ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿರುವ ಶಿರೋಮಣಿ ಅಕಾಲಿದಳ ಪ್ರಾದೇಶಿಕ ಪಕ್ಷಗಳ ಮುಖಂಡರ ಭೇಟಿಯನ್ನು ಮುಂದುವರೆಸಿದೆ. ಎನ್‌ಡಿಎ ವಿರುದ್ಧ ರಾಜಕೀಯ ಮೈತ್ರಿಕೂಟ ರಚಿಸುವ ಉದ್ದೇಶದಿಂದ ಅಕಾಲಿದಳದ ನಿಯೋಗ ಹಲವು ಪಕ್ಷಗಳನ್ನು ಸಂಪರ್ಕಿಸುತ್ತಿದೆ.
ತೃಣಮೂಲ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದ ನಂತರ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜತೆಗೆ ಮಾತುಕತೆ ನಡೆಸಿದ್ದಾರೆ.
ರಾಜ್ಯಗಳ ಆದಾಯವನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿರುವ ಶಿರೋಮಣಿ ಅಕಾಲಿ ದಳದ ಸಂಸದ ಪ್ರೇಮ್ ಸಿಂಗ್ ಚಂದುಮಾಜ್ರಾ, ದೇಶದ ರಾಜಕೀಯವನ್ನು “ಕೇಂದ್ರೀಕರಿಸುವ” ಪ್ರಯತ್ನಗಳ ವಿರುದ್ಧ ಪ್ರಾದೇಶಿಕ ಪಕ್ಷಗಳು ಒಂದಾಗುವ ಅವಶ್ಯಕತೆಯಿದೆ ಎಂದು ಹೇಳಿದರು.
ಶಿಕ್ಷಣ, ಕೃಷಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕ್ಷೇತ್ರಗಳಲ್ಲಿ “ರಾಜ್ಯ ಸರ್ಕಾರಗಳ ಹಕ್ಕುಗಳಲ್ಲಿ” ಕೇಂದ್ರವು ಹಸ್ತಕ್ಷೇಪ ಮಾಡಿದೆ. ಈ ವಿಷಯವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಒಪ್ಪುತ್ತಾರೆ ಎಂದು ಸಂಸದ ಪ್ರೇಮ್ ಸಿಂಗ್ ಚಂದುಮಾಜ್ರಾ ಭಾನುವಾರ ಹೇಳಿದ್ದಾರೆ.
ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು
Mumbai: A Shiromani Akali Dal delegation met Maharashtra CM Uddhav Thackeray today.
"He said that he'll support all programs of farmers during agitation. He'll also come to the meeting in Delhi two weeks later. He said that he'll support farmers' agitation," says the delegation. pic.twitter.com/xbPxGgfnB8
— ANI (@ANI) December 6, 2020
ಸುದ್ದಿಗಾರರೊಂದಿಗೆ ಮಾತನಾಡಿದ ಚಂದುಮಾಜ್ರಾ,’ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರೈತರ ಪ್ರತಿಭಟನೆಯ ಬಗ್ಗೆ ಅಕಾಲಿ ದಳದ ನಿಲುವನ್ನು ಬೆಂಬಲಿಸಿದ್ದಾರೆ. ಎರಡು ವಾರಗಳ ನಂತರ ದೆಹಲಿಯಲ್ಲಿ ನಡೆಯಲಿರುವ ಸಭೆಗೂ ಬರುವುದಾಗಿ ಅವರು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.
“ನಮ್ಮ ತಂತ್ರಗಾರಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಸಲುವಾಗಿ ಮುಂದಿನ ವಾರ ದೆಹಲಿಯಲ್ಲಿ ಸಭೆ ಸೇರಲಿದ್ದೇವೆ. ಭವಿಷ್ಯದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ರಾಜಕೀಯ ಪಕ್ಷಗಳು ಸಭೆ ಸೇರುತ್ತಿವೆ. ದೆಹಲಿಯಲ್ಲಿ ನಡೆಯುವ ರಾಜಕೀಯ ಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಠಾಕ್ರೆ ಒಪ್ಪಿಕೊಂಡಿದ್ದಾರೆ” ಎಂದು ಅವರು ಹೇಳಿದರು.
ಇದನ್ನೂ ಓದಿ: ಪರಿಷತ್ ಚುನಾವಣೆ: ದಶಕಗಳ ನಂತರ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ಹೀನಾಯ ಸೋಲು
ಎನ್‌ಡಿಎ ವಿರುದ್ಧ ಪೈಪೋಟಿ ನೀಡುವ ಸಲುವಾಗಿ ಅಕಾಲಿ ದಳ ಪ್ರಾದೇಶಿಕ ಪಕ್ಷಗಳ ಮೈತ್ರಿಕೂಟ ರಚಿಸಲು ಮುಂದಾಗಿದ್ದು, ಇದಕ್ಕಾಗಿ ಬಲ್ವಿಂದರ್ ಸಿಂಗ್ ಭುಂದುರ್, ಪ್ರೇಮ್ ಸಿಂಗ್ ಚಂದುಮಜ್ರಾ ಹಾಗೂ ಸಿಕಂದರ್ ಸಿಂಗ್ ಮಲುಕಾ ಇರುವ ಮೂವರು ಸದಸ್ಯರ ನಿಯೋಗ ರಚಿಸಲಾಗಿದೆ.
ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಈ ವರ್ಷದ ಸೆಪ್ಟೆಂಬರ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ತೊರೆದಿದೆ. ನವೆಂಬರ್ 26 ರಿಂದ ಸಾವಿರಾರು ರೈತರು ನವದೆಹಲಿಯ ವಿವಿಧ ಗಡಿಗಳಲ್ಲಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.ಕೇಂದ್ರದ ವಿವಾದಿತ ಕಾನೂನುಗಳ ವಿರುದ್ಧ ಡಿಸೆಂಬರ್ 8 ರಂದು “ಭಾರತ್ ಬಂದ್” ಗೆ ಕರೆ ನೀಡಿದ್ದಾರೆ.
ರೈತರ ಭಾರತ್ ಬಂದ್‌ಗೆ ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಡಿಎಂಕೆ, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್), ಆಮ್ ಆದ್ಮಿ ಪಾರ್ಟಿ ಸೇರಿ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ದೇಶಾದ್ಯಂತ ಮುಷ್ಕರಕ್ಕೆ ತಮ್ಮ ಬೆಂಬಲವನ್ನು ಘೋಷಿಸಿವೆ.


