Homeಮುಖಪುಟವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ವಿಡಿಯೋ| ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1.75 ಕೋಟಿ ದೇಣಿಗೆ ಕೊಟ್ಟ ದಂಪತಿಗೊಂದು ಸೆಲ್ಯೂಟ್‌..

ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

- Advertisement -
- Advertisement -

ಸಮಾಜದಲ್ಲಿ ಒಳ್ಳೆಯವರು ಇನ್ನೂ ಇದ್ದಾರೆಂಬುದಕ್ಕೆ ಇವರೇ ಸಾಕ್ಷಿ. ತಾವು ದುಡಿದ ಹಣವನ್ನು ಒಳ್ಳೆಯ ಕೆಲಸ ಕಾರ್ಯಗಳಿಗೆ  ಬಳಸುವವರು ಅಪರೂಪ. ಎಲ್ಲವನ್ನು ಸದಾ ಲಾಭದ ದೃಷ್ಟಿಯಿಂದಲೇ ನೋಡುವಂತಹ ಈ ಕಾಲ ದಲ್ಲಿ ತನ್ನ ತಂದೆಯ ಹುಟ್ಟೂರಿನಲ್ಲಿ ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ದಂಪತಿಯೊಂದು 1 ಕೋಟಿ 75 ಲಕ್ಷ ಕೊಟ್ಟ ಅಪರೂಪದ ಘಟನೆ ತುಮಕೂರು ಜಿಲ್ಲೆಯ ಕೋರಾ ಗ್ರಾಮದಲ್ಲಿ ಜರುಗಿದೆ. ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಹೊತ್ತಿನಲ್ಲಿ ಸುಸಜ್ಜಿತ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣ ಮಾಡಿಕೊಡಲು ಈ ದಂಪತಿ ಟೊಂಕ ಕಟ್ಟಿನಿಂತಿರುವುದು ಹಲವರಿಗೆ ಮಾದರಿಯಾಗಿದೆ.

ಅವರೇ ಬಳ್ಳಾರಿಯ ಶ್ರೀಹರ್ಷ ಮತ್ತು ಮಮತಗಳಾಗಿದ್ದಾರೆ., ತಮ್ಮ ಹಿಂದಿನ ಮೂರನೇ ತಲೆಮಾರು ಕೋರಾ ಗ್ರಾಮದಲ್ಲಿ ವಾಸವಿತ್ತು ಎಂಬ ಕಾರಣಕ್ಕೆ ಗ್ರಾಮವನ್ನು ಅರಸಿಕೊಂಡು ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಹಣ ನೀಡಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಶ್ರೀಹರ್ಷರವರ ಮಾತುಗಳನ್ನು ಕೇಳಿ

ಸರ್ಕಾರಿ ಶಾಲೆ 1 ಕೋಟಿ 75 ಲಕ್ಷ ದೇಣಿಗೆ ಕೊಟ್ಟ ದಂಪತಿ.

ಹುಟ್ಟೂರಿನಲ್ಲಿ ಸರ್ಕಾರಿ ಶಾಲೆ ಕಟ್ಟಲು 1 ಕೋಟಿ 75 ಲಕ್ಷ ಕೊಟ್ಟ ಶ್ರೀಹರ್ಷ ಮತ್ತು ಮಮತ ದಂಪತಿಗೊಂದು ಸೆಲ್ಯೂಟ್‌ ಇರಲಿ.. ಹರ್ಷರವರ ಮಾತುಗಳನ್ನು ಕೇಳಿ

Posted by Naanu Gauri on Thursday, March 12, 2020

ಶ್ರೀಹರ್ಷ ಮತ್ತು ಮಮತ ದಂಪತಿ ಬಳ್ಳಾರಿ ಜಿಲ್ಲೆಯ ಹಿರೇಕುಂಬಳಕುಂಟೆಯವರು. ಇವರ ವಂಶದ ಮೂರನೇ ತಲೆಮಾರು ತುಮಕೂರು ತಾಲೂಕಿನ ಕೋರಾದಲ್ಲಿ ವಾಸವಾಗಿತ್ತು. ಬಳ್ಳಾರಿಯಿಂದ ಬೆಂಗಳೂರಿಗೆ ಹೋಗಿಬರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವಾಗಲೆಲ್ಲೆ ಕೋರಾ ನೋಡಿದರೆ ನಮ್ಮ ಹಿಂದಿನ ತಲೆಮಾರಿನ ನೆನಪಾಗುತ್ತಿತ್ತು. ರಸ್ತೆಯ ಬದಿಯಲ್ಲೇ ಇರುವ ಶಾಲೆಯನ್ನು ನೋಡುತ್ತಿದ್ದೆವು. ಹಾಗಾಗಿ ಈ ಗ್ರಾಮಕ್ಕೆ ಏನಾದರು ಕೊಡುಗೆ ನೀಡಬೇಕೆಂದು ಅಂದುಕೊಳ್ಳುತ್ತಿದ್ದೆವು. ಹಳೆಯ ತಲೆಮಾರಿನ ಸ್ಮರಣಾರ್ಥ ಗ್ರಾಮಕ್ಕೆ ಅಗತ್ಯವಿದ್ದ ಶಾಲೆ ಕಟ್ಟಿಸಿಕೊಡುವಂತಹ ತೀರ್ಮಾನ ಮಾಡಿದೆವು ಅನ್ನುತ್ತಾರೆ ಶ್ರೀಹರ್ಷ.

