Homeಕರ್ನಾಟಕಶಿವಮೊಗ್ಗ: ಮೀಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಮೀಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

- Advertisement -
- Advertisement -

ಶಿವಮೊಗ್ಗದ ರಾಗಿಗುಡ್ಡದಲ್ಲಿ ಮೀಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಹಿನ್ನೆಲೆಯಲ್ಲಿ  ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

ಮುಂಜಾಗೃತ ಕ್ರಮವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಿವಮೊಗ್ಗ ನಗರದಾದ್ಯಂತ ಸಿಆರ್ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ.

ನಿಷೇಧಾಜ್ಞೆ ಸಂದರ್ಭ ಐದು ಜನರಿಗಿಂತಲು ಹೆಚ್ಚು ಜನರು ಗುಂಪುಗೂಡುವುದು ಮತ್ತು ಓಡಾಡುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಮೆರವಣಿಗೆ, ಪ್ರತಿಭಟನೆ, ಸಭೆ, ಸಮಾರಂಭಗಳಿಗೆ ಅವಕಾಶ ನಿರಾಕರಿಸಲಾಗಿದೆ.

ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿದ್ದು, 7 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಲು ತೂರಾಟದ ಬಳಿಕ ಪೊಲೀಸರು ಲಾಠೀ ಚಾರ್ಜ್ ಮಾಡಿ ಅಲ್ಲಲ್ಲಿ ನಿಂತಿದ್ದ ಜನರನ್ನು ಚದುರಿಸಿದ್ದಾರೆ. ಕೆಲ ಮನೆಗಳಿಗೆ ಮತ್ತು ವಾಹನಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ.

ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡದಲ್ಲಿ 144 ಸೆಕ್ಷನ್‌ ಜಾರಿಗೊಳಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳಲಾಗಿದೆ. ಇದೀಗ ಮಹಾನಗರ ವ್ಯಾಪ್ತಿಗೆ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ.

ಘಟನೆ ಬಗ್ಗೆ ಮಾತನಾಡಿದ ಎಸ್ಪಿ ಮಿಥುನ್ ಕುಮಾರ್, ಕಲ್ಲು ತೂರಾಟ ವೇಳೆ ಸುಮಾರು 4 ರಿಂದ 5 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಗಿ ಗುಡ್ಡದಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಮನವಿ ಮಾಡಿದ್ದಾರೆ.

ಇದನ್ನು ಓದಿ:ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ ಪತ್ರ!: ಮೂವರು ಸಚಿವರ ಹೆಸರು ಉಲ್ಲೇಖ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...