Homeಕರ್ನಾಟಕಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಈ ಮಟ್ಟದ ಹಣದ ಹೊಳೆ ಹರಿದಿರುವುದು ಶಿರಾ ಚುನಾವಣೆಯ ಇತಿಹಾಸದಲ್ಲೇ ಇದೇ ಮೊದಲು ಎನ್ನಲಾಗುತ್ತಿದೆ.

- Advertisement -
- Advertisement -

ಶಿರಾ ಉಪಚುನಾವಣೆಯ ಮತದಾನ ಅಂತ್ಯಗೊಂಡಿದೆ. ಮೂರು ಪಕ್ಷದ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ದಾಖಲಾಗಿದೆ. ಉಪಚುನಾವಣೆಯಲ್ಲಿ ಶೇ.84.31 ರಷ್ಟು ಮತದಾನವಾಗಿದ್ದು ಎರಡು ಹೋಬಳಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಗಳ ನಡುವೆ ಮತ್ತು ಗೌಡಗೆರೆ ಹೋಬಳಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಅಧಿಕ ಮತ ಗಳು ಹಂಚಿಕೆಯಾಗಿರುವುದು ಆಯಾ ಪಕ್ಷಗಳು ನಡೆಸಿರುವ ಆಂತರಿಕ ಸಮೀಕ್ಷೆಗಳಿಂದ ತಿಳಿದುಬಂದಿದೆ. ಕ್ಷೇತ್ರದಲ್ಲಿ ಮೂರು ಅಭ್ಯರ್ಥಿಗಳಲ್ಲಿ ಯಾರನ್ನೂ ನಿರ್ಲಕ್ಷಿಸುವಂತಿಲ್ಲ ಎನ್ನುತ್ತಾರೆ ಮತದಾರರು.

ಕೆಲವೊಂದು ಹಟ್ಟಿಗಳಲ್ಲಿ ಬಹುತೇಕ ಮತದಾರರ ಮತಗಳು ಹಾಗೂ ಶಿರಾ ನಗರದ ನಾಲ್ಕು ವಾರ್ಡುಗಳಲ್ಲಿ ಹೆಚ್ಚಿನ ಮತಗಳು ಬಿಜೆಪಿ ಪಾಲಾಗಿವೆ. ಉಳಿದ ಕಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ನಡುವೆ ಮತಗಳು ಹಂಚಿಹೋಗಿವೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಯ ಗೆಲುವು ಖಚಿತ ಎಂದು ಹೇಳುತ್ತಿದ್ದರೂ ಫಲಿತಾಂಶ ಬೇರೆಯೇ ಇದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಕಂಡುಬಂದಿದ್ದರೆ, ಜೆಡಿಎಸ್ 3 ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ಚುನಾವಣಾ ಪ್ರಚಾರ ಅಂತ್ಯಗೊಂಡ ದಿನದಂದು ನಡೆದ ಘಟನೆ ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡಲು ಕಾರಣ. ನವೆಂಬರ್ 1 ರಂದು ಶಿರಾ ನಗರದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಸಮಾವೇಶದಲ್ಲಿ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಮಾತನಾಡುತ್ತಿದ್ದರು. ಈ ಸಮಯದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಬಂದು ಗೌರಿಶಂಕರ್ ಅವರಿಗೆ ಭಾಷಣ ನಿಲ್ಲಿಸುವಂತೆ ತಾಕೀತು ಮಾಡಿದ್ದಾರೆ. ಇದರಿಂದ ಅಸಮಾಧಾನಗೊಂಡ ಗೌರಿಶಂಕರ್ ಸಿಟ್ಟಾಗಿ ಮೈಕ್ ಎಸೆದು ವೇದಿಕೆಯಿಂದ ಇಳಿದು ಹೋಗಿದ್ದಾರೆ.

