Homeಕರ್ನಾಟಕಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

- Advertisement -
- Advertisement -

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತರು ಎರಡು ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಮೊದಲನೇಯದ್ದು ಶುಕ್ರವಾರ ರಾತ್ರಿ (ಮಾ.18) ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ದಾಳಿ ನಡೆಸಿದ್ದಾರೆ. ಮತ್ತೊಂದು ರವಿವಾರ (ಮಾ.19) ಗೋಪಿಶೆಟ್ಟಿಕೊಪ್ಪದ ಮನೆಯೊಂದರಲ್ಲಿ ಆರಂಭಿಸಿರುವ ಪ್ರಾರ್ಥನಾ ಮಂದಿರವೊಂದರ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ.

ಪ್ರಾರ್ಥನಾ ಮಂದಿರದ ಮೇಲೆ ಬಜರಂಗದಳ ದಾಳಿ

ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಮನೆಯೊಂದರಲ್ಲಿ ಆರಂಭಿಸಿರುವ ಪ್ರಾರ್ಥನಾ ಮಂದಿರವೊಂದರ ಮೇಲೆ ಬಜರಂಗದಳ ಕಾರ್ಯಕರ್ತರು ಭಾನುವಾರ ತುಂಗಾ ನಗರ ಠಾಣೆ ಪೊಲೀಸರ ಸಮ್ಮುಖದಲ್ಲಿ ದಾಳಿ ನಡೆಸಿದರು. ಇಲ್ಲಿ ಹಿಂದೂ ಧರ್ಮೀಯರಿಗೆ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂದು ಬಜರಂಗದಳ ಆರೋಪಿಸಿದೆ.

ಈ ವಿಚಾರವಾಗಿ ಪ್ರಾರ್ಥನಾ ಮಂದಿರ ನಡೆಸುತ್ತಿದ್ದ ಫಾದರ್ ಮಣಿಕಂಠ ಇಮ್ಯಾನ್ಯುಯಲ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ವಾಪಸ್‌ ಕಳುಹಿಸಿದ್ದಾರೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

ಘಟನೆ ಬಗ್ಗೆ ಪ್ರತಿಕ್ರಿಸಿಯಿದ ಫಾದರ್ ಮಣಿಕಂಠ ಇಮ್ಯಾನ್ಯುಯಲ್, ”ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. 15 ವರ್ಷಗಳಿಂದ ಟ್ರಸ್ಟ್ ಸ್ಥಾಪಿಸಿ ಪ್ರಾರ್ಥನೆ ನಡೆಸುತ್ತಿದ್ದೇವೆ. ಸೋಗಾನೆ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದ ಸಂದರ್ಭದಲ್ಲಿಯೂ ಪ್ರಾರ್ಥನೆ ನಡೆಸಿದ್ದೆವು” ಎಂದು ಅವರು ತಿಳಿಸಿದರು.

ಬಜರಂಗದಳದ ಕಾರ್ಯಕರ್ತ ರಾಜೇಶ್ ಗೌಡ ಮಾತನಾಡಿ, ”ಇಲ್ಲಿ ನಿರ್ಮಿಸಿರುವ ಶೆಡ್‌ಗೆ ಯಾವುದೇ ಟ್ರಸ್ಟ್‌ನ ನಾಮಫಲಕ ಅಳವಡಿಸಿಲ್ಲ. ಅಲ್ಲದೇ 42 ಜನರ ಪಟ್ಟಿ ದೊರೆತಿದೆ. ಇದು ಹಿಂದೂಗಳನ್ನು ಮತಾಂತರ ಮಾಡಲು ಸಿದ್ಧಪಡಿಸಿದ್ದ ಪಟ್ಟಿ” ಎಂದು ಆರೋಪಿಸಿದರು.

ಇದನ್ನೂ ಓದಿ: ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ದಾಳಿ ವೇಳೆ ಬಜರಂಗದಳದ ಜಿಲ್ಲಾ ಸಂಚಾಲಕ ಅಂಕುಶ್, ನಗರ ಕಾರ್ಯದರ್ಶಿ ಸಚಿನ್, ಜಿತೇಂದ್ರಗೌಡ ತುಂಗಾ ನಗರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್‌ ಮಂಜುನಾಥ್, ಪಿಎಸ್ಐ ರಾಜು ರೆಡ್ಡಿ ಇದ್ದರು.

ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ದಾಳಿ

ಶುಕ್ರವಾರ ರಾತ್ರಿ ಶಿವಮೊಗ್ಗದ ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಕಾರ್ಯಕ್ರಮವನ್ನೇ ನಿಲ್ಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿದ ನಂತರ, ಎಲ್ಲಾ ಮಹಿಳೆಯರು ಮತ್ತು ಅವರ ಜೊತೆಗಿದ್ದ ಪುರುಷರು ಹೋಟೆಲ್‌ನಿಂದ ಹೊರಬಂದಿದ್ದಾರೆ.

ಕ್ಲಿಫ್ ಎಂಬಸಿ ಹೋಟೆಲ್‌ನ ಹೈವ್‌ ಸೈಬಾರ್‌ನಲ್ಲಿ ಲೇಡಿಸ್ ನೈಟ್ ಪಾರ್ಟಿ ಆಯೋಜಿಸಲಾಗಿತ್ತು. ವಿಷಯ ತಿಳಿದ ಬಜರಂಗದಳ ಕಾರ್ಯಕರ್ತರು, ಹೋಟೆಲ್ ಬಳಿ ಜಮಾಯಿಸಿ ಆಕ್ಷೇಪ ವ್ಯಕ್ತಪಡಿಸಿ ಪಾರ್ಟಿಯನ್ನು ನಿಲ್ಲಿಸಿದ್ದಾರೆ. ಹೆಣ್ಣು ಮಕ್ಕಳನ್ನು ಕರೆಯಿಸಿ ಡಾನ್ಸ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಜರಂಗದಳ ಆರೋಪಿಸಿದೆ.

ಬಜರಂಗದಳದ ಜಿಲ್ಲಾ ಸಂಚಾಲಕ ರಾಜೇಶ್ ಗೌಡ ಅವರು ಮಾತನಾಡಿದ್ದು, ”ಇದು ಹಿಂದೂ ಸಂಸ್ಕೃತಿಗೆ ವಿರುದ್ಧವಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಗೆ ಶಿವಮೊಗ್ಗದಲ್ಲಿ ಅವಕಾಶ ಕೊಡಲ್ಲ. ಮಲೆನಾಡಿನ ಜನರು ಸುಸಂಸ್ಕೃತರು, ಇಂತಹ ಕಾರ್ಯಕ್ರಮ ಆಯೋಜಿಸಿದರೆ ಸುಮ್ಮನಿರುವುದಿಲ್ಲ. ಲೇಟ್ ನೈಟ್ ಲೇಡಿಸ್ ಪಾರ್ಟಿ ಬಗ್ಗೆ ಈ ಮೊದಲೇ ಪೊಲೀಸರ ಗಮನಕ್ಕೆ ತಂದಿದ್ದೆವು. ಆದ್ದರಿಂದ ಪೊಲೀಸರ ಜತೆ ಬಂದು ಕಾರ್ಯಕ್ರಮ ನಿಲ್ಲಿಸಿದ್ದೇವೆ” ಎಂದು ಹೇಳಿದ್ದಾರೆ.

”ಶಿವಮೊಗ್ಗದಲ್ಲಿ ಇಂತಹ ಕಾರ್ಯಕ್ರಮಗಳಿಗೆ ನಾವು ಅವಕಾಶ ನೀಡುವುದಿಲ್ಲ ಏಕೆಂದರೆ ನಮ್ಮ ನಗರವು ಮತ್ತೊಂದು ಮಣಿಪಾಲವಾಗುವುದು ನಮಗೆ ಇಷ್ಟವಿಲ್ಲ. ಇಂತಹ ಘಟನೆಗಳನ್ನು ಭಜರಂಗದಳ ಸಹಿಸುವುದಿಲ್ಲ” ಎಂದು ಹೇಳಿದ ಅವರು, ಪಾರ್ಟಿಯಲ್ಲಿ ಮಹಿಳೆಯರ ಉಡುಗೆಯನ್ನೂ ಆಕ್ಷೇಪಿಸಿದ್ದಾರೆ.

