Homeಅಂತರಾಷ್ಟ್ರೀಯಲಸಿಕೆ ಪಡೆದ ಕೆಲವೇ ದಿನಗಳಲ್ಲಿ ಪಾಕಿಸ್ತಾನ ರಾಷ್ಟ್ರಪತಿಗೆ ಕೊರೊನಾ ಪಾಸಿಟಿವ್!

ಲಸಿಕೆ ಪಡೆದ ಕೆಲವೇ ದಿನಗಳಲ್ಲಿ ಪಾಕಿಸ್ತಾನ ರಾಷ್ಟ್ರಪತಿಗೆ ಕೊರೊನಾ ಪಾಸಿಟಿವ್!

- Advertisement -
- Advertisement -

ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದ ಕೆಲವೆ ದಿನಗಳ ಅಂತರದಲ್ಲಿ ಪಾಕಿಸ್ತಾನದ ರಾಷ್ಟ್ರಪತಿ ಡಾ. ಆರಿಫ್ ಅಲ್ವಿ ಅವರು ಕೊರೊನಾ ಪಾಸಿಟಿವ್‌ ಆಗಿದ್ದಾರೆ. ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‌ ಕೂಡಾ ಲಸಿಕೆ ಪಡೆದ ನಂತರ ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಗಿದ್ದರು.

ತಮ್ಮ ಆರೋಗ್ಯದ ಬಗ್ಗೆ ಟ್ವಿಟರ್‌‌ನಲ್ಲಿ ಬರೆದಿರುವ ಆರಿಫ್ ಅಲ್ವಿ, ಲಸಿಕೆಯ ಮೊದಲ ಡೋಸ್‌ಗಳನ್ನು ತೆಗೆದುಕೊಂಡರೂ, ತನ್ನ ದೇಹದಲ್ಲಿ ಪ್ರತಿಕಾಯಗಳು ಇನ್ನೂ ಬೆಳೆಯಲು ಪ್ರಾರಂಭಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಧಿಕ್ಕಾರ ಕೂಗುವಂತೆ ಒತ್ತಾಯಿಸಿ ಹಲ್ಲೆ: ಬಂಧಿತ ದೆಹಲಿ ಗಲಭೆಯಲ್ಲೂ ಆರೋಪಿ!

“ನಾನು ಕೊರೊನಾ ಪಾಸಿಟಿವ್‌ ಆಗಿದ್ದೇನೆ. ಎಲ್ಲಾ ಕೊರೊನಾ ಪೀಡಿತರ ಮೇಲೆ ಅಲ್ಲಾಹನ ದಯೆ ಇರಲಿ. ಲಸಿಕೆಯ 1 ನೇ ಡೋಸ್ ಪಡೆದಿದ್ದೇನೆ. ಆದರೆ ಒಂದು ವಾರದಲ್ಲಿ ಪಡೆಯಬೇಕಿದ್ದ 2 ನೇ ಡೋಸ್ ನಂತರ ಪ್ರತಿಕಾಯಗಳು ಅಭಿವೃದ್ಧಿಗೊಳ್ಳಲು ಪ್ರಾರಂಭಿಸುತ್ತವೆ. ದಯವಿಟ್ಟು ಜಾಗರೂಕರಾಗಿರಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಕೂಡ ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದರು. 68 ವರ್ಷದ ಇಮ್ರಾನ್ ಖಾನ್ ಕೊರೊನಾ ಲಸಿಕೆ ಪಡೆದ ಎರಡೆ ದಿನಗಳಲ್ಲಿ ಕೊರೊನಾ ಪಾಸಿಟಿವ್ ಆಗಿದ್ದರು. ಅವರ ಪತ್ನಿ ಬುಶ್ರಾ ಬೀಬಿ ಕೂಡ ಅದೇ ದಿನ ಕೊರೊನಾ ಪಾಸಿಟಿವ್ ಆಗಿದ್ದಾರೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: ಲಸಿಕೆ ಪಡೆದ ಎರಡೇ ದಿನದಲ್ಲಿ ಕೊರೊನಾ ಪಾಸಿಟಿವ್‌ ಆದ ಪಾಕಿಸ್ತಾನ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ (ಬಾಲೆನ್ ಶಾ) ಪ್ರಮಾಣವಚನ ಸ್ವೀಕರಿಸಿದ ಮರುದಿನವೇ (ಮಾ.28, ಶನಿವಾರ), ಮಾಜಿ ಪ್ರಧಾನಿ ಕೆ. ಪಿ. ಶರ್ಮಾ ಓಲಿ ಅವರ ಬಂಧನವಾಗಿದೆ. ಸೆಪ್ಟೆಂಬರ್ 2025ರಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ...

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...