Homeಕರ್ನಾಟಕಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ನಗರದಲ್ಲಿ ಮಂಗಳವಾರವೂ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 1,200 ಪೊಲೀಸ್ ಸಿಬ್ಬಂದಿ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ನಗರದಲ್ಲಿ ಗಸ್ತು ತಿರುಗುತ್ತಿದೆ. ಆದರೆ ಕೆಲ ಕಿಡಿಗೇಡಿಗಳು ಮಂಗಳವಾರ ಮುಂಜಾವಿನಲ್ಲಿ ಮೂರು ಆಟೋರಿಕ್ಷಾ ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಬಂಧಿತರನ್ನು ಆಸಿಫ್ ಉಲ್ಲಾ ಖಾನ್, ರಿಹಾನ್ ಷರೀಫ್, ನಿಹಾನ್ ಮತ್ತು ಅಬ್ದುಲ್ ಅಫ್ನಾನ್ ಎಂದು ಗುರುತಿಸಲಾಗಿದೆ. ಸೋಮವಾರ ಮೊಹಮ್ಮದ್ ಖಾಸಿಫ್ (30) ಮತ್ತು ಸೈಯದ್ ನದೀಮ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.

ಮೊಹಮ್ಮದ್ ಖಾಸಿಫ್ ಪ್ರಮುಖ ಆರೋಪಿಯಾಗಿದ್ದು, ನದೀಮ್ ಆರೋಪಿ ನಂ.2 ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ: ಸರ್ಕಾರ ಎಸಗುತ್ತಿರುವ ಲೋಪಗಳತ್ತ ಜನಾಕ್ರೋಶ

ಆಸಿಫ್ ಉಲ್ಲಾ ಖಾನ್ – ಆರೋಪಿ ನಂ.3, ರಿಹಾನ್ ಷರೀಫ್- ಆರೋಪಿ ನಂ.4, ನಿಹಾನ್- ಆರೋಪಿ ನಂ.5 ಮತ್ತು ಅಫ್ನಾನ್ -ಆರೋಪಿ ನಂ.6. ಖಾಸಿಫ್ ಹೊರತುಪಡಿಸಿ ಉಳಿದ ಆರೋಪಿಗಳು 21 ರಿಂದ 22 ವರ್ಷ ವಯಸ್ಸಿನವರಾಗಿದ್ದಾರೆ.

“ಎಲ್ಲಾ ಆರೋಪಿಗಳು ಶಿವಮೊಗ್ಗ ನಗರದ ನಿವಾಸಿಗಳು. ನಾವು 12 ಜನರನ್ನು ವಶಕ್ಕೆ ಪಡೆದಿದ್ದೇವೆ. ಅದರಲ್ಲಿ ಆರು ಮಂದಿ ಕೊಲೆಯಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಆರು ಮಂದಿಯಲ್ಲಿ ನಾಲ್ವರು ಹಲ್ಲೆ, ಕೊಲೆ ಯತ್ನ ಮತ್ತು ಗಲಭೆ ಸೇರಿದಂತೆ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ. ಮೃತ ಹರ್ಷ 2016 ಮತ್ತು 2017ರಲ್ಲಿ ದಾಖಲಾದ ಗಲಭೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಕೊಲೆಯ ಉದ್ದೇಶವನ್ನು ತಿಳಿದುಕೊಳ್ಳಲು ನಾವು ಎಲ್ಲಾ ಆರು ಆರೋಪಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದೇವೆ. ಈಗಾಗಲೇ ನಾಲ್ವರು ಆರೋಪಿಗಳ ಅಪರಾಧ ಹಿನ್ನೆಲೆಯನ್ನು ಪರಿಶೀಲಿಸಲಾಗಿದ್ದು, ಉಳಿದ ಇಬ್ಬರ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಎಡಿಜಿಪಿಗಳಾದ ಪ್ರತಾಪ್ ರೆಡ್ಡಿ, ಎಸ್. ಮುರುಗನ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು, ಶಿವಮೊಗ್ಗ ಎಸ್‌ಪಿ ಬಿ.ಎಂ.ಲಕ್ಷ್ಮಿ ಪ್ರಸಾದ್ ಸೇರಿದಂತೆ ಮೂವರು ಪೊಲೀಸ್ ವರಿಷ್ಠಾಧಿಕಾರಿಗಳು, ಒಬ್ಬರು ಹೆಚ್ಚುವರಿ ಎಸ್ಪಿ ಮತ್ತು 12 ಡೆಪ್ಯುಟಿ ಎಸ್ಪಿಗಳು ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆಯನ್ನು ನೋಡಿಕೊಳ್ಳುತ್ತಿದ್ದಾರೆ.

ಹರ್ಷ ಹತ್ಯೆಯ ನಂತರ ಗಲಭೆ, ಬೆಂಕಿ ಹಚ್ಚುವಿಕೆ ಮತ್ತು ಕಲ್ಲು ತೂರಾಟದ ಘಟನೆಗಳಿಗೆ ಸಂಬಂಧಿಸಿದಂತೆ 14 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಮತ್ತೆ 12 ಮಂದಿ ಪೊಲೀಸ್ ವಶಕ್ಕೆ- ಆರಗ ಜ್ಞಾನೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...