”ನಮ್ಮ ಸಂಘಟನೆಯು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲಿಲ್ಲ. ಬದಲಿಗೆ ಪೊಲೀಸರಿಗೆ ಮಾಹಿತಿ ನೀಡಿದರು, ಅವರು ಪಾರ್ಟಿಯನ್ನು ನಿಲ್ಲಿಸಿದ್ದಾರೆ ಎಂದು ರಾಜೇಶ್ ಗೌಡ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ ಮಿಥುನ್ ಕುಮಾರ್, ”ನಮ್ಮ ಪೊಲೀಸರು ಪಾರ್ಟಿಯನ್ನು ನಿಲ್ಲಿಸಲಿಲ್ಲ ಎಂದು ಹೇಳಿದ್ದಾರೆ.

”ಕೆಲವು ವ್ಯಕ್ತಿಗಳು ಪಾರ್ಟಿಯನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಬಂದ ಬಳಿಕ ನಮ್ಮ ಅಧಿಕಾರಿಗಳು ಹೋಟೆಲ್‌ಗೆ ತೆರಳಿದರು” ಎಂದು ಅವರು ತಿಳಿಸಿದ್ದಾರೆ.

”ನಮ್ಮ ಪೊಲೀಸರು ಯಾವುದೇ ಕಾರಣಕ್ಕೂ ಆ ಪಾರ್ಟಿಯನ್ನು ನಿಲ್ಲಿಸಲು ಅಲ್ಲಿಗೆ ಹೋಗಿರಲಿಲ್ಲ. ಅಲ್ಲಿ ಗಲಾಟೆ ನಡೆಯಬಾರದು ಎನ್ನುವ ಉದ್ದೇಶದಿಂದ ಹೋಗಿದ್ದರು. ಪೊಲೀಸರು ಮಧ್ಯಪ್ರವೇಶಿಸಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ” ಎಂದು ಕುಮಾರ್ ಹೇಳಿದರು.

”ಪಾರ್ಟಿಯಲ್ಲಿ ಆಕ್ಷೇಪಾರ್ಹವಾಗುವಂತಹ ವಿಚಾರ ಏನೂ ಇರಲಿಲ್ಲ. ಆದರೆ ಪೊಲೀಸರು ಮತ್ತು ಕಾರ್ಯಕರ್ತರು ಪಾರ್ಟಿಯನ್ನು ಏಕೆ ತಡೆದರು ಎಂಬುದು ನಮಗೆ ತಿಳಿದಿಲ್ಲ” ಎಂದು ಹೋಟೆಲ್ ಜನರಲ್ ಮ್ಯಾನೇಜರ್ ಶಂಕರ್ ಕೆ. ಹೇಳಿದ್ದಾರೆ.

”ನಮ್ಮ ಹೋಟೆಲ್ ಅತ್ಯುತ್ತಮ ಹೆಸರು ಗಳಿಸಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಪ್ರಧಾನಿ ಕಚೇರಿಯ ಜನರು ಸೇರಿದಂತೆ ವಿಐಪಿಗಳಿಗೆ ಇಲ್ಲಿ ನಾವು ಆತಿಥ್ಯ ನೀಡಿದ್ದೇವೆ. ಈ ಬಗ್ಗೆ ಜಿಲ್ಲಾಡಳಿತದ ಎಲ್ಲ ಹಿರಿಯ ಅಧಿಕಾರಿಗಳಿಗೆ ತಿಳಿದಿದೆ. ನಾವೇನಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಲು ಸಿದ್ಧ. ಆದರೆ ನಾವು ಆ ರೀತಿಯ ಯಾವ ತಪ್ಪನ್ನೂ ಮಾಡಿಲ್ಲ. ಆದರೂ ಏಕೆ ಅವರು ನಮ್ಮ ವ್ಯವಹಾರಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ನಮಗೆ ತಿಳಿದಿಲ್ಲ” ಎಂದು ಶಂಕರ್ ಅಸಮಧಾನ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...