Homeಮುಖಪುಟಮುಜಾಪ್ಪರ್‌ನಗರ ಶಾಲಾ ಪ್ರಕರಣ: ಉತ್ತರಪ್ರದೇಶದ ಆತ್ಮಸಾಕ್ಷಿಗೆ ಆಘಾತ; ಸುಪ್ರೀಂಕೋರ್ಟ್

ಮುಜಾಪ್ಪರ್‌ನಗರ ಶಾಲಾ ಪ್ರಕರಣ: ಉತ್ತರಪ್ರದೇಶದ ಆತ್ಮಸಾಕ್ಷಿಗೆ ಆಘಾತ; ಸುಪ್ರೀಂಕೋರ್ಟ್

- Advertisement -
- Advertisement -

ಮುಜಾಪ್ಪರ್‌ನಗರದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಥಳಿಸುವಂತೆ ಶಾಲಾ ಶಿಕ್ಷಕಿ ಸಹಪಾಠಿ ವಿದ್ಯಾರ್ಥಿಗಳಿಗೆ ಸೂಚಿಸಿದ ಪ್ರಕರಣದ ಕುರಿತು ಅರ್ಜಿ ವಿಚಾರಣೆ ನಡೆಸಿದ  ಸುಪ್ರೀಂಕೋರ್ಟ್ ಆರೋಪಗಳು ನಿಜವಾಗಿದ್ದರೆ, ಅದು ಉತ್ತರಪ್ರದೇಶದ ಆತ್ಮಸಾಕ್ಷಿಗೆ ಆಘಾತ ಉಂಟು ಮಾಡುತ್ತದೆ ಎಂದು ಹೇಳಿದೆ.

ಮುಜಾಫರ್‌ನಗರದಲ್ಲಿನ ಶಾಲಾ ಬಾಲಕನ ಮೇಲಿನ ಕಪಾಳಮೋಕ್ಷ ಪ್ರಕರಣದ ತನಿಖೆಯ ಮೇಲ್ವಿಚಾರಣೆಗೆ ಹಿರಿಯ ಐಪಿಎಸ್ ಅಧಿಕಾರಿಯನ್ನು ನೇಮಿಸುವ ಬಗ್ಗೆಯೂ ಸುಪ್ರೀಂ ಕೋರ್ಟ್ ಗಮನಿಸಿದೆ. ನಿರ್ದಿಷ್ಟ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಶಿಕ್ಷೆ ವಿಧಿಸಲು ಯತ್ನಿಸಿದರೆ ಅದು ಗುಣಮಟ್ಟದ ಶಿಕ್ಷಣವಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸುಪ್ರೀಂ ಕೋರ್ಟ್ ಅ.30ಕ್ಕೆ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದೂಡಿದೆ ಈ ಕುರಿತು ಭಾಗಿಯಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಮಾಡುವಂತೆ ಮತ್ತು ಸಂತ್ರಸ್ತ ಮಗುವಿನ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶಿದೆ.

ಮುಜಾಫರ್‌ನಗರದ ಖುಬ್ಬಾಪುರ ಗ್ರಾಮದ ನೇಹಾ ಪಬ್ಲಿಕ್‌ ಸ್ಕೂಲ್‌ನಲ್ಲಿ ಹೋಮ್‌ ವರ್ಕ್‌ ಮಾಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನಿಗೆ ಸಹಪಾಠಿಗಳಿಂದಲೇ  ತ್ರಿಪ್ತ ತ್ಯಾಗಿ ಎಂಬ ಶಿಕ್ಷಕಿ ಕಪಾಳಮೋಕ್ಷ ಮಾಡಿಸಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.

ಪ್ರಕರಣ ದೇಶದಲ್ಲಿ ಭಾರೀ ಸಂಚಲನವನ್ನು ಮೂಡಿಸಿತ್ತು.  ತ್ರಿಪ್ತ ತ್ಯಾಗಿ ವಿರುದ್ಧ ಉತ್ತರಪ್ರದೇಶದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ(ಎನ್‌ಸಿಪಿಸಿಆರ್) ಈ ಕುರಿತು ಮಧ್ಯ ಪ್ರವೇಶಿಸಿ ತನಿಖೆಗೆ ಕೂಡ ಆಗ್ರಹಿಸಿತ್ತು.

ಇದನ್ನು ಓದಿ: ಉತ್ತರಪ್ರದೇಶ: ಲೋಕಸಭೆ, ವಿಧಾನಸಭೆಗಳಲ್ಲಿ SC, ST, OBCಗಳಿಗಿಂತ ಹೆಚ್ಚು ಪ್ರಾತಿನಿಧ್ಯ ಪಡೆದ ಬ್ರಾಹ್ಮಣ, ಠಾಕೂರ್‌ ಮಹಿಳೆಯರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...