Homeಮುಖಪುಟಗೋವಾ ಮತ್ತು ಯುಪಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಶಿವಸೇನೆ!

ಗೋವಾ ಮತ್ತು ಯುಪಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಶಿವಸೇನೆ!

- Advertisement -
- Advertisement -

ಮುಂದಿನ ವರ್ಷ ಗೋವಾ ಮತ್ತು ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧಿಸಲಿದೆ ಎಂದು ಪಕ್ಷದ ನಾಯಕ, ಸಂಸದ ಸಂಜಯ್ ರಾವತ್ ಭಾನುವಾರ ಘೋಷಿಸಿದ್ದಾರೆ. ಪಶ್ಚಿಮ ಯುಪಿಯ ರೈತ ಸಂಘಟನೆಗಳು ತಮ್ಮ ಪಕ್ಷವನ್ನು ಬೆಂಬಲಿಸಲು ಸಿದ್ಧರಿದ್ದಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಮುಂಬೈಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, “ಶಿವಸೇನೆ ಯುಪಿಯಲ್ಲಿ 80 ರಿಂದ 100 ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ (ಯುಪಿ ವಿಧಾನಸಭೆ 403 ಸದಸ್ಯರನ್ನು ಹೊಂದಿದೆ). ಗೋವಾ ವಿಧಾನಸಭೆಯಲ್ಲಿ 20 ಸ್ಥಾನಗಳಲ್ಲಿ ಪಕ್ಷವು ಸ್ಪರ್ಧಿಸಲಿದೆ (ಗೋವಾ 40 ವಿಧಾನಸಭಾ ಸದಸ್ಯರನ್ನು ಒಳಗೊಂಡಿದೆ)” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮತ್ತೆ ಹೊಂದಾಣಿಕೆಗೆ ಪ್ರಯತ್ನಿಸುತ್ತಿದೆ: ಶಿವಸೇನೆಯ ಹಿರಿಯ ನಾಯಕ

“ಪಶ್ಚಿಮ ಯುಪಿಯ ರೈತ ಸಂಘಟನೆಗಳು ಶಿವಸೇನೆಯನ್ನು ಬೆಂಬಲಿಸಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿವೆ, ಜೊತೆಗೆ ನಾವು ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿದ್ದೇವೆ. ಗೋವಾದಲ್ಲಿ ‘ಮಹಾ ವಿಕಾಸ್ ಅಘಾಡಿ’ಯಂತಹ ಮೈತ್ರಿಯನ್ನು ಕಟ್ಟಲು ಪ್ರಯತ್ನಗಳು ನಡೆಯುತ್ತಿವೆ. ನಾವು ಯಶಸ್ವಿಯಾಗುತ್ತೇವೆಯೇ ಎಂದು ನೋಡೋಣ” ಎಂದು ಸಂಜಯ್ ರಾವತ್‌ ಹೇಳಿದ್ದಾರೆ.

ಶಿವಸೇನೆಯು ಈ ಎರಡು ರಾಜ್ಯಗಳಲ್ಲಿ ತನ್ನ ಕಾರ್ಯಕರ್ತರನ್ನು ಹೊಂದಿದ್ದು, ಗೆಲುವು ಅಥವಾ ಸೋಲನ್ನು ಲೆಕ್ಕಿಸದೆ ಪಕ್ಷವು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಎಂದು ರಾವತ್‌ ಹೇಳಿದ್ದಾರೆ.

2019 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ, ಶಿವಸೇನೆ ಮುಖ್ಯಮಂತ್ರಿ ಸ್ಥಾನವನ್ನು ಪಡೆದುಕೊಳ್ಳುವ ವಿಷಯದಲ್ಲಿ ತನ್ನ ದೀರ್ಘಕಾಲದ ಮಿತ್ರ ಪಕ್ಷವಾಗಿದ್ದ ಬಿಜೆಪಿಯ ಜೊತೆಗಿನ ಮೈತ್ರಿಯನ್ನು ಕಡಿದು ಹಾಕಿತ್ತು. ಅಲ್ಲಿ, ‘ಮಹಾ ವಿಕಾಸ್ ಅಘಾಡಿ’ ಎಂಬ ಹೊಸ ಮೈತ್ರಿಕೂಟವನ್ನು ರಚಿಸಿ, ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚನೆ ಮಾಡಿಕೊಂಡಿದೆ.

ಇದನ್ನೂ ಓದಿ: ಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾವತ್, “ಅದು ಬಿಜೆಪಿಯ ಆಂತರಿಕ ವಿಷಯ, ಹೊರಗಿನವರು ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಅವರು ನನ್ನೊಂದಿಗೆ ರಾಜ್ಯಸಭಾ ಸದಸ್ಯರಾಗಿದ್ದರಿಂದ ರೂಪಾನಿಯವರ ಬಗ್ಗೆ ನನಗೆ ತಿಳಿದಿದೆ” ಎಂದು ಹೇಳಿದ್ದಾರೆ.

“ಕಳೆದ ಬಾರಿ ಬಿಜೆಪಿ ಗುಜರಾತ್‌ನಲ್ಲಿ ಬಹುಮತವಷ್ಟೇ ಪಡೆಯಲು ಸಾಧ್ಯವಾಯಿತು. ಈ ಬಾರಿ ಅಲ್ಲಿ ಬಿಜೆಪಿಯ ಪರಿಸ್ಥಿತಿ ಚೆನ್ನಾಗಿಲ್ಲ” ಎಂದು ಅವರು ಹೇಳಿಕೊಂಡಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರ ಪಾತ್ರದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಠಾಕ್ರೆ ರಾಷ್ಟ್ರೀಯ ನಾಯಕನಾಗುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ರಾಷ್ಟ್ರೀಯ ನಾಯಕ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಂಬೈ ವಿಮಾನ ನಿಲ್ದಾಣದಲ್ಲಿನ ‘ಅದಾನಿ ಏರ್‌ಪೋರ್ಟ್’ ಬೋರ್ಡ್‌ಗಳನ್ನು ಕಿತ್ತೆಸೆದ ಶಿವಸೇನೆ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...