Homeಮುಖಪುಟತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಕೆಸಿಆರ್‌ಗೆ ಆಘಾತ; ಬಿಆರ್‌ಎಸ್‌ನ 35 ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆ

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಕೆಸಿಆರ್‌ಗೆ ಆಘಾತ; ಬಿಆರ್‌ಎಸ್‌ನ 35 ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆ

- Advertisement -
- Advertisement -

ತೆಲಂಗಾಣ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ರಾಜ್ಯದಲ್ಲಿ ಭಾರೀ ಬದಲಾವಣೆ ನಡೆಯುತ್ತಿದೆ. 35 ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕರು ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ. ಈ ವರ್ಷಾಂತ್ಯದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಮಧ್ಯೆ ಬಿಆರ್‌ಎಸ್ ನಾಯಕರು ಕೆಸಿಆರ್‌ಗೆ ಬಿಗ್‌ ಶಾಕ್ ನೀಡಿದ್ದಾರೆ.

ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಸೇರಿದಂತೆ 35 ಬಿಆರ್‌ಎಸ್ ನಾಯಕರು ಕಾಂಗ್ರೆಸ್ ಸೇರಲಿದ್ದು ಸೋಮವಾರ ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜುಲೈ ಮೊದಲ ವಾರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಉಪಸ್ಥಿತಿಯೊಂದಿಗೆ ತೆಲಂಗಾಣದ ಖಮ್ಮಮ್‌ನಲ್ಲಿ ನಡೆಯಲಿರುವ ಸಾರ್ವಜನಿಕ ರ್ಯಾಲಿಯಲ್ಲಿ ಬಿಆರ್‌ಎಸ್ ನಾಯಕರು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರಲಿದ್ದಾರೆ. ರೆಡ್ಡಿ ಅವರು ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಖಮ್ಮಂನಿಂದ ಬಿಆರ್‌ಎಸ್ ಸಂಸದರಾಗಿದ್ದರು.

ಕಾಂಗ್ರೆಸ್ ಸೇರಲಿರುವ ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಅವರು ಸೋಮವಾರ ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು.

35 Bharat Rashtra Samithi leaders join Congress months ahead of Telangana polls

ಕಾಂಗ್ರೆಸ್ ನಾಯಕ ಪವನ್ ಖೇರಾ ಈ ಬೆಳವಣಿಗೆಯನ್ನು “ಬದಲಾವಣೆಯ ಗಾಳಿ” ಎಂದು ಬಣ್ಣಿಸಿದ್ದಾರೆ. ”ಈ ಬದಲಾವಣೆಯ ಗಾಳಿಯು ‘ಭಾರತ್ ಜೋಡೋ ಯಾತ್ರೆ’ಯಿಂದ ಪ್ರಾರಂಭವಾಯಿತು, ಅದರ ಪರಿಣಾಮವನ್ನು ನೀವು ಕರ್ನಾಟಕದಲ್ಲಿ ನೋಡಿದ್ದೀರಿ. ಇಂದು, ತೆಲಂಗಾಣದ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ ಮತ್ತು ಅವರೆಲ್ಲರೂ ಪಕ್ಷದ ಉನ್ನತ ನಾಯಕರನ್ನು ಭೇಟಿಯಾದ ನಂತರ ಸುದೀರ್ಘ ಮಾತುಕತೆ ನಡೆಸಿದ್ದಾರೆ” ಎಂದು ಖೇರಾ ಹೇಳಿದರು.

ಈ ಬೆಳವಣಿಗೆಯನ್ನು ಸ್ವಾಗತಿಸಿದ ರಾಹುಲ್ ಗಾಂಧಿ, ”ಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್ ತನ್ನ ಯಶಸ್ಸನ್ನು ಮುಂದುವರೆಸುತ್ತದೆ” ಎಂದು ಹೇಳಿದರು.

