Homeಕರ್ನಾಟಕಬಡವರ ಬೆಂಬಲಕ್ಕೆ ನಿಲ್ಲದ ಬಿಜೆಪಿ ಸರ್ಕಾರವನ್ನು ಗೆಲ್ಲಿಸಬೇಕೇ: ಸಿಎಂ ಸಿದ್ದರಾಮಯ್ಯ

ಬಡವರ ಬೆಂಬಲಕ್ಕೆ ನಿಲ್ಲದ ಬಿಜೆಪಿ ಸರ್ಕಾರವನ್ನು ಗೆಲ್ಲಿಸಬೇಕೇ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ; ಬಡವರ ಬೆಂಬಲಕ್ಕೆ ನಿಲ್ಲದ ಬಿಜೆಪಿ ಸರ್ಕಾರವನ್ನು ಗೆಲ್ಲಿಸಬೇಕೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರನ್ನು ಪ್ರಶ್ನಿಸಿದರು.

ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಯೋಜಿಸಲಾಗಿದ್ದ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ, ವಿವಿಧ ಯೋಜನೆಗಳ ಸವಲತ್ತುಗಳನ್ನು ನೀಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಅನ್ನಭಾಗ್ಯ ಯೋಜನೆಯಡಿ 5 ಕೆಜಿಯ ಜೊತೆಗೆ 5 ಕೆಜಿ ಅಕ್ಕಿ ನೀಡಿ, ರಾಜ್ಯವನ್ನು ಹಸಿವು ಮುಕ್ತ ಮಾಡುವ ಸರ್ಕಾರದ ಉದ್ದೇಶಕ್ಕೆ ಕೇಂದ್ರ ಸರ್ಕಾರ ಸಹಕರಿಸಲಿಲ್ಲ. ಆದ್ದರಿಂದ 5 ಕೆಜಿ ಬದಲಿಗೆ 170 ರೂ.ಗಳನ್ನು ನೀಡುತ್ತಿದ್ದೇವೆ. ಜಿಲ್ಲೆಯಲ್ಲಿ 438705 ಫಲಾನುಭವಿಗಳಿಗೆ 166 ಕೋಟಿ ರೂ.ಗಳ ಅನ್ನಭಾಗ್ಯದ ಆರ್ಥಿಕ ನೆರವು ನೀಡಲಾಗಿದೆ. ಬಡವರ ಬೆಂಬಲಕ್ಕೆ ನಿಲ್ಲದ ಬಿಜೆಪಿ ಸರ್ಕಾರವನ್ನು ಗೆಲ್ಲಿಸಬೇಕೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ನಿರೀಕ್ಷೆಯನ್ನೂ ಮೀರಿ ಆಶೀರ್ವಾದ ಮಾಡಿದ್ದಾರೆ. 136 ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಕರ್ನಾಟಕದ ಜನ ಪ್ರಭುದ್ಧವಾದ ತೀರ್ಮಾನ ಮಾಡಿದ್ದಾರೆ. ಮಂಡ್ಯ ಜನರೂ ಕೂಡ ಸುಳ್ಳು ಭರವಸೆ ನೀಡಿದ್ದರೂ, ದಾರಿ ತಪ್ಪಿಸುವ ಕೆಲಸ ಮಾಡಿದ್ದರೂ ಸರಿಯಾದ ತೀರ್ಮಾನವನ್ನೇ ಮಾಡಿದ್ದಾರೆ ಎಂದರು.

ಚುನಾವಣಾ ಪೂರ್ವದಲ್ಲಿ ನೀಡಿದ್ದ ಅನೇಕ ಭರವಸೆಗಳ ಪೈಕಿ ಪ್ರಮುಖವಾಗಿ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೆ ತಂದೆವು. ಪ್ರಮಾಣವಚನ ಸ್ವೀಕಾರ ಮಾಡಿದ ದಿನವೇ 5 ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದೆವು. ರಾಜ್ಯದ 3.50 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾದ ಶಕ್ತಿ ಯೋಜನೆಗೆ ಚಾಲನೆ ನೀಡಿದೆವು. 50 ರಿಂದ 60 ಲಕ್ಷ ಮಹಿಳೆಯರು ಈ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ ಎಂದರು.

ಕೃಷಿ ಇಲಾಖೆಗೆ 600 ಕೋಟಿ ರೂ.ಗಳನ್ನು ಬೆಳೆ ವಿಮೆಗೆ ನೀಡಲಾಗಿದ್ದು, ಇನ್ನೂ 800 ಕೋಟಿ ರೂ.ಗಳನ್ನು ನೀಡಲಾಗುವುದು. 33.25 ಲಕ್ಷ ರೈತರಿಗೆ 631 ಕೋಟಿ ರೂ.ಗಳನ್ನು ತಲಾ 2000 ರೂ.ಗಳ ಬೆಳೆ ಪರಿಹಾರಕ್ಕೆ ನೀಡಿದ್ದೇವೆ ಎಂದು ವಿವರಿಸಿದರು.

