Homeಅಂತರಾಷ್ಟ್ರೀಯಲೆಬನಾನ್‌ ಬೈರುತ್ ಬಂದರಿನಲ್ಲಿ ಬೃಹತ್ ಸ್ಫೋಟ!

ಲೆಬನಾನ್‌ ಬೈರುತ್ ಬಂದರಿನಲ್ಲಿ ಬೃಹತ್ ಸ್ಫೋಟ!

ಬೈರುತ್ ನಗರದಲ್ಲಿ ಸಂಭವಿಸಿದ ದೊಡ್ಡ ಸ್ಫೋಟದಿಂದ ಆಘಾತ ಮತ್ತು ದುಃಖವಾಗಿದೆ. ನಮ್ಮ ಪ್ರಾರ್ಥನೆಗಳು ದುಃಖಿತ ಕುಟುಂಬಗಳು ಮತ್ತು ಗಾಯಗೊಂಡವರೊಂದಿಗೆ ಇವೆ ಎಂದು ಪ್ರಧಾನ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

- Advertisement -
- Advertisement -

ಲೆಬನಾನ್‌ನ ಬೈರುತ್‌ನಲ್ಲಿ ಕಳೆದ ರಾತ್ರಿ ಸಂಭವಿಸಿದ ಭಾರಿ ಸ್ಫೋಟದಿಂದ ಕನಿಷ್ಠ 73 ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇಸ್ರೇಲ್‌ ಮತ್ತು ಸಿರಿಯಾ ನಡುವೆ ಇರುವ ಬೈರುತ್ ಬಂದರಿನ ಬಳಿ ನಡೆದ ಸ್ಫೋಟದಲ್ಲಿ ಬೃಹತ್‌ ಹೊಗೆಯ ಮೋಡ ಆವರಿಸಿತ್ತು. ಇದು ನೂರಾರು ಮೈಲುಗಳಷ್ಟು ದೂರದಲ್ಲಿರುವ ಸೈಪ್ರಸ್‌ನವರೆಗೆ ವ್ಯಾಪಿಸಿತ್ತು. ಜೊತೆಗೆ ಇದರಿಂದ ಲೆಬನಾನಿನ ರಾಜಧಾನಿಯಲ್ಲಿ 3.3 ತೀವ್ರತೆಯ ಭೂಕಂಪನವಾಗಿದೆ.

ರಸಗೊಬ್ಬರಗಳು ಮತ್ತು ಬಾಂಬುಗಳಲ್ಲಿ ಬಳಸಲಾಗುವ ತೀವ್ರ ಸ್ಫೋಟಕ ವಸ್ತುವಾಗಿರುವ 2,750 ಟನ್ ಅಮೋನಿಯಂ ನೈಟ್ರೇಟ್ ಅನ್ನು ಆರು ವರ್ಷಗಳ ಕಾಲ ಬಂದರು ಗೋದಾಮಿನಲ್ಲಿ ಸುರಕ್ಷತಾ ಕ್ರಮಗಳಿಲ್ಲದೆ ಸಂಗ್ರಹಿಸಲಾಗಿದೆ ಎಂದು ಲೆಬನಾನ್ ಪ್ರಧಾನಿ ಹಸನ್ ಡಯಾಬ್ ಹೇಳಿದ್ದಾರೆ.

ಇದೇ ಸ್ಫೋಟಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಪ್ರಧಾನ ಮಂತ್ರಿ ಸ್ಫೋಟದ ಕಾರಣದ ಬಗ್ಗೆ ತನಿಖೆ ನಡೆಸಬೇಕೆಂದು ಕರೆ ನೀಡಿದ್ದು, ಐದು ದಿನಗಳಲ್ಲಿ ಫಲಿತಾಂಶಗಳು ಬಿಡುಗಡೆಯಾಗುತ್ತವೆ ಎಂದು ಹೇಳಿಕೆ ತಿಳಿಸಿದೆ.

ಹೆಚ್ಚು ಸ್ಫೋಟಕ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡು ಗೋದಾಮಿನಲ್ಲಿ ಸಂಗ್ರಹಿಸಲಾಗಿದೆ ಎಂದು ಲೆಬನಾನ್‌ನ ಸಾಮಾನ್ಯ ಭದ್ರತಾ ಮುಖ್ಯಸ್ಥ ಅಬ್ಬಾಸ್ ಇಬ್ರಾಹಿಂ ಹೇಳಿದ್ದಾರೆ.

