Homeಮುಖಪುಟಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆ ವಿವರ ನೀಡುವಂತೆ ಶೋಭಾ ಕರಂದ್ಲಾಜೆ ಪತ್ರ: ಸಿದ್ದರಾಮಯ್ಯ ಆತಂಕ

ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆ ವಿವರ ನೀಡುವಂತೆ ಶೋಭಾ ಕರಂದ್ಲಾಜೆ ಪತ್ರ: ಸಿದ್ದರಾಮಯ್ಯ ಆತಂಕ

- Advertisement -
- Advertisement -

ರಾಜ್ಯದ ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳ ವಿವರ ನೀಡುವಂತೆ ಸಂಸದರು ಮತ್ತು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಶೋಭಾ ಕರಂದ್ಲಾಜೆಯವರು ತಮ್ಮ ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ಅಭ್ಯರ್ಥಿಗಳಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಆತಂಕ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು, “ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ” ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ?
ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಅಥವಾ ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ಅವರು ಪ್ರಶ್ನಿಸಿದ್ದಾರೆ.

ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಶಾಮೀಲಾಗುರುವುದು ಸ್ಪಷ್ಟವಾಗಿದೆ. ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು ಎಂದು ಸಿದ್ದರಾಮಯ್ಯನವರು ಆಗ್ರಹಿಸಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ಕೂಡ ಈ ಪತ್ರದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. “ಚುನಾವಣೆ ನಡೆಸುತ್ತಿರುವುದು ಬಿಜೆಪಿ ಪಕ್ಷವೋ, ಚುನಾವಣಾ ಆಯೋಗವೋ? ಆಯೋಗವು ಬಿಜೆಪಿ ಹೇಳಿದಂತೆ ಕೇಳುತ್ತಿದೆಯೇ? ಇದನ್ನು Chief Electoral Officer Karnataka ಸ್ಪಷ್ಟಪಡಿಸಬೇಕು. ಇಲ್ಲ ಎಂದಾದಲ್ಲಿ ಈ ಪತ್ರದ ಕುರಿತು ತನಿಖೆ ಕೈಗೊಂಡು ಬಿಜೆಪಿ ಪಕ್ಷದ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಲ್ಲಿ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಬೇಕಾಗುತ್ತದೆ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ‘ಈದಿನ’ ಮಾಧ್ಯಮ ಮೆಗಾ ಸರ್ವೇ: ಕಾಂಗ್ರೆಸ್‌ಗೆ 132-140 ಸ್ಥಾನ – ಸ್ಪಷ್ಟ ಬಹುಮತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...