ಗ್ರಾಮ ಪಂಚಾಯಿತಿ, ಎಸ್‌ಡಿಎಂಸಿ ಅಧ್ಯಕ್ಷರನ್ನು ಮತ್ತು ಶಾಲೆಯ ಮುಖ್ಯಸ್ಥರನ್ನು ಭೇಟಿ ಮಾಡಿ ಚರ್ಚಿಸಿದೆವು. ನಮ್ಮ ಆಶಯಕ್ಕೆ ಅವರು ಪೂರಕವಾಗಿ ಸ್ಪಂದಿಸಿದರು. ಅದರ ಭಾಗವೇ ಇಂದು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ಉತ್ತಮ ಶಾಲೆ ಕಟ್ಟಡ ನಿರ್ಮಿಸಿಕೊಟ್ಟರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಮೂರು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿದು ಜೂನ್‌ ತಿಂಗಳಿನಲ್ಲಿ ಮಕ್ಕಳು ಇದೇ ಶಾಲೆಯಲ್ಲಿ ಕಲಿಯಬೇಕೆನ್ನುವುದು ನಮ್ಮ ಆಶಯ ಎನ್ನುತ್ತಾರೆ ಶ್ರೀಹರ್ಷ-ಮಮತ ದಂಪತಿ.

ಕೋರಾ ಗ್ರಾಮದ ಶಾಲೆ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಿದೆ. ರಸ್ತೆಯ ಪಕ್ಕದಲ್ಲೇ ಇರುವುದರಿಂದ ಅಪಘಾತ ಮತ್ತು ಪಾಠ ಪ್ರವಚನಕ್ಕೆ ತೊಂದರೆಯಾಗುತ್ತದೆ. ಇಲ್ಲಿ ಈಗಾಗಲೇ ಇಬ್ಬರು ಮಕ್ಕಳು ಅಪಘಾತದಿಂದ ಮೃತ ಪಟ್ಟಿದ್ದಾರೆ. ಇದರಿಂದ ಗ್ರಾಮಸ್ಥರು ಭೀತರಾಗಿದ್ದರು. ಈ ನಡುವೆ ಎನ್.ಎಚ್.4ನ್ನು ಅಷ್ಟಪಥ ರಸ್ತೆಯಾಗಿ ವಿಸ್ತರಿಸುವ ಯೋಜನೆಯಿದೆ. ಈ ಕಾರಣಕ್ಕಾಗಿ ಶಾಲೆಯನ್ನು ಬೇರೆಡೆ ಸ್ಥಳಾಂತರ ಮಾಡಬೇಕಿತ್ತು. ಅದಕ್ಕಾಗಿ ಕೋರಾ ಗ್ರಾಮ ಪಂಚಾಯಿತಿ ಗ್ರಾಮದ ಪೂರ್ವ ಭಾಗದಲ್ಲಿ 30 ಗುಂಟೆ ಜಮೀನು ನೀಡಿತು. ಕಟ್ಟಡ ನಿರ್ಮಾಣ ಮಾಡಿಕೊಡಲು ಶ್ರೀಹರ್ಷ-ಮಮತ ದಂಪತಿ ಮುಂದೆ ಬಂದಿದ್ದಾರೆ. ಇದರಿಂದ ಮಕ್ಕಳಿಗೆ ಉತ್ತಮ ಮೂಲ ಸೌಕರ್ಯ ದೊರೆಯಲಿದೆ ಎನ್ನುತ್ತಾರೆ ಶಾಲೆಯ ಮುಖ್ಯೋಪಾಧ್ಯಾಯರು.

