಂತರ ಅವರು ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಸೇರಿದ್ದರು. ಹೊಸ ಸರ್ಕಾರದ ಭಾಗವಾಗುತ್ತೇನೋ ಇಲ್ಲವೋ ಎಂಬ ಬಗ್ಗೆ ಅವರು ಮೌನ ತಾಳಿದ್ದರು. ಪ್ರಮಾಣವಚನ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಶಿವಸೇನೆಯ ಶಾಸಕರೊಬ್ಬರು ಶಿಂಧೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಖಚಿತಪಡಿಸಿದ್ದರು.

ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಬಿಜೆಪಿ ರಾಜ್ಯದಲ್ಲಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ರಾವತ್ ಆರೋಪಿಸಿದ್ದಾರೆ. ಶಿಂಧೆ ವಿರುದ್ಧ ದಾಳಿ ಮಾಡಿದ ಅವರು ಪ್ರಮಾಣವಚನ ಸಮಾರಂಭದಲ್ಲಿ ಕೆಲವು ಮುಖಗಳು ಸಂತೋಷವಾಗಿರಲಿಲ್ಲ ಎಂದು ಹೇಳಿದ್ದಾರೆ. 2019 ರಲ್ಲಿ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಅದೇ ಮುಖಗಳು ಅಸ್ಪಷ್ಟವಾಗಿದ್ದವು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಮೋದಿ ಅದಾನಿ ಭಾಯಿ ಭಾಯಿ..’; ಕಪ್ಪು ಮಾಸ್ಕ್‌ ಧರಿಸಿ ವಿಪಕ್ಷ ಸಂಸದರಿಂದ ಪ್ರತಿಭಟನಾ ಮೆರವಣಿಗೆ

‘ಮೋದಿ ಅದಾನಿ ಭಾಯಿ ಭಾಯಿ..’; ಕಪ್ಪು ಮಾಸ್ಕ್‌ ಧರಿಸಿ ವಿಪಕ್ಷ ಸಂಸದರಿಂದ ಪ್ರತಿಭಟನಾ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...