ಈ ಘಟನೆ ನಂತರ ಕಾರ್ಯಕರ್ತರು ಕೂಡ ಒಬ್ಬೊಬ್ಬರಾಗಿ ಹೊರಟು ಹೋದರೆಂದು, ಕೊನೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡುವ ವೇಳೆಗೆ ಕೇವಲ 100 ಮಂದಿ ಕಾರ್ಯಕರ್ತರು ಮಾತ್ತ ಇದ್ದರು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಪ್ರಚಾರ ಮುಗಿದ ದಿನ ನಡೆದಿರುವ ಈ ಘಟನೆ ಮತದಾನದ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಜೆಡಿಎಸ್ ವರಿಷ್ಠರ ಶ್ರಮ ನೀರಿನಲ್ಲಿ ಹುಣಿಸೆಹಣ್ಣು ತೊಳೆದಂತೆ ವ್ಯರ್ಥವಾಗಿದೆ. ನಿಜವಾಗಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ ಮುಖಂಡರನ್ನು ಬಿಟ್ಟು ನಿಖಿಲ್ ಕುಮಾರಸ್ವಾಮಿ ಅವರಿಗೆ ಮಾತನಾಡಲು ಅವಕಾಶ ಕಲ್ಪಿಸಿದ್ದು ಕೂಡ ಸ್ಥಳೀಯ ಮುಖಂಡರ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣ ಎಂದು ತಿಳಿದುಬಂದಿದೆ.  ಜೆಡಿಎಸ್ ಬೆಂಬಲಿಗರು ಮತ್ತು ಮುಖಂಡರು ಈ ಆರೋಪವನ್ನು ನಿರಾಕರಿಸುತ್ತಿದ್ದರೂ ಗೌರಿಶಂಕರ್ ಮತ್ತು ಇತರರನ್ನು ನಿರ್ಲಕ್ಷಿಸಿದ್ದೇ ಮತದಾನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲು ಕಾರಣ ಎಂದು ತಿಳಿದು ಬಂದಿದೆ.

ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪತಿಯ ಹುಟ್ಟೂರು ಭುವನಹಳ್ಳಿ ಗ್ರಾಮದಲ್ಲೇ ಅವರಿಗೆ ಕಡಿಮೆ ಮತಗಳು ಬಿದ್ದಿವೆ. ಹೆಚ್ಚಿನ ಮತಗಳು ಅಮ್ಮಾಜಮ್ಮ ಅವರ ವಿರುದ್ಧದ ಅಭ್ಯರ್ಥಿಗಳಿಗೆ ಬಿದ್ದಿವೆ ಎಂದು ಹೇಳಲಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇರುವ ಬಗ್ಗೆ ಬೆಟ್ಟಿಂಗ್ ಕೂಡ ನಡೆಯುತ್ತಿದೆ. ಹಣದ ಹರಿವಿನ ಬಗ್ಗೆ ಪ್ರಜ್ಞಾವಂತ ಮತದಾರರು ಅಚ್ಚರಿ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ. ಫಲಿತಾಂಶದ ಯಾರ ಪರವಾಗಿಯಾದರೂ ಆಗಲಿ ಈ ಮಟ್ಟದ ಹಣದ ಹೊಳೆ ಹರಿದಿರುವುದು ಶಿರಾ ಚುನಾವಣೆಯ ಇತಿಹಾಸದಲ್ಲೇ ಇದೇ ಮೊದಲು ಎನ್ನುತ್ತಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ಇವಿಎಂ ದೋಷದ ಬಗ್ಗೆ ಗಮನ ಸೆಳೆದಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿಯೂ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಅಲ್ಲಲ್ಲಿ ಮತ ಯಂತ್ರಗಳು ಕೈಕೊಟ್ಟಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ನಾನು ಇವಿಎಂಗಳ ಕುರಿತು ಮುಂದಿನ ದಿನಗಳಲ್ಲಿ ಜೋರು ದನಿಯಲ್ಲಿ ಕೇಳುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿ ಮುಖಂಡ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ನವೆಂಬರ್ 3 ರ ಸಂಜೆ ಮಾಧ್ಯಮಗಳೊಂದಿಗೆ ಮಾತನಾಡಿ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆಲುವು ನೂರಕ್ಕೆ ನೂರರಷ್ಟು ಖಚಿತ. 10 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅತೀವ ವಿಶ್ವಾಸದಿಂದ ಬೀಗುತ್ತಿದೆ. ಈ ಉತ್ಸಾಹ ಬೇರೆಯವರಲ್ಲಿ ಕಂಡು ಬರುತ್ತಿಲ್ಲ.

ಇಷ್ಟಾಗಿಯೂ ಗೆಲುವು ಯಾರದು ಎಂಬ ಪ್ರಶ್ನೆಗೆ ನವೆಂಬರ್ 10ರಂದು ಉತ್ತರ ಸಿಗಲಿದೆ.

ಇದನ್ನೂ ಒದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...