Homeಮುಖಪುಟ2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಹರಸಾಹಸ ಪಡುತ್ತಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರವರು 2017ರಲ್ಲಿ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆಯ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆಯುತ್ತಿದ್ದು, ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ. ಈ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ರಸ್ತೆ ಕಿತ್ತು ಬಂದಿಲ್ಲ ಎಂದು ವಾದ ಮಾಡಿದ್ದ ಪ್ರತಾಪ್ ಸಿಂಹರವರು, “ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದರು. ಅದರೊಟ್ಟಿಗೆ ರಸ್ತೆ ಕಿತ್ತುಬಂದಿರುವುದರ ಕುರಿತ ಪ್ರಜಾವಾಣಿ ಪತ್ರಿಕೆ ವರದಿಯ ಫೋಟೊ ಮತ್ತು ಬೆಂಗಳೂರು ಮೈಸೂರು ಹೆದ್ದಾರಿಯ Expansion joint ಎಂದು ಮತ್ತೊಂದು ಫೋಟೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಆ ಮೂಲಕ ರಸ್ತೆ ಕಿತ್ತು ಬಂದಿರುವ ಆರೋಪವನ್ನು ನಿರಾಕರಿಸಿದ್ದರು.

ಆದರೆ ಸಂಸದ ಪ್ರತಾಪ್ ಸಿಂಹರವರು ಬೇರೆ ಫೋಟೊ ತೋರಿಸಿ, ರಸ್ತೆ ಸರಿಯಾಗಿತ್ತು ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಹಲವು ಪ್ರಜ್ಞಾವಂತರು ಮತ್ತು ಕಾಂಗ್ರೆಸ್ ಪಕ್ಷ ಆರೋಪಿಸಿತ್ತು. ಈ ಕುರಿತು ಒಂದಷ್ಟು ಸಂಶೋಧನೆ ನಡೆಸಿದಾಗ ಪ್ರತಾಪ್ ಸಿಂಹರವರು ಹಂಚಿಕೊಂಡಿರುವ ಫೋಟೊ ಅಕ್ಟೋಬರ್ 05, 2017ರಲ್ಲಿಯೇ C for Civil ಎಂಬ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡಿರುವುದು ಕಂಡುಬಂದಿದೆ. ಅದರ ಸ್ಕ್ರೀನ್ ಶಾಟ್ ಅನ್ನು ಈ ಕೆಳಗೆ ನೋಡಬಹುದು.

 

ಪ್ರತಾಪ್ ಸಿಂಹರವರು ಹಂಚಿಕೊಂಡಿರುವ ಹಳೆಯ ಫೋಟೊದಲ್ಲಿನ ರಸ್ತೆ ಬದಿಯ ಡಿವೈಡರ್‌ಗೆ ಹಳದಿ – ಕಪ್ಪು ಬಣ್ಣ ಬಳಿಯಲಾಗಿದೆ. ಆದರೆ ಸದ್ಯ ಕಿತ್ತು ಹೋಗಿರುವ ಬೆಂಗಳೂರು ಮೈಸೂರು ರಸ್ತೆ ಬದಿಯ ಡಿವೈಡರ್‌ಗೆ ಬಿಳಿ ಮತ್ತು ಕಪ್ಪು ಬಣ್ಣ ಬಳಿಯಲಾಗಿದೆ. ಅಂದರೆ ಸಂಸದರು ತಮ್ಮ ಹುಳುಕು ಮುಚ್ಚಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ ಹಲವು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಪ್ರತಾಪೂ ಏನು ಮಾಡಿದಾನೆ …. ಗೂಗಲ್ ಗೆ ಹೋಗಿ ಜಾಯಿಂಟ್ ಅಂತ ಏನೋ ಸರ್ಚ ಮಾಡಿದಾನೆ… ಈ ಪೋಟೋ ಸಿಕ್ಕಿದೆ…. ಈ ಪೋಟೋ ಎತ್ತಿಕೊಂಡು ಮೈಸೂರು ಬೆಂಗಳೂರು ರೋಡ್ ರಿಪೇರಿ ಇಸ್ಟೆ ಅಂತ ಬಳಾಂಗ್ ಶುರು ಮಾಡಿದ್ದಾನೆ ಪ್ರೆಂಡ್ಸ… ಎಂದು ಸಾಮಾಜಿಕ ಕಾರ್ಯಕರ್ತರಾದ ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಪ್ರತಾಪ್ ಸಿಂಹಣ್ಣ ಬಳಸಿರೋ ಫೋಟೋ ಸುಮಾರು ಐದು ವರ್ಷಗಳ ಹಿಂದಿನದ್ದು, C for Civil ಅನ್ನೋ ಒಂದು ವೆಬ್ಸೈಟ್ನಲ್ಲಿ ಬಂದ ಫೋಟೋವನ್ನ ಕದ್ದು ರಸ್ತೆ ಸರಿಮಾಡಿಸಲಾಗುತ್ತಿದೆ ಎಂದು ಪುಂಗುತ್ತಿದ್ದಾನೆ.
ನ್ಯೂಸ್ ಲಿಂಕ್ ಸಹ ಕಾಮೆಂಟ್ ಬಾಕ್ಸಿನಲ್ಲಿದೆ. ಡೇಟ್ ಸಮೇತ ನೋಡಿಕೊಂಡು ಬರಬ‌ಹುದು ಎಂದು ಜ್ಞಾನಿ ತಾವರೆಕೆರೆಯವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.
ಇನ್ನು ಪ್ರತಾಪ್ ಸಿಂಹರವರು ಬೆಳಿಗ್ಗೆ 10.13 ಗಂಟೆ ಸಮಯದಲ್ಲಿ ಮಾಡಿದ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಧ್ಯಾಹ್ನ 1.35 ಕ್ಕೆ ರಿಪ್ಲೈ ಮಾಡಿರುವ ಅವರು, ಅದು ರೆಪ್ರೆಸೆಂಟ್ ಪಿಕ್ ಆಗಿದ್ದು, Expansion joint ಕೆಲಸ ಹೇಗೆ ನಡೆಯುತ್ತೆ ಅಂತ ತೋರಿಸಲು ಆ ಚಿತ್ರ ಬಳಸಿದ್ದೇವೆ ಎಂದು ನುಣುಚಿಕೊಳ್ಳಲು ಯತ್ನಿಸಿದ್ದಾರೆ.
https://twitter.com/mepratap/status/1635915157518909441?t=zIFxqmnaxCH4KddexvMtEg&s=19

