Homeಅಂತರಾಷ್ಟ್ರೀಯಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

- Advertisement -
- Advertisement -

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಆಸ್ಟಿನ್ ನಿವಾಸಿಯಾದ ಸವಿತಾ ಶಾನ್ ಮೃತ ವಿದ್ಯಾರ್ಥಿನಿ. ಇವರು ಟೆಕ್ಸಾಸ್ ವಿಶ್ವವಿದ್ಯಾಲಯದ ಅಂತಿಮ ವರ್ಷದ ಡ್ಯುಯಲ್ ಡಿಗ್ರಿ ವಿದ್ಯಾರ್ಥಿನಿಯಾಗಿದ್ದರು. ಭಾನುವಾರ ವೆಸ್ಟ್ ಸಿಕ್ಸ್‌ಸ್ತ್ ಸ್ಟ್ರೀಟ್‌ನ ಜನನಿಬಿಡ ಮನರಂಜನಾ ವಲಯದಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ ಇವರು ಬಲಿಯಾಗಿದ್ದಾರೆ.

ಪದವಿ ಪಡೆಯಲು ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವಾಗ ಸವಿತಾ ಮೃತಪಟ್ಟಿದ್ದಾರೆ. ಇವರು ಮ್ಯಾನೇಜ್‌ಮೆಂಟ್ ಇನ್ಫರ್ಮೇಷನ್ ಸಿಸ್ಟಮ್ಸ್ ಮತ್ತು ಅರ್ಥಶಾಸ್ತ್ರ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಅತ್ಯುತ್ತಮ ವಿದ್ಯಾರ್ಥಿ ನಾಯಕಿ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ಗುಣಗಾಣ ಮಾಡಿದ್ದಾರೆ.

ಸೋಮವಾರ ಮಧ್ಯಾಹ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಸ್ಟಿನ್ ಪೊಲೀಸ್ ಮುಖ್ಯಸ್ಥರಾದ ಲಿಸಾ ಡೇವಿಸ್ ಅವರು, ಗುಂಡಿನ ದಾಳಿ ನಡೆದ ಸ್ಥಳದಲ್ಲೇ ಮೃತಪಟ್ಟ ಇಬ್ಬರ ಗುರುತನ್ನು ಅಧಿಕೃತವಾಗಿ ದೃಢಪಡಿಸಿದ್ದಾರೆ. ಅವರು 19 ವರ್ಷದ ರೈಡರ್ ಹ್ಯಾರಿಂಗ್ಟನ್ ಮತ್ತು ಸವಿತಾ ಶಾನ್ ಎಂದು ವರದಿಯಾಗಿದೆ.

ಗುಂಡಿನ ದಾಳಿಯ ಮೃತರಲ್ಲಿ ಸವಿತಾ ಒಬ್ಬರು ಎಂದು ಗೊತ್ತಾದ ನಂತರ, ಟೆಕ್ಸಾಸ್‌ನಲ್ಲಿರುವ ಭಾರತೀಯ ಮೂಲದ ಅಮೆರಿಕನ್ ಸಮುದಾಯವು ತೀವ್ರ ಶೋಕ ವ್ಯಕ್ತಪಡಿಸಿದೆ.

ಈ ಹತ್ಯೆಯು ಆಸ್ಟಿನ್ ನಗರದ ದೊಡ್ಡ ಪ್ರಮಾಣದ ಭಾರತೀಯ ಸಮುದಾಯಕ್ಕೆ ಆಘಾತವನ್ನುಂಟು ಮಾಡಿದೆ. ವಿಶೇಷವಾಗಿ ನಗರದ ‘ಸಿಲಿಕಾನ್ ಹಿಲ್ಸ್’ ಪ್ರದೇಶದಲ್ಲಿರುವ ವಿದ್ಯಾರ್ಥಿಗಳು ಮತ್ತು ತಂತ್ರಜ್ಞಾನ ವೃತ್ತಿಪರರಲ್ಲಿ ಈ ಘಟನೆ ತೀವ್ರ ಆತಂಕ ಹಾಗೂ ದಿಗ್ಭ್ರಮೆಯನ್ನು ಮೂಡಿಸಿದೆ.

ಎಫ್‌ಬಿಐ ಜಂಟಿ ಭಯೋತ್ಪಾದನಾ ಕಾರ್ಯಪಡೆಯ ನೇತೃತ್ವದಲ್ಲಿ ಫೆಡರಲ್ ಅಧಿಕಾರಿಗಳು ಈ ದಾಳಿಯ ಹಿಂದೆ ಅಂತಾರಾಷ್ಟ್ರೀಯ ಸಂಘಟನೆಗಳ ಕೈವಾಡ ಅಥವಾ ಯಾವುದೇ ನಿರ್ದಿಷ್ಟ ಸೈದ್ಧಾಂತಿಕ ಕಾರಣ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಸಂದೇಹಾಸ್ಪದ ವ್ಯಕ್ತಿಯನ್ನು 53 ವರ್ಷದ ಎನ್ಡಿಯಾಗಾ ಡಿಯಾಗ್ನೆ ಎಂದು ಗುರುತಿಸಲಾಗಿದ್ದು, ಈತ ಮೂಲತಃ ಸೆನೆಗಲ್ ದೇಶದವನಾಗಿದ್ದು ಅಮೆರಿಕದ ಪೌರತ್ವವನ್ನು ಹೊಂದಿದ್ದನು. ಘಟನಾ ಸ್ಥಳದಲ್ಲಿಯೇ ಪೊಲೀಸರು ಈತನನ್ನು ಹತ್ಯೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...