Homeಮುಖಪುಟಚುನಾವಣಾ ಆಯೋಗದಿಂದ ಶೋಕಾಸ್ ನೋಟಿಸ್‌; 'ನಿಮ್ಮದು ಬಿಜೆಪಿಯ ಅಧೀನ ಸಂಸ್ಥೆಯೇ..’ ಎಂದು ಕಿಡಿಕಾರಿದ ಅತಿಶಿ

ಚುನಾವಣಾ ಆಯೋಗದಿಂದ ಶೋಕಾಸ್ ನೋಟಿಸ್‌; ‘ನಿಮ್ಮದು ಬಿಜೆಪಿಯ ಅಧೀನ ಸಂಸ್ಥೆಯೇ..’ ಎಂದು ಕಿಡಿಕಾರಿದ ಅತಿಶಿ

- Advertisement -
- Advertisement -

ದೆಹಲಿ ಸಚಿವೆ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರಿಗೆ ಚುನಾವಣಾ ಆಯೋಗವು ಶುಕ್ರವಾರ ಶೋಕಾಸ್ ನೋಟಿಸ್ ನೀಡಿದ್ದಕ್ಕೆ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. “ಚುನಾವಣಾ ಸಂಸ್ಥೆಯು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧೀನ ಸಂಸ್ಥೆಯೇ “ಎಂದು ಪ್ರಶ್ನಿಸಿರುವ ಅವರು, “ಚುನಾವಣಾ ಆಯೋಗದ ಸೂಚನೆಯನ್ನು ನಾನು ಮೇಲ್‌ನಲ್ಲಿ ಸ್ವೀಕರಿಸುವ ಮೊದಲೇ ಬಿಜೆಪಿಯು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ” ಎಂದು ಅವರು ಆರೋಪ ಮಾಡಿದ್ದಾರರೆ.

“ಏಪ್ರಿಲ್ 4 ರಂದು ನಡೆದ ಸುದ್ದಿಗೋಷ್ಠಿ ವಿವಾರವಾಗಿ ಏಪ್ರಿಲ್ 5 ರಂದು ಬೆಳಿಗ್ಗೆ 11:15 ಕ್ಕೆ, ಸುದ್ದಿ ವಾಹಿನಿಗಳು ಅತಿಶಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ಸುದ್ದಿ ಮಾಡಿವೆ. ಆದರೆ, ಸುದ್ದಿಯ ಅರ್ಧ ಗಂಟೆಯ ನಂತರ ನನಗೆ ನೋಟಿಸ್ ಸಿಕ್ಕಿತು. ಇದರರ್ಥ ಬಿಜೆಪಿಯು ಮೊದಲು ಚುನಾವಣಾ ಆಯೋಗದ ಸೂಚನೆಯನ್ನು ಮಾಧ್ಯಮಗಳಲ್ಲಿ ಹಾಕುತ್ತದೆ. ಅದರ ನಂತರ, ನನಗೆ ನೋಟೀಸ್ ಬರುತ್ತದೆ… ಚುನಾವಣಾ ಆಯೋಗವು ಬಿಜೆಪಿಯ ಅಂಗಸಂಸ್ಥೆಯಾಗಿದೆಯೇ ಎಂಬುದು ನನ್ನ ಪ್ರಶ್ನೆ” ಎಂದು ಇಂದಿನ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿ, ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ನಂತರ ಚುನಾವಣಾ ಸಂಸ್ಥೆ ಕೇಂದ್ರ ಏಜೆನ್ಸಿಗಳಿಗೆ ಏಕೆ ನೋಟಿಸ್ ನೀಡಲಿಲ್ಲ ಎಂದು ಅತಿಶಿ ಪ್ರಶ್ನಿಸಿದ್ದಾರೆ.

ಪಕ್ಷಾತೀತವಾಗಿ ನಡೆದುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ತಲೆಬಾಗಬೇಡಿ ಎಂದು ಅವರು ಹೇಳಿದರು.

ವ್ಯಕ್ತಿಯೊಬ್ಬರ ಮೂಲಕ ಬಿಜೆಪಿಯು ತನ್ನನ್ನು ತಮ್ಮ ಪಕ್ಷಕ್ಕೆ ಸೇರಲು ಸಂಪರ್ಕಿಸಿದೆ ಎಂಬ ಆಕೆಯ ಹೇಳಿಕೆಗಳನ್ನು ಅನುಸರಿಸಿ ಚುನಾವಣಾ ಆಯೋಗವು ಅತಿಶಿಗೆ ಶೋಕಾಸ್ ನೋಟಿಸ್ ನೀಡಿತು. ಅವರು ಇತರ ಮೂವರು ಎಎಪಿ ನಾಯಕರಾದ ಸೌರಭ್ ಭಾರದ್ವಾಜ್, ರಾಘವ್ ಚಡ್ಡಾ ಮತ್ತು ದುರ್ಗೇಶ್ ಪಾಠಕ್ ಅವರೊಂದಿಗೆ ಬಿಜೆಪಿಗೆ ಸೇರದಿದ್ದಲ್ಲಿ ಇಡಿಯಿಂದ ಬಂಧಿಸಲ್ಪಡುವ ಮುಂದಿನ ಸಾಲಿನಲ್ಲಿ ಇರುವುದಾಗಿ ಅವರು ಹೇಳಿದ್ದರು.

ಬಿಜೆಪಿ ದೂರು ಆಧರಿಸಿ, ಚುನಾವಣಾ ಆಯೋಗವು ನೋಟಿಸ್‌ ನೀಡಿದದ್ದು, “ನೀವು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ ಮಂತ್ರಿ ಮತ್ತು ರಾಷ್ಟ್ರೀಯ ಪಕ್ಷದ ನಾಯಕಿ. ಮತದಾರರು ತಮ್ಮ ನಾಯಕರು ಸಾರ್ವಜನಿಕ ವೇದಿಕೆಯಿಂದ ಏನು ಹೇಳಿದರೂ ನಂಬುತ್ತಾರೆ ಮತ್ತು ಆ ಅರ್ಥದಲ್ಲಿ, ಅವರು ನೀಡಿದ ಹೇಳಿಕೆಗಳು ಪ್ರಚಾರದ ಭಾಷಣದ ಮೇಲೆ ಪರಿಣಾಮ ಬೀರುತ್ತವೆ’ ಎಂದು ಹೇಳಿದೆ.

ಇದನ್ನೂ ಓದಿ; ಎಸ್‌ಸಿ ಪಟ್ಟಿಯಿಂದ ಲಂಬಾಣಿ, ಬೋವಿ, ಕೊರಮ, ಕೊರಚರನ್ನು ಕೈಬಿಡುವಂತೆ ಮನವಿ: ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...