Homeಮುಖಪುಟಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಸಿಂಧಿಯಾ ಕಾರಿಗೆ ತಡೆ : ಪ್ರಕರಣ ದಾಖಲು

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಸಿಂಧಿಯಾ ಕಾರಿಗೆ ತಡೆ : ಪ್ರಕರಣ ದಾಖಲು

- Advertisement -
- Advertisement -

ನಾಟಕೀಯ ಬೆಳವಣಿಗೆಗಳಲ್ಲಿ ಇತ್ತೀಚೆಗೆ ತಾನೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಲ್ಲದೇ ಅವರ ಬೆಂಗಾವಲು ತಡೆದ ಘಟನೆ ದಾಖಲಾಗಿದೆ.

ಅವರು ನಿನ್ನೆ ಭೋಪಾಲ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಕಮಲಾ ಪಾರ್ಕ್ ಪ್ರದೇಶದಲ್ಲಿ ಅವರ ಬೆಂಗಾವಲು ತಡೆಯಲು ಯತ್ನಿಸಲಾಗಿದ್ದು, ಧಿಕ್ಕಾರದ ಘೋಷಣೆಗಳನ್ನು ಕೂಗಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕನಿಷ್ಠ 30 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ನಡುವೆ ತಮ್ಮ ಪಕ್ಷದ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕಪ್ಪು ಧ್ವಜ ತೋರಿಸಿದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಒತ್ತಾಯಿಸಿದ್ದಾರೆ.

“ರಾಜ್ಯದಲ್ಲಿ ಯಾವ ರೀತಿಯ ಪರಿಸ್ಥಿತಿ ಇದೆ ಎಂದು ನೀವು ಸರಳವಾಗಿ ಊಹಿಸಬಹುದು. ಬಹುಮತವನ್ನು ಕಳೆದುಕೊಂಡಿರುವ ಸರ್ಕಾರದ ಎಂಜಿನಿಯರಿಂಗ್ ದಾಳಿ ಇದಾಗಿದೆ. ನಾನು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ ಮತ್ತು ಸಿಂಧಿಯಾ ಮೇಲಿನ ಈ ದಾಳಿಗೆ ಕಾರಣರಾದವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮತ್ತು ಆಡಳಿತಕ್ಕೆ ಮನವಿ ಮಾಡುತ್ತೇನೆ” ಎಂದು ಚೌಹಾಣ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದ ಅವರು “ಮಾರಣಾಂತಿಕ ದಾಳಿಯಲ್ಲಿ” ಸಿಂಧಿಯಾ ಅವರ ವಾಹನವನ್ನು ನಿಲ್ಲಿಸಲಾಗಿದೆ ಮತ್ತು ಕಲ್ಲುಗಳನ್ನು ಎಸೆಯಲಾಗಿದೆ ಎಂದು ಚೌಹಾನ್ ದೂರಿದ್ದಾರೆ.

ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿ ಪಕ್ಷದ ಭೋಪಾಲ್ ಜಿಲ್ಲಾ ಘಟಕದ ಅಧ್ಯಕ್ಷ ವಿಕಾಸ್ ವಿರಾನಿ ನೇತೃತ್ವದ ಬಿಜೆಪಿ ಕಾರ್ಯಕರ್ತರು ಶೈಮಾ ಹಿಲ್ಸ್ ಪೊಲೀಸ್ ಠಾಣೆ ಹೊರಗೆ ಪ್ರತಿಭಟನೆ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...