Homeಮುಖಪುಟಟಿಕ್ರಿ ಗಡಿಯಲ್ಲಿ ಗೌರಿ ಮೀಡಿಯಾ ತಂಡಕ್ಕೆ ಪಿಸ್ತೂಲ್‌ ತೋರಿಸಿ ಹಲ್ಲೆ ನಡೆಸುವ ಬೆದರಿಕೆ!

ಟಿಕ್ರಿ ಗಡಿಯಲ್ಲಿ ಗೌರಿ ಮೀಡಿಯಾ ತಂಡಕ್ಕೆ ಪಿಸ್ತೂಲ್‌ ತೋರಿಸಿ ಹಲ್ಲೆ ನಡೆಸುವ ಬೆದರಿಕೆ!

- Advertisement -
- Advertisement -

ಗಣರಾಜ್ಯೋತ್ಸವದ ದಿನ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಚಿತ್ರ ತಂಡವೊಂದನ್ನು ಸಂದರ್ಶನ ಮಾಡಲು ಹೋಗಿದ್ದ ಗೌರಿ ಮೀಡಿಯಾ ತಂಡದ ಸದಸ್ಯರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆಸುವ ಬೆದರಿಕೆ ಒಡ್ಡಲಾಗಿದೆ.

ರೈತ ಹೋರಾಟದ ಸಾಕ್ಷ್ಯಚಿತ್ರ ನಿರ್ಮಿಸಲೆಂದು ದೆಹಲಿಯಲ್ಲಿ ಚಿತ್ರೀಕರಣ ನಡೆಸುತ್ತಿದ್ದ ಪೆಡೆಸ್ಟ್ರಿಯನ್‌ ಪಿಕ್ಚರ್ಸ್‌ ತಂಡ ಗಣರಾಜ್ಯೋತ್ಸವದ ದಿನ ಕೆಂಪು ಕೋಟೆಯ ಬಳಿ ಹಲ್ಲೆಗೆ ಒಳಗಾಗಿತ್ತು. ಇವರನ್ನು ಸಂದರ್ಶನ ಮಾಡಲು ತೆರಳಿದ್ದ ಗೌರಿ ಮೀಡಿಯಾ ತಂಡದ ಸ್ವಾತಿ, ಮಮತ, ಕಾವ್ಯ ಮತ್ತು ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಅವರಿಗೆ ಬೆದರಿಕೆ ಒಡ್ಡಲಾಗಿದೆ.

ಕಳೆದ 25 ದಿನಗಳಿಂದ ದೆಹಲಿಯಲ್ಲಿ ಚಿತ್ರೀಕರಣ ನಡೆಸುತ್ತಿದ್ದ ಪೆಡಿಸ್ಟ್ರಿಯನ್‌ ಪಿಕ್ಚರ್ಸ್‌ ತಂಡ ಗಾಯಗೊಂಡ ಬಳಿಕ, ಹರ್ಯಾಣ ಗಡಿಯಲ್ಲಿರುವ ನಯಾ ಗಾಂವ್‌ನಲ್ಲಿ ತಂಗಿದ್ದರು. ಗೌರಿ ಮೀಡಿಯಾ ತಂಡ ಅವರ ಸಂದರ್ಶನ ಮುಗಿಸಿ ಹೊರಡುವಾಗ ಅಲ್ಲಿಗೆ ಧಾವಿಸಿದ ಗೂಂಡಾಗಳ ಗುಂಪು ಪಿಸ್ತೂಲು ತೋರಿಸಿ ತಂಡದ ಸದಸ್ಯರು, ಕುಟುಂಬದ ಸದಸ್ಯರಿಗೆ ಬೆದರಿಕೆ ಒಡ್ಡಿದ್ದಾರೆ.

ತಂಡದಲ್ಲಿದ್ದ ಗೌರಿಲಂಕೇಶ್‌ನ್ಯೂಸ್‌.ಕಾಂನ ಸ್ವಾತಿ ಶುಕ್ಲಾ, ‘ಕೋಣೆಯೊಳಗೆ ನುಗ್ಗಿದ 5-6 ಗೂಂಡಾಗಳು ಬೆದರಿಸಿದೆರು. ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ನೇಣು ಹಾಕಿಕೊಂಡು ಸಾಯಿರಿ ಎಂದರು. ಜೊತೆಗೆ ಇದ್ದ ಭಾರತ್ ಕಿಸಾನ್‌ ಯೂನಿಯನ್‌ನ ಮಾಧ್ಯಮದ ಸದಸ್ಯರು ಅವರೊಂದಿಗೆ ಮಾತನಾಡಲು ಯತ್ನಿಸಿದರು. ಆದರೆ, ಬೆದರಿಸಲು ಬಂದವರು ಮಾತಿಗೆ ಅವಕಾಶ ನೀಡಲಿಲ್ಲ ಎಂದು ಘಟನೆ ವಿವರಿಸಿದರು.

ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಸಂಯುಕ್ತ ಕಿಸಾನ್‌ ಮೋರ್ಚಾ ಸದಸ್ಯರು ಸ್ಥಳಕ್ಕೆ ಆಗಮಿಸಿ ಮಾಧ್ಯಮ ತಂಡಕ್ಕೆ ರಕ್ಷಣೆ ಒದಗಿಸಿದರು.

ಗಣರಾಜ್ಯೊತ್ಸವ ದಿನದಂದು ಬಿಜೆಪಿ-ಸಂಘ ಪರಿವಾರ ಪ್ರೇರಿತ ಪಿತೂರಿಯಿಂದಾಗಿ ಹಿಂಸಾಚಾರ ನಡೆದಿದ್ದು, ಮಾಧ್ಯಮಗಳ ಮೂಲಕ ರೈತ ಹೋರಾಟಕ್ಕೆ ಮಸಿ ಬಳಿಸುವ, ದೇಶದ ಜನರಲ್ಲಿ ತಪ್ಪು ಮಾಹಿತಿ ಹರಡುವ ಪ್ರಯತ್ನ ಮಾಡುತ್ತಲೇ ಇದೆ. ಪರ್ಯಾಯ ಮಾಧ್ಯಮಗಳು, ಮುಖ್ಯವಾಹಿನಿ ಮಾಧ್ಯಮಗಳ ಪಕ್ಷಪಾತ ಧೋರಣೆಯನ್ನು ಅನಾವರಣ ಮಾಡುತ್ತಿರುವ ಪರ್ಯಾಯ ಮಾಧ್ಯಮಗಳನ್ನು ಬೆದರಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂಬ ಅಭಿಪ್ರಾಯ ರೈತ ನಾಯಕರು ವ್ಯಕ್ತಪಡಿಸಿದರು.


ಇದನ್ನೂ ಓದಿ: ಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...