Homeಕರ್ನಾಟಕಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

- Advertisement -
- Advertisement -

ಮಂಗಳೂರಿನ ಪಂಪ್‌ವೆಲ್‌ನ ಮಹಾವೀರ ಸರ್ಕಲ್‌‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಟೀಕೆಗೆ ಗುರಿಯಾಗಿದೆ.

“ಇದು ಕರಾವಳಿಗರಿಗೂ ಶಾಂತಿಯ ಪ್ರತೀಕ ಮಹಾವೀರರಿಗೂ ಮಾಡುವ ಅವಮಾನ ಅಲ್ಲವೇ? ಕರಾವಳಿಯನ್ನು ಲೂಟಿ ಮಾಡಿದವರ, ಕರಾವಳಿಯನ್ನು ಅಭಿವೃದ್ದಿಯಲ್ಲಿ ಹಿಂದೆ ತಳ್ಳಿದವರ ಪ್ರತಿಮೆಯನ್ನು ಕರಾವಳಿಯಲ್ಲಿ ಸ್ಥಾಪಿಸುವುದು ಸರಿಯೇ?” ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಪತ್ರಕರ್ತ ನವೀನ್ ಸೂರಿಂಜೆ, “1665ರಲ್ಲಿ ಛತ್ರಪತಿ ಶಿವಾಜಿ ಬಸ್ರೂರಿನಲ್ಲಿ ದರೋಡೆ ನಡೆಸದೇ ಇದ್ದಲ್ಲಿ ಇವತ್ತು ಇಡೀ ಕರಾವಳಿ ಹೀಗಿರುತ್ತಿರಲಿಲ್ಲ. ಮುಂಬೈಯನ್ನೂ ಮೀರಿಸುವ ವಾಣಿಜ್ಯ ನಗರಿಯಾಗಿ ಇರುತ್ತಿತ್ತು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆಗ ಬಸ್ರೂರು ಕರಾವಳಿಯ ದೊಡ್ಡ ವಾಣಿಜ್ಯ ನಗರ. ಅಕ್ಕಿ, ಕಾಳುಮೆಣಸು ಸೇರಿದಂತೆ ಕರಾವಳಿ ಮಲೆನಾಡಿಗರು ಬೆಳೆಯುತ್ತಿದ್ದ ಮಸಾಲ ಪದಾರ್ಥಗಳನ್ನು ಬಸ್ರೂರಿನ ಮೂಲಕ ವಿದೇಶಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಬಸ್ರೂರು ಮಹಾಲಿಂಗೇಶ್ವರ ಜಾತ್ರೆ ಮಹಾಶಿವರಾತ್ರಿಯಂದೇ ನಡೆಯುತ್ತದೆ. ಆಗೆಲ್ಲಾ ಜಾತ್ರೆಯೆಂದರೆ ಧಾರ್ಮಿಕ ಕಾರ್ಯಕ್ರಮವಲ್ಲ. ಮಹಾಲಿಂಗೇಶ್ವರನ ತೇರು ಎಳೆಯುವ ಜಾತ್ರೆಯೆಂದರೆ ಕೃಷಿಕರ ಬದುಕಿನ ಮಹತ್ತರ ದಿನ. ಆ ದಿನ ಸಂತೆಯಲ್ಲಿ ಕೃಷಿಕರು ಬೆಳೆದಿದ್ದನ್ನು ನೇರವಾಗಿ ಮಾರಾಟ ಮಾಡುತ್ತಾರೆ. ಮೊದಲೇ ವಾಣಿಜ್ಯ ನಗರ ಬೇರೆ. ಅಂದು ರೈತರು ಮತ್ತು ವ್ಯಾಪಾರಿಗಳ ಬಳಿ ಹಣವಿರುತ್ತದೆ ಎಂದುಕೊಂಡು 1665 ರ ಫೆಬ್ರವರಿಯ ಮಹಾಶಿವರಾತ್ರಿ ದಿನ ಶಿವಾಜಿ ತನ್ನ ದರೋಡೆಕೋರ ಸೈನ್ಯದ ಜೊತೆ ದಾಳಿ ಮಾಡಿ ದೇವಸ್ಥಾನವನ್ನೂ ಸೇರಿದಂತೆ ಲೂಟಿ ಮಾಡಿದರು. ಬಸ್ರೂರಿನ ಮುಖ್ಯ ವ್ಯಾಪಾರಿ ವರ್ಗವಾಗಿದ್ದ ಜಿಎಸ್ ಬಿ (ಗೌಡ ಸಾರಸ್ವತ ಬ್ರಾಹ್ಮಣ)ರ ಮೇಲೆ ಶಿವಾಜಿ ದರೋಡೆ ಪಡೆ ಹಲ್ಲೆ ನಡೆಸಿತು. ಈ ದಾಳಿಯ ಬಳಿಕ ಬಸ್ರೂರು ವ್ಯಾಪಾರ ಕೇಂದ್ರ ನೆನೆಗುದಿಗೆ ಬಿದ್ದಿತ್ತು” ಎಂದು ತಿಳಿಸಿದ್ದಾರೆ.

