Homeಮುಖಪುಟಕೊಲಿಜಿಯಂ ಸೂಚಿಸಿದ ನ್ಯಾಯಮೂರ್ತಿಗಳನ್ನು ಏಕೆ ನೇಮಕ ಮಾಡಿಲ್ಲ? ವಿವರಣೆ ಕೊಡಿ : ಕೇಂದ್ರಕ್ಕೆ ಸುಪ್ರೀಂ ತಾಕೀತು

ಕೊಲಿಜಿಯಂ ಸೂಚಿಸಿದ ನ್ಯಾಯಮೂರ್ತಿಗಳನ್ನು ಏಕೆ ನೇಮಕ ಮಾಡಿಲ್ಲ? ವಿವರಣೆ ಕೊಡಿ : ಕೇಂದ್ರಕ್ಕೆ ಸುಪ್ರೀಂ ತಾಕೀತು

- Advertisement -
- Advertisement -

ನ್ಯಾಯಮೂರ್ತಿಗಳ ಹುದ್ದೆಗೆ ಕೊಲಿಜಿಯಂ ಪುನರುಚ್ಚರಿಸಿದ್ದ ಹೆಸರುಗಳ ಪಟ್ಟಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಇಂದು (ಸೆ.20) ತಾಕೀತು ಮಾಡಿರುವ ಸುಪ್ರೀಂ ಕೋರ್ಟ್‌, ಆ ಹೆಸರುಗಳನ್ನು ಇನ್ನೂ ಏಕೆ ಅಂಗೀಕರಿಸಿಲ್ಲ ಎಂಬುವುದನ್ನು ವಿವರಿಸುವಂತೆಯೂ ಸೂಚಿಸಿದೆ ಎಂದು ಬಾರ್ &ಬೆಂಚ್ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ  ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಹಾಗೂಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಎರಡು ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡಿದೆ.

ಮೊದಲನೆಯದು ನ್ಯಾ. ಎಂ ಎಸ್ ರಾಮಚಂದ್ರ ರಾವ್ ಅವರನ್ನು ಜಾರ್ಖಂಡ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಕೊಲಿಜಿಯಂ ಮಾಡಿದ್ದ ಶಿಫಾರಸನ್ನು ಅಂಗೀಕರಿಸದ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೋರಿ ಜಾರ್ಖಂಡ್ ಸರ್ಕಾರ ಸಲ್ಲಿಸಿದ್ದಾಗಿದೆ.

ಇನ್ನೊಂದು ಅರ್ಜಿಯನ್ನು  ಕೊಲಿಜಿಯಂ ನಿರ್ಣಯಗಳನ್ನು ಪ್ರಕ್ರಿಯೆಗೊಳಿಸಲು ಮತ್ತು ಅಂಗೀಕರಿಸಲು ನಿಗದಿತ ಗಡುವು ವಿಧಿಸುವಂತೆ ಕೋರಿ ವಕೀಲ ಹರ್ಷ್ ವಿಭೋರ್ ಸಿಂಗಲ್ ಅವರು ಸಲ್ಲಿಸಿದ್ದಾರೆ.

ಇಂದು ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾದ ವಕೀಲ ಸಿಂಗಲ್‌ ಅವರು “ಶಿಫಾರಸು ಮುಂದೂಡುವುದರಿಂದ ಕೇಂದ್ರಕ್ಕೆ ಏನು ಸಿಗುತ್ತದೆ ಎಂಬುವುದು ಅರ್ಥವಾಗುತ್ತಿಲ್ಲ ಎಂದರು.

ವಾದ ಮಂಡಿಸಿದ ಇನ್ನೋರ್ವ ವಕೀಲ ಪ್ರಶಾಂತ್‌ ಭೂಷಣ್‌ ಅವರು “ಸೌರಭ್ ಕಿರ್ಪಾಲ್ ಮುಂತಾದವರ ಹೆಸರುಗಳನ್ನು ಅಂಗೀಕರಿಸದ ಪ್ರಕರಣಗಳಿವೆ. ಕೊಲಿಜಿಯಂ ಶಿಫಾರಸುಗಳ ಬಗ್ಗೆ ವರ್ಷಗಳ ಕಾಲ ಕೇಂದ್ರ ಸರ್ಕಾರ ನಿಷ್ಕ್ರಿಯವಾಗಿರುವ ಅನೇಕ ನಿದರ್ಶನಗಳಿವೆ” ಎಂದು ಹೇಳಿದರು.

ಜಾರ್ಖಂಡ್ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್  ಅವರು, ನ್ಯಾ. ಬಿ ಆರ್‌ ಸಾರಂಗಿ ಅವರ ಹೆಸರನ್ನು ಜಾರ್ಖಂಡ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಡಿಸೆಂಬರ್ 2023ರಲ್ಲಿ ಶಿಫಾರಸು ಮಾಡಲಾಗಿತ್ತು. ಆದರೂ, ಅವರು 6 ತಿಂಗಳವರೆಗೆ ಹುದ್ದೆ ಅಲಂಕರಿಸಲು ಸಾಧ್ಯವಾಗಲಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಟಾರ್ನಿ ಜನರಲ್ (ಎಜಿ) ಆರ್‌ ವೆಂಕಟರಮಣಿ “ಇಂತಹ ಹೆಸರುಗಳು ಬಾಕಿ ಉಳಿದಿರುವುದಕ್ಕೆ ಹಲವಾರು ಕಾರಣಗಳಿವೆ ಮತ್ತು ನಮಗೆ ಯಾವುದೇ ಹಿಂಜರಿಕೆಯಿಲ್ಲ. ನ್ಯಾಯಾಲಯಕ್ಕೆ ಬಂದು (ಅರ್ಜಿದಾರರು) ಇದೆಲ್ಲವನ್ನೂ ಹೇಳುವುದು ತುಂಬಾ ಸುಲಭ” ಎಂದರು.

ಆಗ ಅಟಾರ್ನಿ ಜನರಲ್ (ಎಜಿ) ಆರ್‌ ವೆಂಕಟರಮಣಿ ಅವರನ್ನು ಉದ್ದೇಶಿಸಿ ಸಿಜೆಐ ಚಂದ್ರಚೂಡ್‌ ಅವರು, ನ್ಯಾಯಾಲಯ ಪುನರುಚ್ಚರಿಸಿದ ನ್ಯಾಯಮೂರ್ತಿಗಳ ಪಟ್ಟಿ ತಯಾರಿಸಿ ಅವರ ನೇಮಕಾತಿ ಏಕೆ ಬಾಕಿ ಉಳಿದಿದೆ ಎಂಬುದನ್ನು ತಿಳಿಸುವಂತೆ ಸೂಚಿಸಿದರು.

ಇದನ್ನೂ ಓದಿ : ನ್ಯಾಯಾಧೀಶರ ಹೇಳಿಕೆ ವೈರಲ್ : ಅನುಮತಿ ಇಲ್ಲದೆ ಕಲಾಪದ ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...