Homeಕರ್ನಾಟಕಶಿವಮೊಗ್ಗದಲ್ಲಿ ಜೆಡಿಎಸ್‌ಗೆ ಮತ್ತೊಂದು ಆಘಾತ: ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ಕಾಂಗ್ರೆಸ್ ಸೇರ್ಪಡೆ

ಶಿವಮೊಗ್ಗದಲ್ಲಿ ಜೆಡಿಎಸ್‌ಗೆ ಮತ್ತೊಂದು ಆಘಾತ: ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ಶಿವಮೊಗ್ಗದ ಜೆಡಿಎಸ್ ಜಿಲ್ಲಾಧ್ಯಕ್ಷ ತೀರ್ಥಹಳ್ಳಿಯ ಮಂಜುನಾಥ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಶಿವಮೊಗ್ಗ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್ ಮತ್ತಿತರರು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಕಳೆದ ತಿಂಗಳು ಕಾಂಗ್ರೆಸ್ ಪಕ್ಷ ಸೇರುವುದಾಗಿ ಸೊರಬದಲ್ಲಿ ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಘೋಷಣೆ ಮಾಡಿದ್ದರು . ದೊಡ್ಡ ಸಮಾವೇಶ ನಡೆಸಿ ಪಕ್ಷಕ್ಕೆ ಅಧಿಕೃತವಾಗಿ ಸೇರಲಿದ್ದೇನೆ. ನನ್ನ ಜೊತೆಗೆ ಹಲವು ಮುಖಂಡರು ಜೆಡಿಎಸ್ ಸೇರಲಿದ್ದಾರೆ ಎಂದಿದ್ದರು.

ಇದನ್ನೂ ಓದಿ: ಮಧು ಬಂಗಾರಪ್ಪ ಬೆನ್ನಿಗೆ ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ ತೀರ್ಥಹಳ್ಳಿಯ ಆರ್.ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿಯ ಅಪೆಕ್ಸ್ ಮತ್ತು ಡಿಸಿಸಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಕೊಡಚಾದ್ರಿ ಸಹ್ಯಾದ್ರಿ ಗ್ರಾಮೀಣ ಟ್ರಸ್ಟ್‌ನ ಅಧ್ಯಕ್ಷರಾದ ಆರ್.ಎಂ ಮಂಜುನಾಥ್ ಗೌಡ ಅಧಿಕೃತವಾಗಿ ಕಾಂಗ್ರೆಸ್ ಸೇರುವ ಕುರಿತಂತೆ ಏಪ್ರಿಲ್ 04 ರಂದು ಕಾರ್ಯಕರ್ತರ ಸಭೆ ನಡೆಸಿದ್ದರು. ಕಿಮ್ಮನೆ ರತ್ನಾಕರ್ ಮತ್ತು ಅವರು ಕೂಡಿ ಕೋಮುವಾದಿಗಳನ್ನು ಶಿವಮೊಗ್ಗದಲ್ಲಿ ಎದುರಿಸಲು ಬಹುದೊಡ್ಡ ಪೂರ್ವಭಾವಿ ನಡೆಸಿದ್ದೇವೆ ಎಂದಿದ್ದ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರುವುದಾಗಿ ಅಂದೇ ಘೋಷಿಸಿದ್ದರು.

“ಜೆಡಿಎಸ್ ಮುಖಂಡ ಮಂಜುನಾಥ ಗೌಡ ಅವರು ಯಾವುದೇ ಯಾವುದೇ ಷರತ್ತಿಲ್ಲದೆ ಅವರು ಪಕ್ಷ ಸೇರ್ಪಡೆ ಆಗಿದ್ದಾರೆ. ಅಪೆಕ್ಸ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಬಹಳ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲೆಯಲ್ಲಿ ಪಕ್ಷಕ್ಕೆ ಬಲ ತುಂಬಲಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಬೆಳಗಾವಿ ಮತ್ತು ಬಾಗಲಕೋಟೆಯ ಅನ್ಯಪಕ್ಷಗಳ ಮಹಿಳಾ ಮುಖಂಡರು ತಮ್ಮ ಬೆಂಬಲಿಗರೊಂದಿಗೆ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

 


ಇದನ್ನೂ ಓದಿ: ಕಾಂಗ್ರೆಸ್ ಸೇರಲು ತೀರ್ಮಾನ ಮಾಡಿದ್ದೇನೆ: ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

0
'ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ' ಮತ್ತು 'ನನ್ನ ಅಜ್ಜಿ ಆಡಳಿತದಲ್ಲಿ ದೇಶದ ಯುದ್ಧಕ್ಕಾಗಿ ತಮ್ಮ ಚಿನ್ನವನ್ನು ದಾನ ಮಾಡಿದ್ದಾರೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದು, ಪ್ರಧಾನಿ...