ಮಂಡ್ಯ ಜಿಲ್ಲೆ ಸಂಪೂರ್ಣ ಅಭಿವೃದ್ಧಿ:

ಬಿಜೆಪಿಯವರ ಮೇಲೆ ಜೆಡಿಎಸ್ ನಾಯಕರಿಗೆ ಬಹಳ ಪ್ರೀತಿ ಉಂಟಾಗಿದೆ; ನಮ್ಮ ಗ್ಯಾರಂಟಿಗಳ ಬಗ್ಗೆ ಟೀಕಿಸುತ್ತಾರೆ. ಜನರಿಗೆ ಸತ್ಯ ತಿಳಿಸದೆ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಾವು ನಿಮ್ಮ ಪರ ಇದ್ದೇವೆ. ಮಂಡ್ಯ ಜಿಲ್ಲೆಯನ್ನು ಸಂಪೂರ್ಣ ಅಭಿವೃದ್ಧಿ ಮಾಡಲಾಗುವುದು. 500 ಕೋಟಿ ರೂ.ಗಳನ್ನು ಜಿಲ್ಲೆಗೆ ನೀಡಲಾಗುತ್ತಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ವ್ಯವಸಾಯದ ಮೇಲೆ ಅವಲಂಬಿತ ಜನ ಹೆಚ್ಚಿದ್ದು, ಅಭಿವೃದ್ಧಿ ಮಾಡಲು ಪಣ ತೊಟ್ಟಿದ್ದೇವೆ. ಯಾರೂ ಏನೇ ಹೇಳಿದರೂ ಕೆಲಸ ಮಾಡಿದವರನ್ನು ಗೆಲ್ಲಿಸಬೇಕು ಎಂದರು.

ಮಂಡ್ಯದಲ್ಲಿ 4.57 ಕೋಟಿ ಮಹಿಳೆಯರು ಹಾಗೂ ಇಡೀ ರಾಜ್ಯದಲ್ಲಿ 170 ಕೋಟಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ನಂತರ ಜನರನ್ನು ಸಂಪೂರ್ಣವಾಗಿ ಹಿಂದಿನ ಸರ್ಕಾರ ಮರೆತಿತ್ತು. ಆದರೆ ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರು ರೈತಪರ , ಬಡವರಪರ ಎಂದು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಅವರು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿಲ್ಲ. ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ, ಬಿಜೆಪಿಯ ಯಡಿಯೂರಪ್ಪನವರು 17 ಶಾಸಕರನ್ನು ಕೊಂಡು ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರು. ಮಾಜಿ ಪ್ರಧಾನಿ ದೇವೇಗೌಡರು ಕೋಮುವಾದಿಗಳೊಂದಿಗೆ ಸೇರುವುದಿಲ್ಲ ಎಂದಿದ್ದವರು, ಈಗ ಅವರನ್ನೇ ಬೆಂಬಲಿಸುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನ ಅಪವಿತ್ರ ಮೈತ್ರಿಯನ್ನು ಸೋಲಿಸಿ, ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಬೇಕೆಂದು ಜನರನ್ನು ಕೋರಿದರು.

4.60 ಕೋಟಿ ಜನ ಗ್ಯಾರಂಟಿ ಫಲಾನುಭವಿಗಳು

ಮಂಡ್ಯ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಇಲ್ಲಿನ ಜನರಿಗೆ 464303 ಜನ ನೋಂದಾಯಿಸಿಕೊಂಡಿದ್ದು, 104 ಕೋಟಿ ರೂ. ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 449197 ಮಹಿಳೆಯರು ನೊಂದಾಯಿಸಿಕೊಂಡಿದ್ದು, 512 ಕೋಟಿ ರೂ. ಗಳನ್ನು ನೀಡಲಾಗಿದೆ. ಯುವನಿಧಿ 3148 ಅರ್ಜಿಗಳು ನೋಂದಾವಣೆಯಾಗಿದ್ದು, 22 ಲಕ್ಷ ರೂ.ಗಳನ್ನು ವರ್ಗಾಯಿಸಲಾಗಿದೆ. ಬಡವರು, ಮಹಿಳೆಯರು, ದಲಿತರು, ರೈತರು ಸೇರಿದಂತೆ ಎಲ್ಲ ಜಾತಿಧರ್ಮದವರಿಗೂ ಆರ್ಥಿಕವಾಗಿ ಬಲ ತುಂಬಲಾಗುತ್ತಿದೆ. 4.60 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ತಲುಪುತ್ತಿದೆ. ಈವರ್ಷ 36 ಸಾವಿರ ಕೋಟಿ, ನಂತರ 52009 ಕೋಟಿ ರೂ.ಗಳನ್ನು ಬಜೆಟನಲ್ಲಿ ನಿಗದಿಪಡಿಸಲಾಗಿದೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಶಾಸಕರಾದ ರವಿಕುಮಾರ್ , ರಮೇಶ್, ನರೇಂದ್ರಸ್ವಾಮಿ , ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ ಉದಯ, ವಿಧಾನಪರಿಷತ್ ಸದಸ್ಯರಾದ ಮಧು ಮಾದೇಗೌಡ ದಿನೇಶ್ ಗೂಳಿಗೌಡ, ಮರೀತಿಬ್ಬೇಗೌಡ, ರವಿಶಂಕರ್, ಲೋಕಸಭಾ ಅಭ್ಯರ್ಥಿ ವೆಂಕಟರಮಣ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ; ‘ಮಮತಾ ಬ್ಯಾನರ್ಜಿ ಪ್ರಧಾನಿ ಕಾರ್ಯಾಲಯಕ್ಕೆ ಸಂದೇಶ ಕಳುಹಿಸಿದ್ದಾರೆ..’; ಟಿಎಂಸಿ ಪಟ್ಟಿ ಬಿಡುಗಡೆಗೆ ಅಧೀರ್ ಲೇವಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...