Homeಕರ್ನಾಟಕಶಿವಮೊಗ್ಗ ಗಣೇಶೋತ್ಸವದಲ್ಲಿ ಗಾಂಧಿ ಹಂತಕ ಗೋಡ್ಸೆ, ಸಾವರ್ಕರ್‌ ಫೋಟೋ ಪ್ರತ್ಯಕ್ಷ!

ಶಿವಮೊಗ್ಗ ಗಣೇಶೋತ್ಸವದಲ್ಲಿ ಗಾಂಧಿ ಹಂತಕ ಗೋಡ್ಸೆ, ಸಾವರ್ಕರ್‌ ಫೋಟೋ ಪ್ರತ್ಯಕ್ಷ!

- Advertisement -
- Advertisement -

ಶಿವಮೊಗ್ಗದ ಹಿಂದೂ ಮಹಾಸಭಾದಿಂದ ನಡೆದ ಗಣೇಶೋತ್ಸವದಲ್ಲಿ ಗಾಂಧಿ ಹಂತಕ ಗೋಡ್ಸೆ ಹಾಗೂ ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದ ವಿ.ಡಿ.ಸಾವರ್ಕರ್‌ ಫೋಟೋವನ್ನು ಪ್ರದರ್ಶಿಸಲಾಗಿದೆ.

ಕೋಟೆ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವದ ವೇಳೆ ಶುಕ್ರವಾರ ಈ ಫೋಟೋಗಳನ್ನು ಪ್ರದರ್ಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರದ ಪ್ರಮುಖ ಬೀದಿಗಳಲ್ಲಿ ಸಾಗಿಬಂದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಈ ವೇಳೆ ಡಾ.ಬಿ.ಆರ್.ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಸುಭಾಷ್‌ಚಂದ್ರ ಬೋಸ್, ಭಗತ್‌ಸಿಂಗ್ ಜೊತೆಗೆ ಶಿವಮೊಗ್ಗದಲ್ಲಿ ಕೊಲೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ, ವಿ.ಡಿ.ಸಾವರ್ಕರ್ ಹಾಗೂ ನಾಥೂರಾಮ್ ಗೋಡ್ಸೆಯ ಭಾವಚಿತ್ರಗಳನ್ನು ಪ್ರದರ್ಶಿಸಲಾಗಿದೆ.

ಗಣಪತಿಯ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ ಇಲ್ಲಿನ ಅಮೀರ್‌ಅಹಮದ್ ವೃತ್ತದಲ್ಲಿ ವೀರಸಾವರ್ಕರ್ ಹೆಸರಿನಲ್ಲಿ ಬೃಹತ್ ಮಹಾದ್ವಾರ ನಿರ್ಮಿಸಲಾಗಿತ್ತು. ವಿಶೇಷವೆಂದರೆ ಕೆಲವು ದಿನಗಳ ಹಿಂದಷ್ಟೇ ಇಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು.

ಮೆರವಣಿಗೆಯಲ್ಲಿ ಸಾಗಿ ಬಂದ ಗಣಪತಿ ಮೂರ್ತಿ ಹಿಂಭಾಗದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅಳವಡಿಸಲಾಗಿತ್ತು. ಅಮೀರ್ ಅಹಮದ್ ವೃತ್ತ ಹಾಗೂ ಬಸ್ ನಿಲ್ದಾಣದ ಎದುರು ಅಶೋಕ ಲಾಂಛನದ ಮೇಲೆ ಕೇಸರಿ ಧ್ವಜಗಳು ಹಾರಾಡಿದವು.

ಮೆರವಣಿಗೆಯಲ್ಲಿ ಡಿಜೆ ಹಾಕಲು ಜಿಲ್ಲಾಡಳಿತ ಮೊದಲು ಅವಕಾಶ ನಿರಾಕರಿಸಿತ್ತು. ನಂತರ ಸಂಘಟಕರ ಒತ್ತಡಕ್ಕೆ ಮಣಿದು ಗೋಪಿ ವೃತ್ತದಲ್ಲಿ ಡಿಜೆಗೆ ಅವಕಾಶ ಕಲ್ಪಿಸಲಾಗಿದೆ. ಶಾಸಕ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡು ಹುರಿದುಂಬಿಸಿದ್ದಾರೆ.

ರಾಷ್ಟ್ರಲಾಂಛನದ ಮೇಲೆ ಕೇಸರಿಧ್ವಜ

ರಾಷ್ಟ್ರ ಲಾಂಛನವಾದ ಅಶೋಕ ಸ್ಥಂಭದ ಮೇಲೆ ದುಷ್ಕರ್ಮಿಗಳು ಕೇಸರಿ ಧ್ವಜವನ್ನು ಹಾರಿಸಿರುವ ಘಟನೆ ಶಿವಮೊಗ್ಗದ ಅಶೋಕ ನಗರದಲ್ಲಿ ನಡೆದಿದೆ. ಧ್ವಜವನ್ನು ವಶಪಡಿಸಿಕೊಂಡಿದ್ದಾಗಿ ನಾನುಗೌರಿ.ಕಾಂಗೆ ಪೊಲೀಸರು ತಿಳಿಸಿದ್ದಾರೆ.

ಈವರೆಗೆ ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ಹೇಳಿದ್ದು, ಯಾರಾದರೂ ದೂರು ನೀಡಿದರೆ ಪ್ರಕರಣ ದಾಖಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ದೇವಾಲಯ ನಿರ್ಮಾಣ ವಿವಾದದ ಬಳಿಕ ಬೆಂಗಳೂರು ವಿವಿಯಲ್ಲಿ ದಿಢೀರನೆ ಗಣಪತಿ ಪ್ರತಿಷ್ಟಾಪನೆ; ಆರೋಪ

ಗಣೇಶ ಚತುರ್ಥಿ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ರಾಷ್ಟ್ರ ಲಾಂಛನದ ಮೇಲೆ ಕೂಡಾ ಕೇಸರಿ ಧ್ವಜವನ್ನು ಕಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶಿವಮೊಗ್ಗೆ ಡಿಎಸ್‌ಪಿ ಬಾಲರಾಜ್,“ಧ್ವಜವನ್ನು ವಿಡಿಯೊಗ್ರಾಫ್ ಮಾಡಿ ಕಾರ್ಪೋರೇಷನ್ ಕಡೆಯಿಂದ ತೆಗೆಸಿ ಅವನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಯಾರಾದರೂ ದೂರು ನೀಡಿದರೆ ಎಫ್‌ಐಆರ್‌ ದಾಖಲಿಸುತ್ತೇವೆ. ಇದೀಗ ಕಾನೂನು ತಜ್ಞರ ಸಹಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...