Homeಮುಖಪುಟಬಿಜೆಪಿ ಜತೆಗಿನ 30 ವರ್ಷಗಳ ಮೈತ್ರಿಗೆ ಗುಡ್ ಬೈ ಹೇಳಿದ ಶಿವಸೇನೆ: ಸಚಿವ ಅರವಿಂದ್ ಸಾವಂತ್...

ಬಿಜೆಪಿ ಜತೆಗಿನ 30 ವರ್ಷಗಳ ಮೈತ್ರಿಗೆ ಗುಡ್ ಬೈ ಹೇಳಿದ ಶಿವಸೇನೆ: ಸಚಿವ ಅರವಿಂದ್ ಸಾವಂತ್ ರಾಜೀನಾಮೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಚುನಾವಣೆ ಪೂರ್ವ ಮೈತ್ರಿ ಮೂಲಕ ಮಹಾರಾಷ್ಟ್ರದ ಆಡಳಿತ ಚುಕ್ಕಾಣಿ ಹಿಡಿಯಲು ಹಗ್ಗಜಗ್ಗಾಟ ನಡೆಸಿದ್ದ ಎನ್‍ಡಿಎ ಹಾಗೂ ಶಿವಸೇನೆ ಮೈತ್ರಿ ಮುರಿದುಕೊಂಡಿವೆ. ಬಿಜೆಪಿ ಹಾಕಿದ್ದ ಸವಾಲಿಗೆ ಶಿವಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಬಿಜೆಪಿ ಜತೆಗಿನ ಮೂವತ್ತು ವರ್ಷದ ಸಂಬಂಧಕ್ಕೆ ಎಳ್ಳು-ನೀರು ಬಿಟ್ಟಿದೆ.

ಚುನಾವಣಾ ಫಲಿತಾಂಶ ಬಂದು 15 ದಿನಗಳು ಕಳೆದರೂ ಸಿಎಂ ಹುದ್ದೆಗಾಗಿ ಶಿವಸೇನೆ ಮತ್ತು ಬಿಜೆಪಿ ಕದನ ನಡೆಸಿದ್ದವು. ಆದರೆ ಬಿಜೆಪಿ, ಶಿವಸೇನೆಯ 50:50 ಸೂತ್ರಕ್ಕೆ ಸೊಪ್ಪು ಹಾಕಲಿಲ್ಲ. ಇದರಿಂದ ಕೆರಳಿದ ಶಿವಸೇನೆ, ಮುಖ್ಯಮಂತ್ರಿ ಸ್ಥಾನ ನಮಗೇ ಬೇಕು ಎಂದು ಬಿಗಿಪಟ್ಟು ಸಾಧಿಸಿತ್ತು. ಸರ್ಕಾರ ರಚಿಸುವಲ್ಲಿ ವಿಫಲರಾಗಿರುವ ದೇವೇಂದ್ರ ಫಡ್ನವೀಸ್ ಈಗಾಗಲೇ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದು, ಶಿವಸೇನೆ ಜನಾದೇಶಕ್ಕೆ ಅಪಮಾನ ಮಾಡುತ್ತಿದೆ ಎಂದು ಕಿಡಿಕಾರಿದ್ದರು. ಅಲ್ಲದೇ ಬಿಜೆಪಿ ಸರ್ಕಾರ ರಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ನಂತರ ಚುನಾವಣೆಯಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಶಿವಸೇನೆ ಸರ್ಕಾರ ರಚನೆ ಮಾಡಲಿ ಎಂದು ಹೇಳಿದೆ.

