Homeಮುಖಪುಟತಾಜ್‌ಮಹಲ್ ಆವರಣದಲ್ಲಿ ಶಿವಪೂಜೆ: ಹಿಂದೂ ಮಹಾಸಭಾ ಕಾರ್ಯಕರ್ತರ ಬಂಧನ

ತಾಜ್‌ಮಹಲ್ ಆವರಣದಲ್ಲಿ ಶಿವಪೂಜೆ: ಹಿಂದೂ ಮಹಾಸಭಾ ಕಾರ್ಯಕರ್ತರ ಬಂಧನ

ಶಿವರಾತ್ರಿ ಹಬ್ಬದ ಪ್ರಯುಕ್ತ ತಾಜ್‌ಮಹಲ್‌ ಆವರಣದೊಳಗೆ ಶಿವಪೂಜೆ ಮಾಡಲು ಮುಂದಾಗಿದ್ದ ಹಿಂದೂ ಮಹಾಸಭಾದ ಮೂವರು ಕಾರ್ಯಕರ್ತರು

- Advertisement -
- Advertisement -

ಶಿವರಾತ್ರಿ ಹಬ್ಬದ ಪ್ರಯುಕ್ತ ತಾಜ್‌ಮಹಲ್‌ ಆವರಣದೊಳಗೆ ಶಿವಪೂಜೆ ಮಾಡಲು ಮುಂದಾಗಿದ್ದ ಹಿಂದೂ ಮಹಾಸಭಾದ ಮೂವರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಐತಿಹಾಸಿಕ ಮತ್ತು ಜಗತ್ ಪ್ರಸಿದ್ಧ ತಾಜ್‌ಮಹಲ್‌ನಲ್ಲಿ ನಿಯೋಜಿಸಲಾಗಿರುವ ಕೇಂದ್ರ ಭದ್ರತಾ ಪಡೆ ಸಿಬ್ಬಂದಿಯು ಮೂವರನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್‌ಡಿಟಿವಿ ವರದಿ ಮಾಡಿದೆ.

“ಮಹಿಳೆಯೂ ಸೇರಿದಂತೆ ಹಿಂದೂ ಮಹಾಸಭಾದ ಮೂವರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ತಾಜ್‌ಗಂಜ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಉಮೇಶ್ ಚಂದ್ರ ತ್ರಿಪಾಠಿ ಹೇಳಿದ್ದಾರೆ.

ಹಿಂದೂ ಮಹಾಸಭಾದ ಪ್ರಾಂತೀಯ ಅಧ್ಯಕ್ಷೆ ಮೀನಾ ದಿವಾಕರ್ ಎಂಬುವವರು ತಾಜ್‌ಮಹಲ್‌ ಆವರಣದಲ್ಲಿರುವ ಮುಖ್ಯ ತೊಟ್ಟಿಯ ಬಳಿ ಇಬ್ಬರು ವ್ಯಕ್ತಿಗಳೊಂದಿಗೆ ಪೂಜೆ ಸಲ್ಲಿಸಲು ಮುಂದಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಮೊಘಲರ ಆಳ್ವಿಕೆಯಲ್ಲಿ ನಿರ್ಮಾಣವಾಗಿರುವ ಸ್ಮಾರಕವನ್ನು ಭಾರತದ ಪುರಾತತ್ವ ಇಲಾಖೆಯು ಅಡಿಯಲ್ಲಿ ಸಂರಕ್ಷಿಸಲಾಗಿದೆ.

ಇದನ್ನೂ ಓದಿ: ತಾಜ್‌ ಮಹಲ್‌ ಆವರಣದಲ್ಲಿ ಕೇಸರಿ ಬಾವುಟ ಹಾರಿಸಿದ ಹಿಂದೂ ಜಾಗರಣ್ ಮಂಚ್ ಕಾರ್ಯಕರ್ತರು: ಬಂಧನ

ಈ ಹಿಂದೆಯೂ, ತಾಜ್‌ ಮಹಲ್ ಆವರಣದೊಳಗೆ ಭಗವಾಧ್ವಜ ಹಾರಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಇವರ ಕೃತ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಜ್‌ ಮಹಲ್‌ ಆವರಣದಲ್ಲಿ ಧ್ವಜ ಹಾರಿಸಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿತ್ತು.‌ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದರು.

ಕೇಂದ್ರ ಭದ್ರತಾ ದಳದ ಮುಖ್ಯಸ್ಥ ರಾಹುಲ್‌ ಯಾದವ್‌ ಈ ಕುರಿತು ಪ್ರತಿಕ್ರಿಯಿಸಿ, “ನಾಲ್ಕು ಜನ ಆರೋಪಿಗಳು ಯೂಟ್ಯೂಬ್‌ನಲ್ಲಿ ತಮ್ಮ ವೀಡಿಯೋ ಹೆಚ್ಚು ವೀಕ್ಷಣೆಯಾಗಲಿ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ. ತಾಜ್‌ಮಹಲ್‌ ಪ್ರವೇಶ ದ್ವಾರದಲ್ಲಿ ಲೋಹ ಪತ್ತೆಹಚ್ಚುವ ವ್ಯವಸ್ಥೆಯಿದೆ, ಆದರೆ ಸಣ್ಣ ಬಟ್ಟೆ ತುಂಡುಗಳು ಇದರಲ್ಲಿ ದಾಖಲಾಗುವುದಿಲ್ಲ. ಇನ್ನು ಸೆಲ್ಫೀ ಸ್ಟಿಕ್‌ ಗಳನ್ನು ಆವರಣಕ್ಕೆ ತರಲು ಅನುಮತಿಯಿದೆ. ಅವರು ಸೆಲ್ಫೀ ಸ್ಟಿಕ್‌ ಬಳಸಿ ಬಾವುಟ ಹಾರಿಸಿದ್ದಾರೆ” ಎಂದು ಹೇಳಿದ್ದರು.


ಇದನ್ನೂ ಓದಿ: ಬಾಕ್ಸಿಂಗ್ ಕಲಿಯಲು ಬಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಕೋಚ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...