ಶ್ರೀಹರ್ಷ-ಮಮತ ದಂಪತಿ ತಮ್ಮ ತಾಯಿ-ತಂದೆ ಸರ್ವಮಂಗಳ ಹಿ.ಮ.ನಾಗಯ್ಯ ಹೆಸರಿನಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಕಟ್ಟಿಕೊಡಲಿದ್ದಾರೆ. ಅದೂ 1 ಕೋಟಿ 75 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಆಗಲಿದೆ. ಸರ್ಕಾರಿ ಶಾಲಾ ಕಟ್ಟಡ ಎಲ್ ಆಕಾರ ಇರಲಿಲದೆ. ಒಟ್ಟು 14 ಕೊಠಡಿಗಳಿರುವ ಕಟ್ಟಡ ನಿರ್ಮಾಣಗೊಳ್ಳಲಿದೆ. ಫೂರ್ವಾಭಿಮುಖವಾಗಿ ಎರಡು ಅಂತಸ್ತಿನಲ್ಲಿ 10 ಕೊಠಡಿ ಮತ್ತು ದಕ್ಷಿಣಾಭಿಮುಖವಾಗಿ 4 ಕೊಠಡಿ ನಿರ್ಮಾಣಕ್ಕೆ ನೀಲನಕ್ಷೆ ತಯಾರಿಸಲಾಗಿದೆ. ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣಕ್ಕೆ ಈ ದಂಪತಿ ಪಣತೊಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಕೊಠಡಿ ವ್ಯವಸ್ಥೆ ನಿರ್ಮಿಸಿದರೆ ಖಾಸಗಿ ಶಾಲೆಯ ಮಕ್ಕಳಂತೆ ಕಲಿಯುವ ವಾತಾವರಣ ಕಲ್ಪಿಸಿದರೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ವೇದಿಕೆಯೊದಗಿಸಿದಂತಾಗುತ್ತದೆ ಎಂಬುದು ಶ್ರೀಹರ್ಷ-ಮಮತ ಅಭಿಮತ.

ಈಗಿರುವ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆ ಸುಸಜ್ಜಿತವಾಗಿದ್ದರೂ ಅದು ರಸ್ತೆ ವಿಸ್ತರಣೆಯಿಂದ ಸಂಪೂರ್ಣವಾಗಿ ಇಲ್ಲವಾಗಲಿದೆ. ಇದೇ ಶಾಲೆಯಲ್ಲಿ ಹಲೆಯ ವಿದ್ಯಾರ್ಥಿಗಳ ಸಂಘ ಮತ್ತು ಎಸ್.ಡಿ.ಎಂ.ಸಿ ನೇತೃತ್ವದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ಆರಂಭಿಸಲಾಗಿದ್ದು 50 ಮಕ್ಕಳಿದ್ದಾರೆ. ಇಬ್ಬರು ಶಿಕ್ಷಕರಿದ್ದು ಅವರಿಗೆ ಈ ಎರಡು ಸಂಘಗಳಿಂದ ಸಂಬಳ ನೀಡಲಾಗುತ್ತಿದೆ. ಪ್ರಸಕ್ತ ವರ್ಷ 300 ಮಕ್ಕಳು ಶಾಲೆಗೆ ಪ್ರವೇಶ ಮಾಡುವಂತೆ ತಯಾರಿ ನಡೆಯುತ್ತಿದೆ ಎಂದು ಡಮರುಗ ಉಮೇಶ್ ಹೇಳಿದ್ದಾರೆ.

ಮೂವತ್ತು ಗುಂಟೆ ಜಮೀನಿನಲ್ಲಿ ಆಟದ ಮೈದಾನವೂ ಇರಲಿದೆ. ಈ ಕಾರ್ಯಕ್ಕೆ ಮುಖ್ಯಶಿಕ್ಷಕರು, ಗ್ರಾಮ ಪಂಚಾಯಿತಿ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ. ಇಂತಹದ್ದೊಂದು ಕಾರ್ಯದಿಂದ ನಮ್ಮ ಶಾಲೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದು ಹೇಳಿದ್ದಾರೆ. ಆಧುನಿಕತೆಗೆ ತಕ್ಕ ಹಾಗೆ ಈ ಶಾಲೆ ನಿರ್ಮಾಣವಾಗಲಿದ್ದು, ಮಕ್ಕಳ ಕಲಿಕೆ ಅನುಕೂಲವಾಗಲಿದೆ. ಗ್ರಾಮದ ಹೊರಭಾಗದಲ್ಲಿ ಈ ಶಾಲೆ ನಿರ್ಮಾಣ ವಾಗುತ್ತಿದ್ದು, ಪ್ರಶಾಂತ ವಾತಾವರಣ ಇರಲಿದೆ ಎಂದು ಹರ್ಷ ವ್ಯಕ್ತಿಪಡಿಸಿದ್ದಾರೆ. ಇಂತಹದ್ದೊಂದು ಮಾದರಿ ಕಾರ್ಯಕ್ಕೆ ಮುಂದಾದ ಶ್ರೀಹರ್ಷ ಮತ್ತು ಮಮತಾ ದಂಪತಿಗಳಿಗೊಂದು ಸೆಲ್ಯೂಟ್‌ ಇರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....