ಆರಂಭಿಕ ವರದಿಗಳು ಬಂದರಿನ ಬಳಿಯ ಗೋದಾಮಿನೊಂದರಲ್ಲಿ ಪಟಾಕಿಗಳಿಂದ ಸಂಭವಿಸಿದ ದೊಡ್ಡ ಬೆಂಕಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಲೆಬನಾನಿನ ರಾಜ್ಯ ಸುದ್ದಿ ಸಂಸ್ಥೆ ಎನ್‌ಎನ್‌ಎ ತಿಳಿಸಿದೆ.

ರಾಯ್ಟರ್ಸ್ ಪ್ರಕಾರ, ಕನಿಷ್ಠ 78 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ 4,000 ಜನರು ಗಾಯಗೊಂಡಿದ್ದಾರೆ ಎಂದು ದೇಶದ ಆರೋಗ್ಯ ಸಚಿವ ಹಮದ್ ಹಸನ್ ಹೇಳಿದ್ದಾರೆ.

ಇದುವರೆಗೂ ಅನೇಕ ಜನರು ಕಾಣೆಯಾಗಿದ್ದಾರೆ ಎಂದು ಹಸನ್ ಹೇಳಿದ್ದಾರೆ.

“ಜನರು ತಮ್ಮ ಪ್ರೀತಿಪಾತ್ರರ ಬಗ್ಗೆ ತುರ್ತು ವಿಭಾಗವನ್ನು ಕೇಳುತ್ತಿದ್ದಾರೆ ಮತ್ತು ವಿದ್ಯುತ್ ಇಲ್ಲದ ಕಾರಣ ರಾತ್ರಿಯಲ್ಲಿ ಹುಡುಕುವುದು ಕಷ್ಟವಾಗಿತ್ತು. ನಾವು ನಿಜವಾದ ದುರಂತವನ್ನು ಎದುರಿಸುತ್ತಿದ್ದೇವೆ ಮತ್ತು ಹಾನಿಯ ವ್ಯಾಪ್ತಿಯನ್ನು ನಿರ್ಣಯಿಸಲು ಸಮಯ ಬೇಕಾಗುತ್ತದೆ” ಎಂದು ಅದು ಹೇಳಿದೆ.

ನಗರದ ಗವರ್ನರ್ ಮರ್ವಾನ್ ಅಬ್ಬೌಡ್ ಅವರ ಪ್ರಕಾರ ಕನಿಷ್ಠ 10 ಅಗ್ನಿಶಾಮಕ ದಳದವರು ಕಾಣೆಯಾಗಿದ್ದಾರೆ. ಈ ದೃಶ್ಯವು “ಹಿರೋಷಿಮಾ ಮತ್ತು ನಾಗಾಸಾಕಿ” ಯನ್ನು ನೆನಪಿಸುತ್ತದೆ ಎಂದು ಹೇಳಿದರು.

ನನ್ನ ಜೀವನದಲ್ಲಿ ನಾನು ಈ ಪ್ರಮಾಣದಲ್ಲಿ ವಿನಾಶವನ್ನು ಕಂಡಿಲ್ಲ ಎಂದು ಅಬ್ಬೌದ್ ಹೇಳಿದರು. ಇದು ರಾಷ್ಟ್ರೀಯ ದುರಂತ ಎಂದರು.

“ಬೈರುತ್ ನಗರದಲ್ಲಿ ಸಂಭವಿಸಿದ ದೊಡ್ಡ ಸ್ಫೋಟದಿಂದ ಆಘಾತ ಮತ್ತು ದುಃಖವಾಗಿದೆ. ನಮ್ಮ ಪ್ರಾರ್ಥನೆಗಳು ದುಃಖಿತ ಕುಟುಂಬಗಳು ಮತ್ತು ಗಾಯಗೊಂಡವರೊಂದಿಗೆ ಇವೆ” ಎಂದು ಪ್ರಧಾನ ಮಂತ್ರಿಯವರ ಕಛೇರಿ ಟ್ವೀಟ್‌ ಮಾಡಿದೆ.


ಇದನ್ನೂ ಓದಿ: ’ನಿಮ್ಮ ಬಗ್ಗೆ ನನಗೆ ಹೆಮ್ಮೆಯಿದೆ…ದೆಹಲಿಗರೆ’: ಮುಖ್ಯಮಂತ್ರಿ ಅರಂವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...