ಈಗ ಕಾಂಗ್ರೆಸ್ ಮತ್ತು ಎನ್‍ಸಿಪಿ ಜತೆ ಮೈತ್ರಿ ಮಾಡಿಕೊಳ್ಳುವುದಾಗಿ ಶಿವಸೇನೆ ಹೇಳಿತ್ತು. ತದನಂತರ ಕಾಂಗ್ರೆಸ್ ಮತ್ತು ಎನ್‍ಸಿಪಿ ನಾಯಕರು ಸಭೆ ನಡೆಸಿದ್ದರು. ನಂತರ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಮೈತ್ರಿ ಸಾಧ್ಯತೆಯನ್ನು ತಳ್ಳಿ ಹಾಕಿದ್ದರು. ಇನ್ನು ಮೂಲಗಳ ಮಾಹಿತಿಯ ಪ್ರಕಾರ, ಶಿವಸೇನೆ ಜತೆ ಮೈತ್ರಿ ಮಾಡಿಕೊಳ್ಳಬೇಕೆಂದರೆ ಬಿಜೆಪಿಯಿಂದ ಶಿವಸೇನೆ ಮೈತ್ರಿ ಮುರಿದುಕೊಂಡು ಬೇರೆಯಾಗಬೇಕು ಎಂದು ಎನ್‍ಸಿಪಿ ಷರತ್ತು ವಿಧಿಸಿತ್ತೆಂದು ಹೇಳಲಾಗಿದೆ. ಹೀಗಾಗಿಯೇ ಶಿವಸೇನೆ, ಬಿಜೆಪಿ ಜತೆಗಿನ ಮೈತ್ರಿ ಮುರಿದುಕೊಂಡಿದ್ದು, ಎನ್‍ಸಿಪಿ ನಾಯಕ ಶರತ್‍ ಪವಾರ್‍ ಅವರನ್ನು ಶಿವಸೇನೆ ಮುಖ್ಯಸ್ಥ ಉದ್ಧವ್‍ ಠಾಕ್ರೆ ಇಂದು ಭೇಟಿಯಾಗುವ ಸಾಧ್ಯತೆ ಇದೆ.

ಇತ್ತ ಕಾಂಗ್ರೆಸ್ ನಾಯಕರೂ ಸಹ ಸಭೆ ನಡೆಸಿದ್ದಾರೆ. ಶಿವಸೇನೆ ವಕ್ತಾರ ಸಂಜಯ್ ರಾವತ್, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಬಿಜೆಪಿ ಜತೆ ಶಿವಸೇನೆ ಮೈತ್ರಿ ಮುರಿದುಕೊಳ್ಳುತ್ತಿದ್ದಂತೆ, ಕೇಂದ್ರ ಸಚಿವ ಸಂಪುಟದಲ್ಲಿ ಪಕ್ಷದಿಂದ ಮಂತ್ರಿಯಾಗಿದ್ದ ಅರವಿಂದ್ ಸಾವಂತ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಟ್ವಿಟ್ಟರ್ ನಲ್ಲಿ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿದ್ದಾರೆ. ಶಿವಸೇನೆ ಪಕ್ಷ ಸತ್ಯವನ್ನೇ ಹೇಳುತ್ತಿದೆ. ಸುಳ್ಳಿನ ವಾತಾವರಣದಲ್ಲಿ ಇರಲು ಮತ್ತು ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.

ಇತ್ತ ಸರ್ಕಾರ ರಚನೆ ಸಂಬಂಧ ಕಾಂಗ್ರೆಸ್ ಮತ್ತು ಎನ್‍ಸಿಪಿ ಸಭೆ ನಡೆಸಿದ್ದು, ಶಿವಸೇನೆಗೆ ಸಾಥ್ ನೀಡಬೇಕೋ ಬೇಡವೋ ಎಂಬುದು ಸಭೆಯ ನಂತರ ನಿರ್ಧಾರವಾಗಲಿದೆ. ಶಿವಸೇನೆಗೆ ಸಾಥ್‍ ನೀಡುವ ಆಲೋಚನೆಯಲ್ಲಿರುವ ಕಾಂಗ್ರೆಸ್‍ಗೆ ಎಚ್ಚರಿಕೆ ನೀಡಿದ್ದಾರೆ ಸಂಜಯ್ ನಿರುಪಮ್. ಶಿವಸೇನೆ ಮತ್ತು ಬಿಜೆಪಿ ಮಧ್ಯೆ ನಡೆಯುತ್ತಿರುವುದು ಕದನವಲ್ಲ. ಅದೊಂದು ನಾಟಕ. ಇದೆಲ್ಲದರಿಂದ ಕಾಂಗ್ರೆಸ್ ದೂರವುಳಿಯಬೇಕು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...