Homeಕರ್ನಾಟಕಶಿವಮೊಗ್ಗ: ಕುವೆಂಪು ಅವರಿಗೆ ಅಪಮಾನವಾದಾಗ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು- ಬಿ.ಕೆ.ಹರಿಪ್ರಸಾದ್

ಶಿವಮೊಗ್ಗ: ಕುವೆಂಪು ಅವರಿಗೆ ಅಪಮಾನವಾದಾಗ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು- ಬಿ.ಕೆ.ಹರಿಪ್ರಸಾದ್

- Advertisement -
- Advertisement -

“ಕುವೆಂಪುರವರು ವಿಶ್ವ ಮಾನವ ಸಂದೇಶ ನೀಡಿದವರು. ಕುಪ್ಪಳ್ಳಿ ಇಡೀ ವಿಶ್ವಕ್ಕೆ ಖ್ಯಾತಿ ತಂದ ಊರು ಅವರಿಗೆ ಅವಮಾನವಾದಾಗ ತೀರ್ಥಹಳ್ಳಿಯವರೇ ಆದ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು, ಈ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಬೇಕಿತ್ತು” ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿನ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಸಮಸ್ಯೆ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪಾದಯಾತ್ರೆ ನಡೆಸುತ್ತಿದ್ದಾರೆ. ಕುಪ್ಪಳ್ಳಿ ಇಡೀ ವಿಶ್ವಕ್ಕೆ ಖ್ಯಾತಿ ತಂದ ಊರು, ಕುವೆಂಪುರವರು ವಿಶ್ವ ಮಾನವ ಸಂದೇಶ ನೀಡಿದವರು. ಕುವೆಂಪು ಅವರಿಗೆ ಪಠ್ಯಪುಸ್ತಕದಲ್ಲಿ ಅವಮಾನ ಮಾಡಿದಾಗ ಇಲ್ಲಿನ ಶಾಸಕ-ಗೃಹ ಸಚಿವ ಬಾಯಿ ಮುಚ್ಚಿಕೊಂಡಿದ್ದಾರೆ. ರಾಷ್ಟ್ರಕವಿ ಕುವೆಂಪು ಅವರೇನು ಕಾಂಗ್ರೆಸ್ ಪಕ್ಷದವರಲ್ಲ” ಎಂದು ಸ್ಥಳೀಯ ಶಾಸಕರ ವಿರುದ್ಧ ಹರಿಹಾಯ್ದಿದ್ದಾರೆ.

ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ಹೊರಹಾಕಿರುವ ಹರಿಪ್ರಸಾದ್, “ಕುವೆಂಪು ಅವರಿಗೆ ಅಪಮಾನವಾದಾಗ ತೀರ್ಥಹಳ್ಳಿಯವರೇ ಆದ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಬೇಕಿತ್ತು. ಆರಗ ಜ್ಞಾನೇಂದ್ರ ರಾಜ್ಯದ ಇತಿಹಾಸದಲ್ಲೇ‌ ಕಳಪೆ ಗೃಹಸಚಿವ. ಗೃಹಸಚಿವರಾದ ನಂತರ ಆರಗ ಜ್ಞಾನೇಂದ್ರ ಅವರ ಕುಖ್ಯಾತಿ ಹೆಚ್ಚುತ್ತಲೇ ಇದೆ. ಅವರಿಂದಾಗಿ ಕರ್ನಾಟಕ ಉತ್ತರ ಪ್ರದೇಶದಂತೆ ಆಗಿದೆ” ಎಂದರು.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

ಮುಂದುವರೆದು, “ರಾಜ್ಯದಲ್ಲಿ ಕಾನೂನು ಸುವ್ಯವಸ್ತೆ ಹದಗೆಟ್ಟಿದೆ. ಪಿಎಸ್ ಐ ಹಗರಣದಲ್ಲಿ ಮೊದಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಮೊದಲ ದೂರು ದಾಖಲಾಗಬೇಕಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಬೇಕು” ಎಂದಿದ್ದಾರೆ.

“ಇದೀಗ ಬಿಜೆಪಿ ಪಠ್ಯ ಪರಿಷ್ಕರಣೆ ಮೂಲಕ ನಾಗಪುರ ಯೂನಿವರ್ಸಿಟಿ ಅಂಶಗಳನ್ನು ಮಕ್ಕಳ ಮೇಲೆ ಹೇರುತ್ತಿದೆ. ಬಿಜೆಪಿ ಜಾಯಮಾನವೇ ಬರಿ ಸುಳ್ಳು ಹೇಳುವುದು. ಇತಿಹಾಸವನ್ನು ರಸ್ತೆಯಲ್ಲಿ ಹೋಗುವ ಪೋಕರಿಗಳು ಮಾಡುವಂತದ್ದಲ್ಲ. ಇತಿಹಾಸವನ್ನು ತಜ್ಞರು, ವಿದ್ವಾಂಸರು ರಚಿಸಬೇಕು. ಈಗ ಪಠ್ಯ ಪುಸ್ತಕ ಪರಿಷ್ಕರಣೆ 200 ಕೋಟಿ ಖರ್ಚಾಗಿರಬಹುದು. ಎಳೆಯ ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಪಠ್ಯ ಪುಸ್ತಕವನ್ನ ಕೂಡಲೇ ಹಿಂತೆಗೆದುಕೊಳ್ಳಬೇಕು. ಮಕ್ಕಳ ಭವಿಷ್ಯದ ಮೇಲೆ ಆಟ ಆಡುವುದು ಬಿಜೆಪಿಗೆ ಸಾಮಾನ್ಯವಾಗಿದೆ” ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿ ಬೆಂಬಲಿತ ಟ್ರೋಲರ್‌‌‌ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ವಿರೋಧಿಸಿ, ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಸ್ಮಾರಕವಾದ ಕವಿಶೈಲದಲ್ಲಿ, ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನಾ ರ್‍ಯಾಲಿ ಬುಧವಾರ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಕವಿಶೈಲದಲ್ಲಿ ಕುವೆಂಪು ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಪ್ರಾರಂಭವಾದ ಪಾದಯಾತ್ರೆ, ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಆವರಣದಲ್ಲಿ ಸೇರಿ ಸಾರ್ವಜನಿಕ ಸಭೆ ನಡೆಸಲಿದೆ.


ಇದನ್ನೂ ಓದಿ: ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...