Homeಕರ್ನಾಟಕಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ, ಮೃತನ ಪೋನ್ ನಾಪತ್ತೆ

ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ, ಮೃತನ ಪೋನ್ ನಾಪತ್ತೆ

- Advertisement -
- Advertisement -

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನಿಬ್ಬರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಹರ್ಷ ಬಳಸುತ್ತಿದ್ದ ಫೋನ್ ಘಟನಾ ಸ್ಥಳದಿಂದ ನಾಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಇಬ್ಬರನ್ನು ಫರಾಜ್ ಪಾಷಾ (24) ಮತ್ತು ಅಬ್ದುಲ್ ಖಾದರ್ ಜಿಲಾನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಬೀಡುಬಿಟ್ಟಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಶ್ರೇಣಿಯ ಇಬ್ಬರು ಅಧಿಕಾರಿಗಳು ವಿಚಾರಣೆಯ ನೇತೃತ್ವ ವಹಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಬುಧವಾರ ಯಾವುದೇ ಅಹಿತಕರ ಘಟನೆಗಳ ವರದಿಯಾಗದೆ ಶಾಂತಿಯುತವಾಗಿತ್ತು. ಹೆಚ್ಚುವರಿ ನಿಗಾ ಇರಿಸಲು ಡ್ರೋನ್‌ಗಳನ್ನು ಬಳಸಲಾಗುತ್ತಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಮತ್ತು ಆರ್‌ಎಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ಸದ್ಯ ನಗರದಲ್ಲಿರುವ ಪರಿಸ್ಥಿತಿಯನ್ನು ಪರಿಗಣಿಸಿ ಶನಿವಾರ ಬೆಳಿಗ್ಗೆ 9 ರವರೆಗೆ ಕರ್ಫ್ಯೂ ವಿಸ್ತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್ ಸೆಲ್ವಮಣಿ ಘೋಷಿಸಿದ್ದಾರೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಎಲ್ಲಾ ಮೆರವಣಿಗೆಗಳು, ಕಾರ್ಯಕ್ರಮಗಳು, ವಿಜಯೋತ್ಸವ ಮೆರವಣಿಗೆಗಳು ಮತ್ತು ಇತರ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಐದಕ್ಕಿಂತ ಹೆಚ್ಚು ಜನರು ಒಂದೇ ಸ್ಥಳದಲ್ಲಿ ಸೇರುವಂತಿಲ್ಲ. ಎಲ್ಲಾ ಅಂಗಡಿಗಳನ್ನು ಮುಚ್ಚಲಾಗುವುದು, ಆದರೆ ಹಾಲು, ದಿನಸಿ ಮತ್ತು ತರಕಾರಿಗಳನ್ನು ಬೆಳಿಗ್ಗೆ 6 ರಿಂದ 8 ರವರೆಗೆ ಮಾರಾಟ ಮಾಡಲಾಗುವುದು ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.

“ನಗರದಲ್ಲಿ ನಿನ್ನೆ ಸಂಜೆಯವರೆಗೆ ನಡೆದ ಗಲಭೆಗೆ ಸಂಬಂಧಿಸಿದಂತೆ 27 ಎಫ್‌ಐಆರ್‌ಗಳು ದಾಖಲಾಗಿವೆ. ಹಾಗಾಗಿ ಆ ನಿಟ್ಟಿನಲ್ಲಿ ಪ್ರತ್ಯೇಕ ತಂಡ ರಚಿಸಲಾಗಿದೆ. ಅವರು ಲಭ್ಯವಿರುವ ಎಲ್ಲಾ ವೀಡಿಯೊಗಳನ್ನು ವಿಶ್ಲೇಷಿಸುತ್ತಾರೆ. ಅದರ ಆಧಾರದ ಮೇಲೆ ನಾವು ಆರೋಪಿಗಳನ್ನು ಬಂಧಿಸುತ್ತೇವೆ” ಎಂದು ಶಿವಮೊಗ್ಗ ಎಸ್ಪಿ, ಬಿ.ಎಂ.ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ.

ಮಾಧ್ಯಮಗಳಲ್ಲಿ ಹರ್ಷನ ಸ್ನೇಹಿತರೊಬ್ಬರ ಹೇಳಿಕೆ ಆಧರಿಸಿ ಇಬ್ಬರು ಹುಡುಗಿಯರು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಸಾರವಾಗುತ್ತಿದ್ದು, ಈ ಬಗ್ಗೆ ಪೊಲೀಸರು ಅಧಿಕೃತವಾಗಿ ದೃಢಪಡಿಸಿಲ್ಲ.  ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್, ’ಕೆಲವು ಹುಡುಗಿಯರು ಹರ್ಷಗೆ ಕರೆ ಮಾಡಿದ್ದಾರೆ ಎಂಬ ವರದಿಗಳನ್ನು  ಖಚಿತಪಡಿಸಲು ಸಾಧ್ಯವಿಲ್ಲ. ಆದರೆ ಹರ್ಷ ಅವರ ಫೋನ್ ಕಾಣೆಯಾಗಿದೆ’ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ: ಸರ್ಕಾರ ಎಸಗುತ್ತಿರುವ ಲೋಪಗಳತ್ತ ಜನಾಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆಂಧ್ರ ಪ್ರದೇಶ: ಕಾಂಬೋಡಿಯಾಕ್ಕೆ ಕಳ್ಳಸಾಗಣೆಯಾಗಿದ್ದ 27 ಯುವಕರು ಮನೆಗೆ ವಾಪಸ್

0
ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಕಾಂಬೋಡಿಯಾಕ್ಕೆ ಕಳ್ಳಸಾಗಣೆ ಮಾಡಲಾಗಿದ್ದ 27 ಯುವಕರು ಕಳೆದ ಶುಕ್ರವಾರ (ಮೇ 24) ಮನೆಗೆ ಮರಳಿದ್ದಾರೆ. ಉದ್ಯೋಗದ ಭರವಸೆ ಮೇಲೆ ಒಟ್ಟು 58 ಯುವಕರನ್ನು ಇತ್ತೀಚೆಗೆ ಕಾಂಬೋಡಿಯಾಕ್ಕೆ...