”ಒಗ್ಗೂಡಿದ ಕಾಂಗ್ರೆಸ್ ಅನ್ನು ತಡೆಯಲಾಗದು” ಎಂದು ಗಾಂಧಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕರ್ನಾಟಕದಲ್ಲಿ 224 ವಿಧಾನಸಭಾ ಸ್ಥಾನಗಳ ಪೈಕಿ 136 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಸ್ಪಷ್ಟ ಬಹುಮತವನ್ನು ಪಡೆದುಕೊಂಡಿತ್ತು. ತೆಲಂಗಾಣದಲ್ಲಿ, 2014 ರಿಂದ ರಾಜ್ಯವನ್ನು ಆಳುತ್ತಿರುವ ಭಾರತ್ ರಾಷ್ಟ್ರ ಸಮಿತಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

ಮೂಲಗಳ ಪ್ರಕಾರ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಜೂಪಲ್ಲಿ ಕೃಷ್ಣರಾವ್ ಇಬ್ಬರೂ ತಮ್ಮ ಬೆಂಬಲಿಗರೊಂದಿಗೆ ಜುಲೈ ಮೊದಲ ವಾರದಲ್ಲಿ ಔಪಚಾರಿಕವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಖಮ್ಮಂನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಲ್ಲೇ ಕಾಂಗ್ರೆಸ್ ಮುಖಂಡ ಭಟ್ಟಿ ವಿಕ್ರಮಾರ್ಕ ತಮ್ಮ ಪಾದಯಾತ್ರೆಯನ್ನು ಮುಕ್ತಾಯಗೊಳಿಸಲಿದ್ದಾರೆ. ಏಪ್ರಿಲ್‌ನಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಜೂಪಲ್ಲಿ ಕೃಷ್ಣರಾವ್ ಅವರನ್ನು ಬಿಆರ್‌ಎಸ್‌ನಿಂದ ಅಮಾನತುಗೊಳಿಸಲಾಗಿತ್ತು. ಇದಾದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಇವರಿಬ್ಬರನ್ನು ಓಲೈಸಲು ಪ್ರಯತ್ನಿಸಿದ್ದವು. ಆದರೂ ಇಬ್ಬರೂ ಕಾಂಗ್ರೆಸ್ ಆಯ್ಕೆ ಮಾಡಿದ್ದಕ್ಕೆ ಅವರದ್ದೇ ಆದ ರಾಜಕೀಯ ಕಾರಣಗಳಿವೆ.

ಜೂಪಲ್ಲಿ ಕೃಷ್ಣರಾವ್ ಕೊಲ್ಲೂರಿನಿಂದ ಐದು ಬಾರಿ ಶಾಸಕರಾಗಿದ್ದು ಮಹೆಬೂಬ್‌ನಗರದಿಂದ ಮಾಜಿ ಸಚಿವರಾಗಿದ್ದಾರೆ, ಅಲ್ಲಿ ಅವರ ದೀರ್ಘಕಾಲದ ರಾಜಕೀಯ ಪ್ರತಿಸ್ಪರ್ಧಿ ಡಿಕೆ ಅರುಣಾ ರಾಜ್ಯ ಬಿಜೆಪಿಯಲ್ಲಿ ಉದಯೋನ್ಮುಖ ತಾರೆಯಾಗಿದ್ದಾರೆ. ಹಾಗಾಗಿ ಬಿಜೆಪಿಗೆ ಹೋಗುವುದು ಸೂಕ್ತವಲ್ಲ.

ಬಿಆರ್‌ಎಸ್ ದುರ್ಬಲವಾಗಿರುವ ಖಮ್ಮಂನಲ್ಲಿ ರೆಡ್ಡಿ ಪ್ರಬಲ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಅವರು 2014ರಲ್ಲಿ ವೈಎಸ್‌ಆರ್‌ಸಿಪಿ ಸಂಸದರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮೂರು ಎಂಎಲ್‌ಎ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡಿದರು. ಆದರೆ 2018ರ ಚುನಾವಣೆಯಲ್ಲಿ ಸಚಿವ ಪುವ್ವಾಡ ಅಜಯ್ ಕುಮಾರ್ ಅವರನ್ನು ಸೋಲಿಸಲು ಅವರು ಕೆಲಸ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಇದಾದ ನಂತರ ಅವರಿಗೆ ಸಂಸದ ಟಿಕೆಟ್ ನಿರಾಕರಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಸುಳಿವು ನೀಡುತ್ತಿರುವ ಬಿಎಸ್‌ಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...