“ಕರಾವಳಿಯ ಮೇಲೆ ಶಿವಾಜಿ ದರೋಡೆಗಾಗಿ ದಾಳಿ ಮಾಡಿದ ಎಂಬುದು ಇತಿಹಾಸದ ಪುಟಗಳಲ್ಲಿ ದಾಖಲಾದ ಸತ್ಯ.‘ ಅದನ್ನು ಬಲಪಂಥೀಯರು ‘ಪೋರ್ಚುಗೀಸರ ವಾಣಿಜ್ಯ ಕೇಂದ್ರದ ಮೇಲೆ ನಡೆದ ದಾಳಿ’ ಎನ್ನುತ್ತಾರೆ. ಇದು ಸುಳ್ಳು. ಶಿವಾಜಿಯು ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ದಾಳಿ ಮಾಡುವಾಗ ಪೋರ್ಚುಗೀಸರ ಆಡಳಿತವಿರುವ ಗೋವಾವನ್ನು ಹಾದು ಬರುತ್ತಾರೆ. ಗೋವಾದಲ್ಲಿರುವ ಪೋರ್ಚುಗೀಸರ ಮೇಲೆ ಯಾವ ದಾಳಿಯನ್ನೂ ಮಾಡಲ್ಲ. ಆಗ ದಕ್ಷಿಣ ಕನ್ನಡದ ಬಸ್ರೂರಿನಲ್ಲಿ ಕೆಳದಿಯ ಭದ್ರಪ್ಪ ನಾಯಕ ಡಚ್ಚರೊಂದಿಗೆ ವಹಿವಾಟು ನಡೆಸುತ್ತಿದ್ದರು. ಪೋರ್ಚುಗೀಸರೂ ಕೂಡಾ ಕೆಳದಿಯವರ ಜೊತೆ ವ್ಯಾಪಾರ ವಹಿವಾಟಿಗೆ ಒಪ್ಪಂದ ಮಾಡಿದ್ದರೇ ವಿನಹ ಬಸ್ರೂರು‌ ಪೋರ್ಚುಗೀಸರ ಹಿಡಿತದಲ್ಲಿ ಇರಲಿಲ್ಲ. ಕನ್ನಡಿಗರೇ ಆದ ಕೆಳದಿಯವರ ಹಿಡಿತದಲ್ಲಿತ್ತು. ನಗ ನಾಣ್ಯಗಳ ದರೋಡೆಯ ಕಾರಣಕ್ಕಾಗಿಯೇ ಶಿವಾಜಿ ದಕ್ಷಿಣ ಕನ್ನಡ ಜಿಲ್ಲೆಗೆ ದಾಳಿ ನಡೆಸಿದರು” ಎಂದು ವಿವರಿಸಿದ್ದಾರೆ.

“ಪಂಪ್ ವೆಲ್ ಮಹಾವೀರ ಸರ್ಕಲ್ ನಲ್ಲಿ ಪ್ರತಿಮೆ ಸ್ಥಾಪಿಸುವುದಾದರೆ ಕೋಟಿ ಚೆನ್ನಯ್ಯರ ಪ್ರತಿಮೆ ಸ್ಥಾಪನೆ ಮಾಡಬೇಕು. ಅಲ್ಲೆ ಹತ್ತಿರದಲ್ಲಿ ಕಂಕನಾಡಿ ಗರೋಡಿಯೂ ಇದೆ. ಕರಾವಳಿಗರಿಗೊಂದು ಸ್ವಾಭಿಮಾನದ ಬದುಕು ಕಲಿಸಿದ ಕೋಟಿ ಚೆನ್ನಯ್ಯರು ಪ್ರತಿಮೆ ಸ್ಥಾಪಿಸಬೇಕೆ ಹೊರತು ಮಂಗಳೂರನ್ನು ದರೋಡೆ ಮಾಡಿದ್ದ ಶಿವಾಜಿಯದ್ದಲ್ಲ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನವೀನ್‌ ಸೂರಿಂಜೆಯವರ ಬರಹವನ್ನು ಹತ್ತಾರು ಮಂದಿ ಹಂಚಿಕೊಂಡಿದ್ದಾರೆ. “ತುಳುನಾಡಿಗೆ ಮಾತ್ರವಲ್ಲ ಕನ್ನಡ ನಾಡಿಗೆ ಸಾಹಿತ್ಯ ಪರಂಪರೆಗೆ ಜೈನರ ಕೊಡುಗೆ ಮಹತ್ವದ್ದು. ಮಹಾವೀರರ ಹೆಸರು ಅಳಿಸುವುದು ಸರಿಯಲ್ಲ” ಎಂದು ಮಹಾಂತೇಶ್‌ ಕರಿಯಪ್ಪ ಎಂಬವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಲ್ಸನ್‌ ಕಿಣ್ಣಿಗೊಲಿ ಎಂಬವರು ಪ್ರತಿಕ್ರಿಯಿಸಿ, “ಇತ್ತೀಚಿಗೆ ಹೆಸರು ಬದಲಿಸುವ/ಪ್ರತಿಮೆ ಸ್ಥಾಪನೆ ನೆಪದಲ್ಲಿ ನಮ್ಮ ನೆಲದ ವಿರೋಧಿಗಳನ್ನೇ ಆರಿಸುವುದು ನೋಡಿದರೆ ಈ ಸರ್ಕಾರಕ್ಕೆ ಸ್ವಾಭಿಮಾನವೇ ಇಲ್ಲದಂತಾಗಿದೆ. ಇವರೊಂದಿಗೆ ನಮಗೂ ಸ್ವಾಭಿಮಾನ ಇಲ್ಲದಂತೆ ಮಾಡಿಬಿಟ್ಟಿದ್ದಾರಲ್ಲ” ಎಂದು ವಿವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...