Homeಮುಖಪುಟಕೇಜ್ರಿವಾಲ್ ಬಂಧನವಾದ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೇ?: AAPಯಿಂದ ಬೃಹತ್ ಅಭಿಯಾನ

ಕೇಜ್ರಿವಾಲ್ ಬಂಧನವಾದ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೇ?: AAPಯಿಂದ ಬೃಹತ್ ಅಭಿಯಾನ

- Advertisement -
- Advertisement -

‘ಬಿಜೆಪಿಯ ಪಿತೂರಿ’ಯಿಂದಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದರೆ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೇ ಎಂಬ ಬಗ್ಗೆ ಜನರ ಅಭಿಪ್ರಾಯ ಪಡೆಯಲು ಎಎಪಿ ಡಿಸೆಂಬರ್ 1 ರಿಂದ 20 ರವರೆಗೆ ಬೃಹತ್ ಸಹಿ ಅಭಿಯಾನವನ್ನು ನಡೆಸಲಿದೆ ಎಂದು ಪಕ್ಷದ ಗೋಪಾಲ್ ರೈ ಹೇಳಿದ್ದಾರೆ.

ಎಎಪಿ ಸಂಸದ ರಾಘವ್ ಚಡ್ಡಾ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೈ, ”ಆಮ್ ಆದ್ಮಿ ಪಕ್ಷವನ್ನು ಮುಗಿಸುವ ದುರುದ್ದೇಶದಿಂದ ಬಿಜೆಪಿಯು ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ಮದ್ಯ ಹಗರಣದ ಅಡಿಯಲ್ಲಿ ಬಂಧಿಸಲು ಸಂಚು ರೂಪಿಸಿದೆ” ಎಂದು ಆರೋಪಿಸಿದರು.

ಶುಕ್ರವಾರದಿಂದ AAP ಸ್ವಯಂಸೇವಕರು “ಮಾಯಿ ಭಿ ಕೇಜ್ರಿವಾಲ್” ಅಭಿಯಾನದ ಅಡಿಯಲ್ಲಿ ನಗರದಾದ್ಯಂತ ಎಲ್ಲಾ 2,600 ಮತಗಟ್ಟೆಗಳಲ್ಲಿ ಜನರ ಸಹಿ ಪಡೆಯಲಿದ್ದಾರೆ. ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕೇ ಎಂಬ ಬಗ್ಗೆ ಜನರ ಅಭಿಪ್ರಾಯವನ್ನು ಕೇಳುತ್ತಾರೆ.

ಅರವಿಂದ್ ಕೇಜ್ರಿವಾಲ್ ಅವರು ಈಗಾಗಲೇ ಎಎಪಿ ಶಾಸಕರು ಮತ್ತು ಕೌನ್ಸಿಲರ್‌ಗಳನ್ನು ಭೇಟಿಯಾಗಿ ಈ ವಿಷಯದ ಬಗ್ಗೆ ಅಭಿಪ್ರಾಯ ಕೇಳಿದ್ದಾರೆ. ಅವರು ರಾಜೀನಾಮೆ ನೀಡಬಾರದು ಮತ್ತು ಜೈಲಿನಿಂದ ಸರ್ಕಾರವನ್ನು ನಡೆಸಬಾರದು ಎಂದು ಹೇಳಿರುವುದಾಗಿ ರೈ ಹೇಳಿದರು.

ಆಮ್ ಆದ್ಮಿ ಪಕ್ಷವು ಡಿಸೆಂಬರ್ 21 ರಿಂದ ಡಿಸೆಂಬರ್ 24 ರವರೆಗೆ ನಗರದ ಪ್ರತಿ ವಾರ್ಡ್‌ಗಳಲ್ಲಿ ಜನಸಂವಾದವನ್ನು ನಡೆಸಲಿದೆ. “ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಬಿಜೆಪಿ ಸಂಚು ರೂಪಿಸಿರುವ ಬಗ್ಗೆ ಜನರ ಅಭಿಪ್ರಾಯವನ್ನು ಕೇಳುತ್ತೇವೆ ಎಂದರು.

ಈ ತಿಂಗಳ ಆರಂಭದಲ್ಲಿ, ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು.

ಕೇಜ್ರಿವಾಲ್ ಅವರು, ”ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಆರೋಪಿಸಿ ನೋಟಿಸ್ ಅನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಮಸೂದೆಗಳಿಗೆ ಅಂಕಿತ ಹಾಕದೆ ವಿಳಂಬ: ಕೇರಳ ರಾಜ್ಯಪಾಲರಿಗೆ ಸುಪ್ರೀಂಕೋರ್ಟ್ ತರಾಟೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...