ಎಷ್ಟು ಸುಲಭವಾಗಿ ಸಂಸದರು ಸುಳ್ಳು ಹೇಳ್ತಿದ್ದಾರೆ.
ಮೊದಲ ಫೋಟೋದಲ್ಲಿ ರಸ್ತೆಯ ಬದಿಯಲ್ಲಿ ಹಳದಿ, ಕಪ್ಪು ಬಣ್ಣವೇ ಇಲ್ಲ.
ಎರಡನೆಯ ಫೋಟೋದಲ್ಲಿ ಹಳದಿ, ಕಪ್ಪು ಬಣ್ಣ ಇದೆ.
ಎಷ್ಟು ಚನ್ನಾಗಿ ಒಂದಕ್ಕೊಂದು ಸಂಬಂಧವೇ ಇಲ್ಲದ ಬೇರೆ ಬೇರೆ ಫೋಟೋಗಳನ್ನ ತೋರಿಸಿ ಜನರನ್ನ ಮಂಗ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರಾದ ಶರತ್ ಚಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕರ್ನಾಟಕ ಕಾಂಗ್ರೆಸ್ ಸಹ ಕಿಡಿಕಾರಿದೆ. “ಮಾನ್ಯ ಸಂಸದರೇ, ಯಾರ ಕಿವ ಮೇಲೆ ಹೂವ ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಅಂದಹಾಗೆ
◆ನ್ಯೂನ್ಯತೆಗಳಿರುವ ರಸ್ತೆಯನ್ನು ತುರತುರಿಯಲ್ಲಿ ಉದ್ಘಾಟಿಸಿದ್ದೇಕೆ?
◆ಇಂತಹ ಹಲವು ನ್ಯೂನ್ಯತೆಗಳಿಗೆ 80 ಅಪಘಾತಗಳಾದವೇ?
◆ನ್ಯೂನ್ಯತೆಯ ರಸ್ತೆಗೆ ಜನ ಟೋಲ್ ನೀಡಬೇಕೆ?” ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ.

ಒಟ್ಟಿನಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಬಿಜೆಪಿ ಸರ್ಕಾರ ಮತ್ತು ಸಂಸದ ಪ್ರತಾಪ್ ಸಿಂಹರವರು ಹಲವಾರು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಪ್ರತಾಪ್ ಸಿಂಹರವರಂತೂ ವಾರಕ್ಕೊಮ್ಮೆಯಾದರೂ ಫೇಸ್‌ಬುಕ್ ಲೈವ್ ಬಂದು ಕಾಮಗಾರಿ ಕುರಿತು ಮಾತನಾಡುತ್ತಿದ್ದರು. ಆದರೆ ಕಳಪೆ ಮತ್ತು ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಲಾಗಿದೆ, ಕಮಿಷನ್ ಹೊಡೆಯಲಾಗಿದೆ, ಅಧಿಕ ಟೋಲ್ ಮೂಲಕ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳು ಪ್ರತಿನಿತ್ಯ ಕೇಳಿ ಬರುತ್ತಿವೆ. ಈಗಾಗಲೇ 80ಕ್ಕೆ ಹೆಚ್ಚು ಅಪಘಾತಗಳು ಸಂಭವಿಸಿದ್ದು ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಕ್ರೆಡಿಟ್ ಸಹ ಬಿಜೆಪಿಯವರಿಗೆ ಸಲ್ಲಬೇಕೆಲ್ಲವೆ ಎಂಬ ಆಕ್ರೋಶ ಸಹ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...